ETV Bharat / state

ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಗಣರಾಜ್ಯೋತ್ಸವಕ್ಕೆ ಸಿದ್ಧತೆ: ಈ ಬಾರಿ ಸಾರ್ವಜನಿಕರ ಪ್ರವೇಶ ನಿಷೇಧ!

author img

By

Published : Jan 24, 2022, 1:05 PM IST

ಕೊರೊನಾ ಹಿನ್ನೆಲೆ ಸರಳವಾಗಿ ಗಣರಾಜ್ಯೋತ್ಸವ ಆಚರಣೆ ನಡೆಸಲು ಸಕಲ ಸಿದ್ಧತೆ ನಡೆಸಲಾಗಿದೆ. ಸಮಾರಂಭದಲ್ಲಿ 200 ಮಂದಿಗಷ್ಟೇ ಆಸನಗಳ ವ್ಯವಸ್ಥೆ ಕಲ್ಪಿಸಲಾಗಿದ್ದು, ಭಾಗಿಯಾಗುವವರು ಕಡ್ಡಾಯವಾಗಿ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಪಾಲನೆ ಮಾಡಬೇಕಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.

Manekshaw Parade Ground All Set For Republic Day Celebrations
ಮಾಣಿಕ್ ಷಾ ಪರೇಡ್ ಮೈದಾನ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಹಾಗೂ ರೂಪಾಂತರಿ ಒಮಿಕ್ರಾನ್ ಭೀತಿ ಹಿನ್ನೆಲೆ 'ಮಾಣಿಕ್ ಷಾ ಪರೇಡ್' ಮೈದಾನದಲ್ಲಿ ನಡೆಯುವ ಗಣರಾಜ್ಯೋತ್ಸವ ಸಮಾರಂಭಕ್ಕೆ ಈ ಬಾರಿಯು ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ.

ಗಣರಾಜ್ಯೋತ್ಸವ-2022 : ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಪೂರ್ವಭಾವಿ ಸಿದ್ದತೆ

ಕೇಂದ್ರ ಸರ್ಕಾರದ ನಿರ್ದೇಶನದಂತೆ ರಾಜ್ಯದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮವನ್ನ ಸರಳವಾಗಿ ಆಚರಿಸಲು ಸಕಲ ಸಿದ್ಧತೆ ನಡೆಸಲಾಗಿದೆ‌. ಬಿಬಿಎಂಪಿ, ವಾರ್ತಾ ಇಲಾಖೆ, ಮಿಲಿಟರಿ, ಹಾಗೂ ಇತರ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಅಗತ್ಯ ಕ್ರಮಗಳನ್ನ ಕೈಗೊಳ್ಳಲಾಗಿದೆ.

ಇಂದು ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಪೂರ್ವಭಾವಿ ಸಿದ್ದತೆ ವೀಕ್ಷಿಸಿ ನಂತರ ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ, ಪೊಲೀಸ್ ಆಯುಕ್ತ ಕಮಲ್ ಪಂತ್ ಹಾಗೂ ಬೆಂಗಳೂರು ಜಿಲ್ಲಾಧಿಕಾರಿ ಜೆ. ಮಂಜುನಾಥ್ ಸುದ್ದಿಗೋಷ್ಠಿ ನಡೆಸಿದರು.

200 ಮಂದಿಗಷ್ಟೇ ಆಸನಗಳ ವ್ಯವಸ್ಥೆ: ಈ ವೇಳೆ, ಮಾತನಾಡಿದ ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ, ಕೊರೊನಾ ಹಿನ್ನೆಲೆ ಸರಳವಾಗಿ ಗಣರಾಜ್ಯೋತ್ಸವ ಆಚರಣೆ ನಡೆಸಲು ಸಕಲ ಸಿದ್ಧತೆ ನಡೆಸಲಾಗಿದೆ. ಸಮಾರಂಭದಲ್ಲಿ 200 ಮಂದಿಗಷ್ಟೇ ಆಸನಗಳ ವ್ಯವಸ್ಥೆ ಕಲ್ಪಿಸಲಾಗಿದ್ದು, ಭಾಗಿಯಾಗುವವರು ಕಡ್ಡಾಯವಾಗಿ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಪಾಲನೆ ಮಾಡಬೇಕಿದೆ ಎಂದರು.

ಇನ್ನು ಕಾರ್ಯಕ್ರಮದಲ್ಲಿ ಸಾರ್ವಜನಿಕರ ಪ್ರವೇಶ ನಿಷೇಧಿಸಿದ್ದು, ಸೀಮಿತ ಮಂದಿ ಭಾಗಿಯಾಗುವುದರಿಂದ ಕೋವಿಡ್ ಎರಡು ಡೋಸ್ ಕಡ್ಡಾಯ ಮಾಡಿಲ್ಲ. ಪರೇಡ್​​ನಲ್ಲಿ ಭಾಗಿಯಾಗುವವರಿಗೆ ಕಾರ್ಯಕ್ರಮಕ್ಕೂ ಮುನ್ನ ಕೋವಿಡ್ ಟೆಸ್ಟ್ ನಡೆಸಲಾಗುವುದು ಎಂದು ತಿಳಿಸಿದರು.

ಸೂಕ್ತ ಬಂದೋಬಸ್ತ್: ಕಾನೂನು ಸುವ್ಯವಸ್ಥೆ ಬಗ್ಗೆ ಮಾತಾನಾಡಿದ ಪೊಲೀಸ್ ಆಯುಕ್ತ ಕಮಲ್ ಪಂತ್, ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದ ಪ್ರಯುಕ್ತ ಮೈದಾನಕ್ಕೆ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಮೈದಾನದಲ್ಲಿ ಭದ್ರತೆ & ಸುರಕ್ಷತೆಗಾಗಿ 60 ಸಿ.ಸಿ. ಕ್ಯಾಮೆರಾ ವ್ಯವಸ್ಥೆ ಹಾಗೂ 02 ಬ್ಯಾಗೇಜ್ ಸ್ಕ್ಯಾನರ್ ಮತ್ತು ವ್ಯವಸ್ಥಿತ ಸಂಚಾರ ನಿಯಂತ್ರಣ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಎಂದರು.‌

ಯಾವುದೇ ಆಕಸ್ಮಿಕ ವಿಪತ್ತು ಸಂಭವಿಸಿದಲ್ಲಿ ತಕ್ಷಣ ಪ್ರತಿಕ್ರಿಯಿಸಲು ಅಗತ್ಯವಿರುವಷ್ಟು ಆ್ಯಂಬುಲೆನ್ಸ್‌ಗಳನ್ನು ವೈದ್ಯಕೀಯ ಹಾಗೂ ವೈದ್ಯಕೀಯೇತರ ಸಿಬ್ಬಂದಿ ನಿಯೋಜಿಸಿಕೊಳ್ಳಲಾಗಿದೆ. ಹಾಗೂ ನಗರದ ಹಲವು ಆಸ್ಪತ್ರೆಗಳನ್ನು ಗುರುತಿಸಿ, ಸಾಕಷ್ಟು ಸಂಖ್ಯೆಯಲ್ಲಿ ಹಾಸಿಗೆಗಳನ್ನು ಕಾಯ್ದಿರಿಸಲಾಗಿದೆ. ಆಕಸ್ಮಿಕ ಬೆಂಕಿ ಅವಘಡಗಳನ್ನು ನಿಭಾಯಿಸಲು ಅಗ್ನಿಶಾಮಕ ವಾಹನಗಳೊಂದಿಗೆ ಸಾಕಷ್ಟು ಸಿಬ್ಬಂದಿ ನಿಯೋಜಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಗುರುತಿನ ಚೀಟಿ ಕಡ್ಡಾಯ: ಕಾರ್ಯಕ್ರಮವನ್ನು ವೀಕ್ಷಿಸಲು ಆಗಮಿಸುವ ಅತೀಗಣ್ಯ, ಗಣ್ಯ ಹಾಗೂ ಇತರ ಆಹ್ವಾನಿತರಿಗೆ 200 ಆಸನಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಇನ್ನು ಆಗಮಿಸುವವರು ಆಹ್ವಾನ ಪತ್ರಿಕೆಯೊಂದಿಗೆ ಕಡ್ಡಾಯವಾಗಿ ಅರ್ಹ ಗುರುತಿನ ಚೀಟಿ ತರಬೇಕು ಎಂದರು.

ಪರೇಡ್​​ನಲ್ಲಿ ಲೆಫ್ಟಿನೆಂಟ್ ಕರ್ನಲ್ ಆಶಿಸ್ ಚನ್ನಪ್ಪ ಭಾಗಿ: ಈ ಬಾರಿಯ(2022) ಗಣರಾಜ್ಯೋತ್ಸವ ಪರೇಡ್‌ನಲ್ಲಿ ಲೆಫ್ಟಿನೆಂಟ್ ಕರ್ನಲ್ ಆಶಿಸ್ ಚನ್ನಪ್ಪ ಅವರ ನಾಯಕತ್ವ ಮತ್ತು ಸಹಾಯಕ ನಾಯಕತ್ವ ಮೇಜರ್‌ ಲಲಿತ್‌ಕುಮಾರ್ ಅವರ ನೇತೃತ್ವದಲ್ಲಿ ಆಂಧ್ರಪ್ರದೇಶದ ವಿಶೇಷ ತುಕಡಿ ಒಳಗೊಂಡಂತೆ ಒಟ್ಟು 16 ತುಕಡಿಗಳು, 5 ವಾದ್ಯ ವೃಂದ 2 ಡಿ ಸ್ಟಾಟ್, 4 ಕ್ಯೂ, ಆರ್.ಟಿ, 2 ಆರ್.ಐ.ವಿ. ಮತ್ತು 6 ಅಶ್ವಗಳ ತಂಡಗಳು ಸೇರಿ ಪರೇಡ್‌ನಲ್ಲಿ 29 ಅಧಿಕಾರಿಗಳು ಮತ್ತು 464 ಸಿಬ್ಬಂದಿ, ಕವಾಯತಿನಲ್ಲಿ ಭಾಗವಹಿಸಲಿದ್ದಾರೆ. ಬೆಳಗ್ಗೆ 8:58 ಕ್ಕೆ ರಾಜ್ಯಪಾಲರು ಧ್ವಜಾರೋಹಣ ನೆರವೇರಿಸಲಿದ್ದಾರೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ಬಂದೋಬಸ್ತ್ ಗಾಗಿ 1400 ಸಿಬ್ಬಂದಿ ನೇಮಕ: ಬಂದೋಬಸ್ತ್, ಕರ್ತವ್ಯಕ್ಕೆ ಬೆಂಗಳೂರು ನಗರದ ಸಿವಿಲ್ ಹಾಗೂ ಸಂಚಾರ ಪೊಲೀಸ್ ಸೇರಿದಂತೆ ಒಟ್ಟು 11 ಡಿಸಿಪಿ, 20 ಎಸಿಪಿ, 60 ಪೊಲೀಸ್ ಇನ್ಸ್‌ಪೆಕ್ಟರ್, 125 ಪೊಲೀಸ್ ಸಬ್ ಇನ್ಸ್​ಪೆಕ್ಟರ್ ಒಳಗೊಂಡಂತೆ ಒಟ್ಟು 1,400 ಸಿಬ್ಬಂದಿ ನೇಮಕ ಮಾಡಲಾಗಿದೆ.‌

ಇತರ ಅಧಿಕಾರಿ, ಸಿಬ್ಬಂದಿ, ಕೆಎಸ್​​ಆರ್​​ಪಿ, ಸಿಎಆರ್, ಹೋಂ ಗಾರ್ಡ್ಸ್, ಟ್ರಾಫಿಕ್ ವಾರ್ಡನ್ಸ್, ಸೇರಿದಂತೆ ಎಲ್ಲ ಘಟಕಗಳಿಂದ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಸಾಕಷ್ಟು ಸಂಖ್ಯೆಯಲ್ಲಿ ನಿಯೋಜಿಸಲಾಗಿದೆ ಎಂದ ಆಯುಕ್ತ ಕಮಲ್ ಪಂತ್ ತಿಳಿಸಿದರು‌.

ಇದಲ್ಲದೇ ಮುಂಜಾಗ್ರತಾ ಕ್ರಮವಾಗಿ ಅಗ್ನಿಶಾಮಕ ವಾಹನಗಳು, ಆ್ಯಂಬುಲೆನ್ಸ್ ವಾಹನಗಳು, ಕ್ಷಿಪ್ರ ಕಾರ್ಯಾಚರಣೆ ಪಡೆ (ಕ್ಯೂ.ಆರ್.ಟಿ), ಡಿ-ಸ್ಪಾಟ್, ಮತ್ತು ಆರ್.ಐ.ವಿ.ಗಳನ್ನು ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಲಾಗಿರುತ್ತದೆ. ಗರುಡ ಪಡೆ ಸನ್ನದ್ಧ ಸ್ಥಿತಿಯಲ್ಲಿ ಕಾಯ್ದಿರಿಸಲಾಗಿದೆ ಎಂದರು.

ಮಣಿಕ್ ಷಾ ಮೈದಾನದ ಸುತ್ತಮುತ್ತ ಮಾರ್ಗ ಬದಲಾವಣೆ: ಬೆಳಗ್ಗೆ 08-30 ಗಂಟೆಯಿಂದ ಬೆಳಗ್ಗೆ 10-30ರ ವರೆಗೆ ಕಬ್ಬನ್ ರಸ್ತೆಯಲ್ಲಿ ಬಿ.ಆರ್.ವಿ ಜಂಕ್ಷನ್‌ನಿಂದ ಕಾಮರಾಜ ರಸ್ತೆ ಜಂಕ್ಷನ್‌ವರೆಗೆ ಎರಡೂ ದಿಕ್ಕುಗಳಲ್ಲಿನ ಸಂಚಾರವನ್ನು ನಿರ್ಬಂಧಿಸಲಾಗಿದ್ದು, ಪರ್ಯಾಯ ಮಾರ್ಗಗಳಲ್ಲಿ ಜನರು ಸಂಚರಿಸುವ ವ್ಯವಸ್ಥೆ ಮಾಡಲಾಗಿದೆ.

  • ಇನ್ ಫೆಂಟ್ರಿ ರಸ್ತೆಯಲ್ಲಿ ಮಣಿಪಾಲ್‌ ಸೆಂಟರ್‌ ಕಡೆಗೆ ಸಂಚರಿಸುವ ವಾಹನಗಳು ನೇರವಾಗಿ ಇನ್‌ಫಂಟಿ ರಸ್ತೆ– ಸಫೀನಾ ಪ್ಲಾಜಾ– ಎಡ ತಿರುವು ಪಡೆದು ಮೈನ್‌ಗಾರ್ಡ್ ರಸ್ತೆ- ಆಲೀಸ್ ಸರ್ಕಲ್- ಡಿಸ್ಪೆನ್ಸರಿ ರಸ್ತೆ- ಕಾಮರಾಜ ರಸ್ತೆ ಮತ್ತು ಡಿಕನ್ಸನ್ ರಸ್ತೆ ಜಂಕ್ಷನ್ – ಬಲಕ್ಕೆ ತಿರುವು ಪಡೆದು ಕಾಮರಾಜ ರಸ್ತೆ - ಕಬ್ಬನ್ ರಸ್ತೆ ಮತ್ತು ಕಾಮರಾಜ ರಸ್ತೆ ಜಂಕ್ಷನ್ ನಲ್ಲಿ ಎಡಕ್ಕೆ ತಿರುವು ಪಡೆದು, ಕಬ್ಬನ್ ರಸ್ತೆ ಮುಖಾಂತರ ಮಣಿಪಾಲ್ ಸೆಂಟರ್ ಕಡೆಗೆ ಸಾಗಬಹುದಾಗಿದೆ.
  • ಕಬ್ಬನ್ ರಸ್ತೆಯಲ್ಲಿ, ಮಣಿಪಾಲ್ ಸೆಂಟರ್ ಜಂಕ್ಷನ್‌ನಿಂದ ಬಿ.ಆರ್‌.ವಿ. ಜಂಕ್ಷನ್ ಕಡೆಗೆ ಬರುವ ವಾಹನಗಳ ಸಂಚಾರವನ್ನು ಮಣಿಪಾಲ್ ಸೆಂಟರ್ ಬಳಿ ನಿರ್ಬಂಧಿಸಿದ್ದು, ಆ ವಾಹನಗಳು ವೆಬ್ಸ್ ಜಂಕ್ಷನ್ ಬಳಿ ಬಲ ತಿರುವು ಪಡೆದು ಎಂ.ಜಿ.ರಸ್ತೆಯ ಮುಖಾಂತರ ಮೆಯೋಹಾಲ್, ಕಾವೇರಿ ಎಂಪೋರಿಯಂ, ಅನಿಲ್‌ಕುಂಬ್ಳೆ ವೃತ್ತದಲ್ಲಿ ಬಲ ತಿರುವು ಪಡೆದು ಮುಂದೆ ಸಾಗಬಹುದು.
  • ಅನಿಲ್‌ ಕುಂಬ್ಳೆ ವೃತ್ತದಿಂದ ಕಬ್ಬನ್‌ರಸ್ತೆ ಕಡೆಗೆ ಬರುವ ವಾಹನಗಳು ನೇರವಾಗಿ ಸೆಂಟ್ರಲ್ ಸ್ಟ್ರೀಟ್ ರಸ್ತೆಯಲ್ಲಿ ಸಾಗಿ, ಬಲಕ್ಕೆ ತಿರುವು ಪಡೆದು-ಇನ್ ಫಂಟ್ರಿ ರಸ್ತೆ ಸಫೀನಾ ಪ್ಲಾಜಾ- ಎಡಕ್ಕೆ ತಿರುವು ಪಡೆದು ಮೈನ್‌ಗಾರ್ಡ್ ರಸ್ತೆ- ಆಲಿ ಸರ್ಕಲ್ - ಡಿಸ್ಪೆನ್ಸರಿ ರಸ್ತೆ- ಕಾಮರಾಜ ರಸ್ತೆ ಮತ್ತು ಡಿಕನ್ಸನ್ ರಸ್ತೆ ಜಂಕ್ಷನ್ – ಬಲಕ್ಕೆ ತಿರುವು ಪಡೆದು ಕಾಮರಾಜ ರಸ್ತೆ- ಕಬ್ಬನ್ ರಸ್ತೆ ಮತ್ತು ಕಾಮರಾಜ ರಸ್ತೆ ಜಂಕ್ಷನ್ ನಲ್ಲಿ ಎಡಕ್ಕೆ ತಿರುವು ಪಡೆದು, ಕಬ್ಬನ್ ರಸ್ತೆ ಮುಖಾಂತರ ಮಣಿಪಾಲ್ ಸೆಂಟರ್‌ ಕಡೆಗೆ ಸಾಗ ಬಹುದಾಗಿದೆ.

ವಾಹನ ನಿಲುಗಡೆ ನಿಷಿದ್ಧ ರಸ್ತೆಗಳು

  1. ಸೆಂಟ್ರಲ್ ಸ್ಟ್ರೀಟ್, ಅನಿಲ್ ಕುಂಬ್ಳೆ ವೃತ್ತದಿಂದ ಶಿವಾಜಿನಗರ ಬಸ್ ನಿಲ್ದಾಣದ ವರೆಗೆ
  2. ಕಬ್ಬನ್ ರಸ್ತೆ, ಸಿಟಿಒ ವೃತ್ತದಿಂದ ಕೆಆರ್​​ ರಸ್ತೆ ಮತ್ತು ಕಬ್ಬನ್ ರಸ್ತೆ ಜಂಕ್ಷನ್ ವರೆಗೆ
  3. ಎಂಜಿ ರಸ್ತೆ, ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದ ವರೆಗೆ

ಇದನ್ನೂ ಓದಿ: ಲಸಿಕೆ ಹಾಕಿಸಿಕೊಳ್ಳದವರಿಗೆ ಕೋವಿಡ್​​ನಿಂದ ಹೆಚ್ಚು ನಷ್ಟ: WHO ಎಚ್ಚರಿಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.