ETV Bharat / state

ಯಾವುದೇ ಎಟಿಎಂನಲ್ಲೂ ಇಲ್ಲ ಸುರಕ್ಷತೆ: ಸ್ಯಾನಿಟೈಸರ್​ ಇಡಲು ಹೆಚ್​ಡಿಕೆ ಆಗ್ರಹ - ಹೆಚ್​ಡಿಕೆ

ಕೊರೋನಾ ವೈರಸ್ ಬಗ್ಗೆ ಮುಂಜಾಗ್ರತಾ ಕ್ರಮಗಳನ್ನು ಸರ್ಕಾರ ತಕ್ಷಣವೇ ತೆಗೆದುಕೊಳ್ಳಬೇಕು. ಯಾವುದೇ ಎಟಿಎಂಗಳಲ್ಲಿ ಸುರಕ್ಷತೆ ಇಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್​ ಮೂಲಕ ಆತಂಕ ವ್ಯಕ್ತಪಡಿಸಿದ್ದಾರೆ.

HDK tweet
ಹೆಚ್​ಡಿಕೆ
author img

By

Published : Mar 21, 2020, 5:25 PM IST

ಬೆಂಗಳೂರು: ರಾಜ್ಯದ ಯಾವುದೇ ಎಟಿಎಂನಲ್ಲೂ ಸುರಕ್ಷತಾ ಕ್ರಮ ಇಲ್ಲ. ದಿನನಿತ್ಯ ಹಣ ಡ್ರಾ ಮಾಡಲು ನೂರಾರು ಗ್ರಾಹಕರು ಎಟಿಎಂಗಳಿಗೆ ಬರುತ್ತಾರೆ. ಕೊರೊನಾ ವೈರಸ್ ಬಗ್ಗೆ ಮುಂಜಾಗ್ರತಾ ಕ್ರಮ ತಕ್ಷಣವೇ ತೆಗೆದುಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

HDK tweet
ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್​

ಈ ಕುರಿತು ಟ್ವೀಟ್ ಮಾಡಿರುವ ಅವರು, ಪ್ರತಿ ಎಟಿಎಂ ಕೇಂದ್ರಗಳಲ್ಲಿ ಹ್ಯಾಂಡ್ ಸ್ಯಾನಿಟೈಸರ್ ಕಡ್ಡಾಯವಾಗಿ ಇಡಲು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ದುರದೃಷ್ಟವಶಾತ್ ಕೊರೊನಾ ಸೋಂಕಿತರು ಹಣ ಡ್ರಾ ಮಾಡಿದರೆ ಅಮಾಯಕರು ಕೊರೊನಾಗೆ ಬಲಿ ಆಗುವ ಸಾಧ್ಯತೆಗಳಿವೆ. ಎಲ್ಲಾ ಬ್ಯಾಂಕ್​ಗಳು ತುರ್ತಾಗಿ ಎಟಿಎಂಗಳಲ್ಲಿ ಸಮರೋಪಾದಿಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸರ್ಕಾರ ಈ ಬಗ್ಗೆ ಸ್ಪಷ್ಟ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.