ಬೆಂಗಳೂರು: ಕೇಂದ್ರ ಸರ್ಕಾರದ ಒಡೆತನದ ಆಸ್ತಿಗಳಿಗೆ ರಾಜ್ಯ ಸರ್ಕಾರಕ್ಕೆ ತೆರಿಗೆ ಪಾವತಿಸುವಂತಿಲ್ಲ ಎಂದು ಹೈಕೋರ್ಟ್ ಸ್ಪಷ್ಟ ಪಡಿಸಿದೆ. ಕೇಂದ್ರ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಮಂಗಳೂರು ನಗರ ಪಾಲಿಕೆಯ ಸಹಾಯಕ ಕಂದಾಯ ಅಧಿಕಾರಿ 2010ರ ಜೂ.4ರಂದು ಮತ್ತು 2011ರ ಜು.16ರಂದು ನೋಟಿಸ್ ಜಾರಿ ಮಾಡಿತ್ತು. ಇದನ್ನು ಪ್ರಶ್ನಿಸಿ ಕೇಂದ್ರ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ.ಎಸ್ ಕಮಲ್ ಅವರಿದ್ದ ನ್ಯಾಯಪೀಠ, ಅರ್ಜಿಯನ್ನು ಪುರಸ್ಕರಿಸಿದ್ದು, ಕೇಂದ್ರ ಸರ್ಕಾರದ ಆಸ್ತಿಗಳಿಗೆ ರಾಜ್ಯಕ್ಕೆ ತೆರಿಗೆ ಪಾವತಿ ಮಾಡಬೇಕಾದ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ.
ಅಲ್ಲದೆ, ಪ್ರಕರಣದಲ್ಲಿ ವಸತಿ ಗೃಹ ನಿರ್ಮಾಣಕ್ಕೆ ಪಾಲಿಕೆಯು 1991ರ ಏ.26ರಂದು ಕೇಂದ್ರ ಸರ್ಕಾರಕ್ಕೆ ನಕ್ಷೆ ಮಂಜೂರಾತಿ ನೀಡಿತ್ತು. ಕಟ್ಟಡ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದೆ. 1994ರ ಜೂ.10ರಂದು ಸ್ವಾಧೀನಾನುಭವ ಪತ್ರವನ್ನು ಪಾಲಿಕೆ ನೀಡಿದೆ. ಸಂವಿಧಾನದ ಪರಿಚ್ಛೇದ 285 ಪ್ರಕಾರ ಕೇಂದ್ರ ಸರ್ಕಾರದ ಆಸ್ತಿಗೆ ರಾಜ್ಯಕ್ಕೆ ತೆರಿಗೆ ಪಾವತಿಸುವುದರಿಂದ ವಿನಾಯ್ತಿಯಿದೆ. ಅದರಂತೆ ಕೇಂದ್ರ ಸರ್ಕಾರದ ಆಸ್ತಿಗೆ ರಾಜ್ಯ ಸರ್ಕಾರ ಅಥವಾ ಅದರ ಸ್ಥಳೀಯ ಸಂಸ್ಥೇಗಳು ತೆರಿಗೆ ವಿಧಿಸುವಂತಿಲ್ಲ ಎಂದು ಆದೇಶದಲ್ಲಿ ಹೈಕೋರ್ಟ್ ತಿಳಿಸಿದೆ.
ಕೇಂದ್ರ ಸರ್ಕಾರದ ಗಣಿ ಮತ್ತು ಕರಾವಳಿ ಸರ್ವೇ (ಮಂಗಳೂರು) ವಲಯದ ಉಪ ಪ್ರಧಾನ ನಿರ್ದೇಶಕರು ತಮ್ಮ ಒಡೆತನದಲ್ಲಿ ಇರುವ ಸಿಬ್ಬಂದಿ ವಸತಿ ಗೃಹಕ್ಕೆ ಸಂಬಂಧಿಸಿದಂತೆ 1994-95ರಿಂದ 2008ರವರೆಗಿನ ಅಂದರೆ ಒಟ್ಟು 13 ವರ್ಷಗಳಿಗೆ 2007 ಮತ್ತು 2008ರಲ್ಲಿ ಮೂರು ಬಾರಿ ಪ್ರತ್ಯೇಕವಾಗಿ ಒಟ್ಟು 4,42,675 ರೂಗಳನ್ನು ಪಾಲಿಕೆಗೆ ಪಾವತಿದ್ದಾರೆದಾರೆ . ತಿಳುವಳಿಕೆಯಿಲ್ಲದೆ ಪಾವತಿಸಿರುವ ಆ ಮೊತ್ತವನ್ನು ಅನ್ನು ಕೇಂದ್ರ ಸರ್ಕಾರಕ್ಕೆ ಕಲ್ಪಿಸಿರುವ ನಾಗರೀಕ ಸೌಲಭ್ಯಗಳಿಗೆ ಪ್ರತಿಯಾಗಿ ಪಾವತಿಸಬೇಕಿರುವ ಸೇವಾ ತೆರಿಗೆಗೆ ಹೊಂದಾಣಿಕೆ ಮಾಡಿಕೊಳ್ಳಬೇಕು ಎಂದು ಮಂಗಳೂರು ನಗರ ಪಾಲಿಕೆಗೆ ನಿರ್ದೇಶಿಸಿದ ನ್ಯಾಯಪೀಠ ಅರ್ಜಿ ಇತ್ಯರ್ಥಪಡಿಸಿದೆ.
ಪ್ರಕರಣದ ಹಿನ್ನೆಲೆ ಏನು: ಮಂಗಳೂರು ನಗರದಲ್ಲಿ ಕಟ್ಟಡವನ್ನು ಹೊಂದಿದ್ದ ಕೇಂದ್ರ ಸರ್ಕಾರದ ಗಣಿ ಮತ್ತು ಕರಾವಳಿ ಸರ್ವೇ ವಲಯ, ಅದನ್ನು ತನ್ನ ಸಿಬ್ಬಂದಿಗೆ ವಸತಿ ಗೃಹವಾಗಿ ಬಳಸಿಕೊಂಡಿತ್ತು. ಅದಕ್ಕೆ ಆಸ್ತಿ ತೆರಿಗೆ ಪಾವತಿಸುವಂತೆ ಮಂಗಳೂರು ನಗರ ಪಾಲಿಕೆಯು 2010ರ ಜೂ.4ರಂದು ಮತ್ತು 2011ರ ಜು.16ರಂದು ಎರಡು ಪ್ರತ್ಯೇಕ ನೋಟಿಸ್ ಜಾರಿ ಮಾಡಿತ್ತು.ತನ್ನ ಒಡೆತನದ ಕಟ್ಟಡಕ್ಕೆ ರಾಜ್ಯ ಸರ್ಕಾರಕ್ಕೆ ಆಸ್ತಿ ತೆರಿಗೆ ಪಾವತಿ ಮಾಡುವ ಅಗತ್ಯವಿಲ್ಲ ಎನ್ನುವ ಬಗ್ಗೆ ತಿಳುವಳಿಕೆಯಿಲ್ಲದೆ ಕೇಂದ್ರ ಸರ್ಕಾರವು ಮಂಗಳೂರು ನಗರ ಪಾಲಿಕೆಗೆ 1994-95ರಿಂದ 2008ರ ಮಾ.31ರವರೆಗೆ 4,42,675 ರು.ಗಳ ಆಸ್ತಿ ತೆರಿಗೆಯನ್ನು ತಪ್ಪಾಗಿ ಪಾವತಿಸಿತ್ತು.
ನಂತರ ಆಸ್ತಿಗ ತೆರಿಗೆ ಪಾವತಿಗೆ ಸೂಚಿಸಿ ಮತ್ತೆ ನಗರ ಪಾಲಿಕೆ 2010ಮತ್ತು 2011ರಲ್ಲಿ ಪಾಲಿಕೆ ಜಾರಿಗೊಳಿಸಿದ ನೋಟಿಸ್ ಅನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ ಪಾಲಿಕೆ ನೋಟಿಸ್ ನೀಡಿರುವುದು ಕಾನೂನು ಬಾಹಿರವಾಗಿದೆ ಎಂದು ಕೇಂದ್ರ ವಾದ ಮಂಡಿಸಿತ್ತು.
ಇದನ್ನೂ ಓದಿ:ಅನುಕಂಪದ ಆಧಾರದಲ್ಲಿ ಉದ್ಯೋಗಾವಕಾಶ ಪಡೆಯುವುದು ಹಕ್ಕಲ್ಲ: ಹೈಕೋರ್ಟ್