ETV Bharat / state

ಕಾನೂನುಬಾಹಿರ ಗಣಿಗಾರಿಕೆಗೆ ಅವಕಾಶವಿಲ್ಲ, ಕಲ್ಲು ಮಣ್ಣು ವಿಚಾರದಲ್ಲಿ ಸಾರ್ವಜನಿಕರಿಗೆ ತೊಂದರೆ ಆಗಬಾರದು: ಸಿಎಂ ಸಿದ್ದರಾಮಯ್ಯ - ಮರಳು ಗಣಿಗಾರಿಕೆ

ಕೆಂಪು ಕಲ್ಲು ಮತ್ತು ಮಣ್ಣು ಸಂಬಂಧ ಸಾರ್ವಜನಿಕರಿಗೆ ತೊಂದರೆಯಾಗಬಾರದು. ಜೊತೆಗೆ ಕಾನೂನುಬಾಹಿರ ಗಣಿಗಾರಿಕೆಗೆ ಅವಕಾಶ ನೀಡಲ್ಲ ಎಂದು ಸಿಎಂ ಸೂಚಿಸಿದರು.

ಸಿಎಂ ಸಿದ್ದರಾಮಯ್ಯ, CM Siddarmaiah
ಸಿಎಂ ಸಿದ್ದರಾಮಯ್ಯ
author img

By ETV Bharat Karnataka Team

Published : Oct 6, 2023, 6:46 AM IST

ಬೆಂಗಳೂರು: ಕಾನೂನುಬಾಹಿರ ಗಣಿಗಾರಿಕೆಗೆ ಅವಕಾಶ ನೀಡುವುದಿಲ್ಲ. ಕೆಂಪು ಕಲ್ಲು ಹಾಗೂ ಮಣ್ಣಿನ ವಿಚಾರದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗಕೂಡದು ಎಂದು ಮುಖ್ಯಮಂತ್ರಿಗಳು ಸೂಚಿಸಿದರು. ಉಡುಪಿ ಜಿಲ್ಲೆಯ ವ್ಯಾಪ್ತಿಯಲ್ಲಿ ಮರಳು, ಕೆಂಪುಕಲ್ಲು ಗಣಿಗಾರಿಕೆಗೆ ಸಂಬಂಧಿಸಿದಂತೆ ನಡೆದ ಸಭೆಯಲ್ಲಿ ಮಾತನಾಡಿದ ಸಿಎಂ, ರಾಜ್ಯ ಪರಿಸರ ಪ್ರಭಾವ ಮೌಲ್ಯ ಮಾಪನ ಪ್ರಾಧಿಕಾರ ಅನುಮತಿ ನೀಡಿದ ಬಳಿಕವೇ ಮರಳು ಬ್ಲಾಕ್​​ಗಳಿಗೆ ಅನುಮತಿ ಪತ್ರ ದೊರೆಯುತ್ತದೆ. ತಿಂಗಳಿಗೊಮ್ಮೆ ಪ್ರಾಧಿಕಾರದ ಸಭೆ ನಡೆಯುವುದರಿಂದ ವಿಳಂಬವಾಗುತ್ತಿದೆ. ಈ ಪ್ರಕ್ರಿಯೆಗೆ ವೇಗ ನೀಡಬೇಕೆಂದು ಪ್ರಾಧಿಕಾರದ ಆಯುಕ್ತರಿಗೆ ಮುಖ್ಯಮಂತ್ರಿಗಳು ಸೂಚಿಸಿದರು.

ಹೊಸ ಮರಳು ನೀತಿ 2020 ಅನ್ನು ಡಿಸೆಂಬರ್ 1, 2021 ರಂದು ಜಾರಿಗೆ ತಂದಿದ್ದು, ಸಣ್ಣ ಬ್ಲಾಕ್​​ಗಳಿವೆ. ಕಟ್ಟಡ ನಿರ್ಮಾಣ ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರ ಜೊತೆಗೆ ಸಾಂಪ್ರದಾಯಿಕವಾಗಿ ಮರಳು ತೆಗೆಯುವವರ ಹಿತಾಸಕ್ತಿಯನ್ನೂ ಕಾಪಾಡಬೇಕಿದೆ. ಕಾರ್ಮಿಕರಿಗೆ ಸಮಸ್ಯೆಯಾಗದಂತೆ ತೀರ್ಮಾನ ತೆಗೆದುಕೊಳ್ಳಬೇಕೆಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ತಿಳಿಸಿದರು.

Non CRZ ಪ್ರದೇಶದಲ್ಲಿ ಟೆಂಡರ್ ಕಂ ಹರಾಜು ಮೂಲಕ ಗುತ್ತಿಗೆ ಮಂಜೂರು ಮಾಡಲು 39 ಮರಳು ಬ್ಲಾಕ್​​ಗಳನ್ನು ಗುರುತಿಸಲಾಗಿದೆ. ಈ ಪೈಕಿ 9 ಬ್ಲಾಕ್​​ಗಳ ಟೆಂಡರ್ ಪ್ರಕ್ರಿಯೆ ಯಶಸ್ವಿಯಾಗಿದ್ದು, 30 ಮರಳು ಬ್ಲಾಕ್​​ಗಳಿಗೆ ಮರುಹರಾಜು ಪ್ರಕ್ರಿಯೆ ಶೀಘ್ರ ಕೈಗೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸಭೆಗೆ ಮಾಹಿತಿ ಒದಗಿಸಿದರು.

8 ಲಕ್ಷ ಟನ್ ಮರಳು ಅಗತ್ಯವಿದೆ. ಜೆಲ್ಲಿ, ಕೆಂಪು ಕಲ್ಲಿನ ಸಮಸ್ಯೆ ಇದೆ. ಮಂಗಳೂರು, ಉಡುಪಿಯಲ್ಲಿನ ಹವಾಗುಣಕ್ಕಾಗಿ ಗೃಹನಿರ್ಮಾಣಕ್ಕೆ ಬಳಕೆಯಾಗುತ್ತದೆ. ಇದರಲ್ಲಿ ಬಾಕ್ಸೈಟ್ ಇದೆ ಎಂಬ ಕಾರಣಕ್ಕೆ ಕೈಗಾರಿಕೆಗಳು ಇದನ್ನು ಬಳಸುತ್ತವೆ. ಜಿಲ್ಲೆಯಿಂದ ಹೊರಗೆ ಕಳಿಸುವುದು ಬೇಡ ಎಂಬ ಅಭಿಪ್ರಾಯ ಜನರಲ್ಲಿದೆ. ಜಿಲ್ಲಾಧಿಕಾರಿಗಳ ಮೂಲಕ ಮರಳು ಗಣಿಗಾರಿಕೆಗೆ ಪರವಾನಗಿ ನೀಡಲಿ. ಮನೆ ಕಟ್ಟಲು ಅಗತ್ಯವಿರುವ ಸೈಜುಗಲ್ಲುಗಳಿಗೆ ಗಣಿಗಾರಿಕೆ ಮಾಡಲು ಕಾಯ್ದೆಯ ಸರಳೀಕರಣ ಮಾಡಿ ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಬೇಕು ಎಂದು ಸಭೆಯಲ್ಲಿ ಮನವಿ ಮಾಡಲಾಯಿತು.

ಕೆಂಪುಕಲ್ಲಿನ( Laterite) ಗಣಿಗಾರಿಕೆಗೆ 71 ಕಾರ್ಯಾದೇಶಗಳನ್ನು ಒಂದು ವರ್ಷದ ಅವಧಿಗೆ ನೀಡಲಾಗಿದೆ. ಖನಿಜವನ್ನು ಬಾಕ್ಸೈಟ್ ಆಗಿ ವಿಂಗಡಿಸಿರುವುದರಿಂದ ಮಾಚ್​ 17, 2023ರಂದು ಕರ್ನಾಟಕ ಉಪಖನಿಜ ರಿಯಾಯಿತಿ ನಿಯಮಗಳು 1994ಗೆ ತಿದ್ದುಪಡಿ ತಂದು ತಿದ್ದುಪಡಿ ನಿಯಮ 2023 ಜಾರಿಗೊಳಿಸಲಾಗಿದೆ. ಹೀಗಾಗಿ ಲ್ಯಾಟರೈಟ್ ಖನಿಜಕ್ಕೆ ಕಾರ್ಯಾದೇಶ ನೀಡುವುದನ್ನು ಕೈಬಿಡಲಾಗಿದೆ ಎಂದು ಸಭೆಯ ಗಮನಕ್ಕೆ ತರಲಾಯಿತು.

ಸ್ಥಳೀಯ ಜಿಲ್ಲೆಗೆ ಅಗತ್ಯವಿರುವಂತೆ ಕಾಯ್ದೆಗೆ ತಿದ್ದುಪಡಿ ಮಾಡಬಹುದು. Laterite ಸಂಬಂಧಿಸಿದಂತೆ ಹಿಂದಿನ ಸರ್ಕಾರ ಮಾಡಲಾಗಿರುವ ತಿದ್ದುಪಡಿಯನ್ನು ಪುನಃ ತಿದ್ದುಪಡಿ ಮಾಡಿ ವಾಹನಗಳಿಗೆ ಅನುಮತಿ ನೀಡಬಹುದು. ಕ್ರಶಿಂಗ್ ಮಾಡಲಾದ ಮಣ್ಣನ್ನು ಜಿಲ್ಲೆಯೊಳಗಿನ ಬಳಕೆಗೆ ಮಾತ್ರ ಸೀಮಿತಗೊಳಿಸಬೇಕು ಎಂದು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಯಿತು.

ಇದನ್ನೂ ಓದಿ: ನಮ್ಮ ಸರ್ಕಾರದ ಅವಧಿಯಲ್ಲಿ ಜಾತಿ ಗಣತಿ ವರದಿ ಪೂರ್ಣವಾಗಿರಲಿಲ್ಲ: ಸಿಎಂ ಸಿದ್ದರಾಮಯ್ಯ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.