ETV Bharat / state

ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವುದರಿಂದ ನನಗೇನೂ ಲಾಭವಿಲ್ಲ: ಡಿಕೆಶಿಗೆ ಬೊಮ್ಮಾಯಿ ತಿರುಗೇಟು - ಡಿ ಕೆ ಶಿವಕುಮಾರ್​ ಹೇಳಿಕೆ

ಡಿ.ಕೆ.ಶಿವಕುಮಾರ್​ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

Former CM Basavaraj Bommai
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
author img

By ETV Bharat Karnataka Team

Published : Sep 19, 2023, 2:31 PM IST

Updated : Sep 19, 2023, 3:23 PM IST

ಡಿಕೆಶಿಗೆ ಬೊಮ್ಮಾಯಿ ತಿರುಗೇಟು

ಬೆಂಗಳೂರು: ಕಾವೇರಿ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವುದರಿಂದ ನನಗೆ ಏನೂ ಲಾಭ ಇಲ್ಲ. ರಾಜ್ಯದ ಹಿತದೃಷ್ಟಿಯಿಂದ ಹೇಳಿದ್ದೇನೆ. ಆದರೆ ಸರ್ಕಾರದ ನಡೆ ರೈತರನ್ನು, ಜನಸಾಮಾನ್ಯರನ್ನು ಇಕ್ಕಟ್ಟಿಗೆ ಸಿಲುಕಿಸಿದಂತಾಗಿದೆ. ಸರ್ಕಾರ ಕಾವೇರಿ ಜಲಾನಯನ ಪ್ರದೇಶದ ಮಕ್ಕಳನ್ನು ಇಕ್ಕಟ್ಟಿಗೆ ಸಿಲುಕಿಸಿದಂತಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

ಆರ್.ಟಿ.ನಗರ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನೀರು ಬಿಡುಗಡೆ ಆದೇಶ ಹಿನ್ನೆಲೆಯಲ್ಲಿ ಸಂಸದರ ನಿಯೋಗ ಹೋಗಲು ಏನೂ ಸಮಸ್ಯೆ ಇಲ್ಲ. ರಾಜ್ಯ ಸರ್ಕಾರ ಆಸಕ್ತಿ ತೆಗೆದುಕೊಳ್ಳಬೇಕು. ನನ್ನ ಸಲಹೆ ಇಕ್ಕಟ್ಟಿಗೆ ಸಿಲುಕಿಸಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಆದರೆ ಸರ್ಕಾರದ ನಡೆ ರೈತರನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಸರ್ಕಾರ ತಾನು ಸಲ್ಲಿಸಿರುವ ಅಫಿಡವಿಟ್​ಗೆ ಬದ್ಧರಾಗಿರಬೇಕಲ್ವಾ? ಈಗ ಅಫಿಡವಿಟ್ ನಂತರವೂ ನೀರು ಬಿಡುವುದಕ್ಕೆ ಹೋದರೆ ಸರ್ಕಾರ ಸುಳ್ಳು ಹೇಳಿದ ಹಾಗೇ ಆಗುತ್ತದೆ. ಸರ್ಕಾರದ ಪ್ರತಿಯೊಂದು ನಡೆ ರೈತರನ್ನು, ಜನಸಾಮಾನ್ಯರನ್ನು ಇಕ್ಕಟ್ಟಿಗೆ ಸಿಲುಕಿಸಿದಂತಾಗಿದೆ. ಸರ್ಕಾರ ಕಾವೇರಿ ಜಲಾನಯನ ಪ್ರದೇಶದ ಮಕ್ಕಳನ್ನು ಇಕ್ಕಟ್ಟಿಗೆ ಸಿಲುಕಿಸಿದಂತಾಗಿದೆ ಎಂದರು.

ಸರ್ಕಾರದಲ್ಲಿ ಕೆಲಸ ಮಾಡುವವರಿಗೆ ಮಾಹಿತಿ, ಅರಿವು, ಜವಾಬ್ದಾರಿ ಇರಬೇಕು. ಏನೋ ಮಾತು ಹೇಳಬೇಕು ಅಂತಾ ಹೇಳುತ್ತಿದ್ದಾರೆ. ನಾವಿದ್ದಾಗಲೂ ಇಂತಹ ತೀರ್ಪು ಬಂದಿದೆ. ಆದರೆ ರಿವ್ಯೂ ಹಾಕಿದ್ದೆವು. ನೀರು ಬಿಟ್ಟ ಮೇಲೆ ವಾದ ಮಾಡಿ ಪ್ರಯೋಜನ ಇಲ್ಲ. ಇದೆಲ್ಲವೂ ಕೂಡ ಸರ್ಕಾರದಲ್ಲಿ ಕೆಲಸ ಮಾಡುವವರಿಗೆ ಅರಿವು ಇರಬೇಕು. ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಪ್ರಧಾನಿ ಬಳಿ ಹೋಗೊಣ ಅಂತ ಹೇಳುತ್ತಿದ್ದಾರೆ. ತಮಿಳುನಾಡು ನೀರಾವರಿ ಸಚಿವರನ್ನು ಭೇಟಿ ಮಾಡಿದ್ದರು, ತಮಿಳುನಾಡು ಸರ್ಕಾರ ಸಹಕಾರ ನೀಡಿಲ್ಲ, ನೀಡೋದು ಇಲ್ಲ, ಇದು ಎಲ್ಲರಿಗೂ ಗೊತ್ತಿದೆ. ವ್ಯರ್ಥ ಮಾತುಕತೆ ಆಗಬಾರದು. ನಮ್ಮ ವಸ್ತುಸ್ಥಿತಿ ಮಾತ್ರವಲ್ಲ ತಮಿಳುನಾಡು ವಸ್ತುಸ್ಥಿತಿ ಬಗ್ಗೆಯೂ ನಮ್ಮ ವಕೀಲರು ಮಾತನಾಡಲ್ಲ. ತಮಿಳುನಾಡಿನ ವಸ್ತುಸ್ಥಿತಿ ಹೇಳಲು ನಾವು ಯಾವಾಗ ಕಲಿಯುತ್ತೇವೋ, ತಮಿಳುನಾಡಿನ ಡ್ಯಾಂಗಳ ಬಗ್ಗೆ ನಮ್ಮ ವಕೀಲರು ಎಲ್ಲಿಯವರೆಗೆ ಮಾತಾಡುವುದಿಲ್ಲವೋ, ಅಲ್ಲಿಯವರೆಗೂ ಸಮಸ್ಯೆ ಪರಿಹಾರ ಆಗುವುದಿಲ್ಲ. ಇಕ್ಕಟ್ಟಿಗೆ ಸಿಲುಕಿಸುವುದರಿಂದ ನನಗೆ ಏನೂ ಲಾಭ ಇಲ್ಲ. ರಾಜ್ಯದ ಹಿತದೃಷ್ಟಿಯಿಂದ ಹೇಳಿದ್ದೇನೆ ಎಂದರು.

ನಮ್ಮ ಕಾಲದಲ್ಲಿ ಯಾವುದೇ ಇಕ್ಕಟ್ಟು, ಬಿಕ್ಕಟ್ಟು ಇರಲಿಲ್ಲ. ನಮ್ಮ ಸಲಹೆಯನ್ನು ತೆಗೆದುಕೊಳ್ಳದೇ ಇದ್ದರೆ ಏನು ಮಾಡಲು ಆಗುತ್ತದೆ. ಕೋರ್ಟ್​ನಿಂದ ಹೊರಗೆ ಬಗೆಹರಿಸಿಕೊಳ್ಳಲು ರಾಜ್ಯಸಭೆಯಲ್ಲಿ ದೇವೇಗೌಡರು ಸಲಹೆ ನೀಡಿದ್ದಾರೆ. ಆದರೆ ನಾಲ್ಕು ರಾಜ್ಯಗಳು ಒಪ್ಪಿಕೊಂಡಾಗ ಮಾತ್ರ ಅದು ಸಾಧ್ಯ. ತಮಿಳುನಾಡಿನವರು 35 ವರ್ಷಗಳಿಂದ ಇದೇ ವಾದ ಮಾಡುತ್ತಿದ್ದಾರೆ.

ರಾತ್ರೋರಾತ್ರಿ ನಮ್ಮ ಸರ್ಕಾರ ನೀರು ಬಿಟ್ಟಿಲ್ಲ. ನಮ್ಮ ಕಾಲದಲ್ಲಿ ಯಾವುದೇ ಬಿಕ್ಕಟ್ಟು, ಇಕ್ಕಟ್ಟು ಇರಲಿಲ್ಲ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಚನೆ ಆದ ಮೇಲೆ ಬೇರೆ ಪರಿಸ್ಥಿತಿ ಇದೆ. 2018ರ ಬಳಿಕ ಮೊದಲ ಬಾರಿಗೆ ನೀರಿನ ಅಭಾವವಾಗಿದೆ, ಸರ್ಕಾರಕ್ಕೆ ಇದು ಪರೀಕ್ಷೆ, ಸರ್ಕಾರ ಚಾಕಚಕ್ಯತೆಯಿಂದ ಇದನ್ನು ಬಗೆಹರಿಸಬೇಕು. ನಾವು ಬೇಕಾದ ಸಹಕಾರ ನೀಡುತ್ತೇವೆ. ನಮ್ಮ ಸಂಸದರಿಗೆ ಹೇಳಿದ್ದೇನೆ ಕೂಡಲೇ ನೀರಾವರಿ ಸಚಿವರನ್ನು ಭೇಟಿ ಮಾಡಿ ವಸ್ತುಸ್ಥಿತಿ ಹೇಳಬೇಕು ಎಂದು ಸೂಚಿಸಿದ್ದೇನೆ ಎಂದು ಹೇಳಿದರು.

ಮಹಿಳಾ ಮೀಸಲಾತಿ ಒಂದು ಕ್ರಾಂತಿಕಾರಿ ನಿರ್ಣಯ. 2009ರಲ್ಲಿ ಯುಪಿಎ ಅವಧಿಯಲ್ಲಿ ರಾಜ್ಯಸಭೆಯಲ್ಲಿ ಬಿಲ್ ಪಾಸ್ ಮಾಡಿತ್ತು. ಆದರೆ ಲೋಕಸಭೆಯಲ್ಲಿ ಯುಪಿಎ ಸದಸ್ಯ ಪಕ್ಷಗಳೇ ಒಪ್ಪಿರಲಿಲ್ಲ. ಶೇ 50%ರಷ್ಟಿರುವ ಮಹಿಳೆಯರಿಗೆ ಪ್ರಾತಿನಿಧ್ಯ ಸಿಗುತ್ತಿರುವುದು ಒಂದು ಕ್ರಾಂತಿಕಾರಕ ನಡೆ. ಕೇವಲ ಪ್ರಪೋಸಲ್ ಸಿದ್ಧಪಡಿಸುವುದು ಮಾತ್ರವಲ್ಲ, ಎಲ್ಲ ಪಕ್ಷಗಳನ್ನು ಒಪ್ಪಿಸಿ ಬಿಲ್ ಪಾಸ್ ಮಾಡುವುದು ಮುಖ್ಯ. ಕೇಂದ್ರ ಸರ್ಕಾರದವರು ಈ ಬಿಲ್ ಅನ್ನು ಒಪ್ಪಿಗೆ ಪಡೆದು ಕಾಯ್ದೆಯಾಗಿ ಜಾರಿಗೆ ತರುತ್ತಾರೆ ಎನ್ನುವ ವಿಶ್ವಾಸ ಇದೆ ಎಂದು ತಿಳಿಸಿದರು.

ಇದನ್ನೂ ಓದಿ : ಬೊಮ್ಮಾಯಿ ಅವರದ್ದು ನಮ್ಮನ್ನು ಇಕ್ಕಟ್ಟಿಗೆ ಸಿಲುಕಿಸುವ ಸಲಹೆ: ಡಿಸಿಎಂ ಡಿ.ಕೆ.ಶಿವಕುಮಾರ್

Last Updated : Sep 19, 2023, 3:23 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.