ETV Bharat / state

ಉಪಚುನಾವಣೆ ನಡೆಯುವ ಕ್ಷೇತ್ರಗಳಿಗೆ ಬಜೆಟ್​ನಲ್ಲಿಲ್ಲ ವಿಶೇಷ ಪ್ಯಾಕೇಜ್ - Karnataka budget 2021 news

ಬಜೆಟ್​ಗೆ ಸಂಬಂಧಿಸದಂತೆ ಎಲ್ಲ ಚರ್ಚೆ ಮುಗಿದಿದೆ. ಶಿವಮೊಗ್ಗದಿಂದ ವಾಪಸ್‌‌ ಬಂದು ಬಜೆಟ್ ಸಿದ್ಧತೆ ಅಂತಿಮಗೊಳಿಸುತ್ತೇನೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು. ಇದೇ ವೇಳೆ ಉಪಚುನಾವಣೆ ಇರುವ ಕ್ಷೇತ್ರಗಳಿಗೆ ಈ ಬಾರಿಯ ಬಜೆಟ್​ನಲ್ಲಿ ವಿಶೇಷ ಪ್ಯಾಕೇಜ್​ಗಳನ್ನು ಘೋಷಣೆ ಮಾಡಲ್ಲವೆಂದು ಸಿಎಂ ಹೇಳಿದ್ದಾರೆ.

ಇಂದು ಸಿಎಂ ಯಡಿಯೂರಪ್ಪ ಶಿವಮೊಗ್ಗ ಪ್ರವಾಸ  Special package for the byelection Constituency in Budget
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
author img

By

Published : Feb 28, 2021, 11:27 AM IST

ಬೆಂಗಳೂರು: ಉಪಚುನಾವಣೆ ನಡೆಯುವ ಕ್ಷೇತ್ರಗಳಿಗೆ ಬಜೆಟ್​ನಲ್ಲಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ತವರು ಜಿಲ್ಲೆ ಶಿವಮೊಗ್ಗದಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಿಎಂ ಶಿವಮೊಗ್ಗ ಜಿಲ್ಲಾ ಪ್ರವಾಸಕ್ಕೆ ತೆರಳಿದರು. ‌ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ತೆರಳುವ ಮುನ್ನ ಅಧಿಕೃತ ನಿವಾಸ ಕಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗಕ್ಕೆ ಹೊರಟಿದ್ದೇನೆ. ಸೊರಬ ತಾಲೂಕಿನಲ್ಲಿ ಕಾರ್ಯಕ್ರಮ ಇದೆ. ಸೊರಬದಿಂದ ಶಿವಮೊಗ್ಗಕ್ಕೆ ಬಂದು ಸಮಾರಂಭದಲ್ಲಿ ಭಾಗವಹಿಸಿ ನಾಳೆ ವಾಪಸ್ ಬರುತ್ತೇನೆ. ಬಜೆಟ್​ಗೆ ಸಂಬಂಧಿಸದಂತೆ ಎಲ್ಲ ಚರ್ಚೆ ಮುಗಿದಿದೆ. ಶಿವಮೊಗ್ಗದಿಂದ ವಾಪಸ್‌‌ ಬಂದು ಬಜೆಟ್ ಸಿದ್ಧತೆ ಅಂತಿಮಗೊಳಿಸುತ್ತೇನೆ ಎಂದು ತಿಳಿಸಿದರು.

ಇದನ್ನೂ ಓದಿ: ಸ್ಮಾರ್ಟ್ ಸಿಟಿ ಕಾಮಗಾರಿಗಳು ಅವೈಜ್ಞಾನಿಕ: ಜ್ಯೋತಿ ಗಣೇಶ್

ಬಸವಕಲ್ಯಾಣ, ಮಸ್ಕಿ ಮತ್ತು ಬೆಳಗಾವಿ ಕ್ಷೇತ್ರಗಳಿಗೆ ಸದ್ಯದಲ್ಲೇ ಉಪ ಚುನಾವಣೆ ನಡೆಯಲಿದೆ. ಆದರೆ ಉಪಚುನಾವಣೆ ನಡೆಯುವ ಕ್ಷೇತ್ರಗಳಿಗೆ ಯಾವುದೇ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವುದಿಲ್ಲ. ಈಗಾಗಲೇ ಉಪಚುನಾವಣೆ ನಡೆಯುವ ಕ್ಷೇತ್ರಗಳಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಲಾಗಿದೆ. ನೂರಕ್ಕೆ ನೂರು ಉಪ ಚುನಾವಣೆಗಳಲ್ಲಿ ನಾವೇ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪಂಚಮಸಾಲಿ ಸ್ವಾಮೀಜಿಗಳಿಂದ ಬೇಡಿಕೆ ಈಡೇರಿಕೆಗೆ ಗಡುವು ವಿಚಾರ ಕುರಿತು ಯಾವುದೇ ಪ್ರತಿಕ್ರಿಯೆ ನೀಡದೇ ಸಿಎಂ ನಿರ್ಗಮಿಸಿದರು.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.