ETV Bharat / state

ಸಾಕು ಪ್ರಾಣಿಗಳಿಗೆ ಅಪಾರ್ಟ್‌ಮೆಂಟ್‌ಗಳಲ್ಲಿ ನಿರ್ಬಂಧ.. ಉತ್ತರಿಸಿಲು ಕಾಲಾವಕಾಶ ಕೇಳಿದ ಸರ್ಕಾರ!! - ಅಪಾರ್ಟ್ ಮೆಂಟ್ ಗಳಲ್ಲಿ ಸಾಕು ಪ್ರಾಣಿಗಳಿಗೆ ನಿರ್ಬಂಧ

ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿ 2015ರಲ್ಲಿ ಹೊರಡಿಸಿರುವ ಮಾರ್ಗಸೂಚಿಗಳು ಹಾಗೂ ಶ್ವಾನ ಅಧಿನಿಯಮ 2001ಕ್ಕೆ ಬದ್ಧರಾಗಿರುವಂತೆ ಸರ್ಕಾರ, ಬಿಬಿಎಂಪಿಗೆ ನಿರ್ದೇಶನ ನೀಡಬೇಕು..

High Court
High Court
author img

By

Published : Jun 24, 2020, 4:38 PM IST

ಬೆಂಗಳೂರು : ಬಾಡಿಗೆದಾರರು ಮತ್ತು ಭೋಗ್ಯದಾರರು ತಮ್ಮೊಂದಿಗೆ ತಮ್ಮ ಸಾಕು ಪ್ರಾಣಿಗಳನ್ನು ತರುವಂತಿಲ್ಲ ಎಂಬ ರೆಸಿಡೆಂಟ್ ವೆಲ್ಫೇರ್ ಅಸೋಸಿಯೇಷನ್ ಹಾಗೂ ಅಪಾರ್ಟ್ ಮೆಂಟ್ ಓನರ್ಸ್ ಅಸೋಸಿಯೇಷನ್‌ಗಳ ಧೋರಣೆ ಪ್ರಶ್ನಿಸಿ ಸಲ್ಲಿಸಿರುವ ಪಿಐಎಲ್ ಅರ್ಜಿಗೆ ಉತ್ತರಿಸಲು ಕಾಲಾವಕಾಶ ನೀಡುವಂತೆ ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮನವಿ ಮಾಡಿದೆ.

ಸಾಕು ಪ್ರಾಣಿಗಳನ್ನು ಜೊತೆಗಿಟ್ಟುಕೊಳ್ಳಲು ನಿಷೇಧಿಸಿರುವ ಅಪಾರ್ಟ್‌ಮೆಂಟ್ ಮಾಲೀಕರ ಕ್ರಮ ಪ್ರಶ್ನಿಸಿ ಕಂಪ್ಯಾಷನ್ ಅನ್‍ಲಿಮಿಟೆಡ್ ಪ್ಲಸ್ ಆ್ಯಕ್ಷನ್ (ಕ್ಯುಪಾ) ಸಂಘಟನೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಸರ್ಕಾರದ ಪರ ವಕೀಲರು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಎರಡು ವಾರ ಕಾಲಾವಕಾಶ ಕೋರಿದ್ದರಿಂದ ಪೀಠ ವಿಚಾರಣೆ ಮುಂದೂಡಿತು.

ಅರ್ಜಿದಾರರ ಆರೋಪ : ನಾಯಿ, ಬೆಕ್ಕು ಸೇರಿ ಸಾಕು ಪ್ರಾಣಿಗಳ ಆರೈಕೆ ಮತ್ತು ಪಾಲನೆ ಕುರಿತು ಸಾಕುದಾರರು, ಅಪಾರ್ಟ್ಮೆಂಟ್, ಮನೆ ಮಾಲೀಕರು ಹಾಗೂ ಸ್ಥಳೀಯ ಆಡಳಿತ ಸಂಸ್ಥೆಗಳಿಗೆ ಸೀಮಿತವಾಗಿ ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿ 2015ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಿದೆ. ಹಾಗಿದ್ದರೂ ಸಾಕು ಪ್ರಾಣಿಗಳ ವಿಚಾರವಾಗಿ ರೆಸಿಡೆಂಟ್ ವೆಲ್ಫೇರ್ ಅಸೋಸಿಯೇಷನ್, ಅಪಾರ್ಟ್‌ಮೆಂಟ್ ಓನರ್ಸ್ ಅಸೋಸಿಯೇಷನ್‍ನವರು, ಬಾಡಿಗೆದಾರರು ಮತ್ತು ಭೋಗ್ಯದಾರರಿಗೆ ಅನಾವಶ್ಯಕ ನಿರ್ಬಂಧ ಹೇರುತ್ತಿದ್ದಾರೆ. ಇದು ಕಾನೂನು ಬಾಹಿರ ಹಾಗೂ ಪ್ರಾಣಿಗಳ ಹಕ್ಕುಗಳಿಗೆ ವಿರುದ್ಧವಾಗಿದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.

ಅಲ್ಲದೇ ಸಾಕು ಪ್ರಾಣಿಗಳ ವಿಚಾರದಲ್ಲಿ, ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿ 2015ರಲ್ಲಿ ಹೊರಡಿಸಿರುವ ಮಾರ್ಗಸೂಚಿಗಳು ಹಾಗೂ ಶ್ವಾನ ಅಧಿನಿಯಮ 2001ಕ್ಕೆ ಬದ್ಧರಾಗಿರುವಂತೆ ಸರ್ಕಾರ, ಬಿಬಿಎಂಪಿಗೆ ನಿರ್ದೇಶನ ನೀಡಬೇಕು. ಈ ಸಂಬಂಧದ ದೂರುಗಳ ನಿವಾರಣಾ ವ್ಯವಸ್ಥೆ ರೂಪಿಸುವಂತೆ ಎಲ್ಲಾ ರೆಸಿಡೆಂಟ್ ವೆಲ್ಫೇರ್ ಅಸೋಸಿಯೇಷನ್ ಹಾಗೂ ಅಪಾರ್ಟ್ ಮೆಂಟ್ ಓನರ್ಸ್ ಅಸೋಸಿಯೇಷನ್‍ಗಳಿಗೆ ಸೂಚಿಸುವಂತೆ ಬಿಬಿಎಂಪಿಗೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.