ETV Bharat / state

18-44 ವರ್ಷ ವಯಸ್ಸಿನವರಿಗೆ ಸದ್ಯಕ್ಕಿಲ್ಲ ಲಸಿಕೆ.. ಸರ್ಕಾರದ ಈ ದಿಢೀರ್​ ನಿರ್ಧಾರಕ್ಕೆ ಕಾರಣ? - ಮೇ 14 ರಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡೋಲ್ಲ

ರಾಜ್ಯದಲ್ಲಿ ಸದ್ಯಕ್ಕೆ 18 ರಿಂದ 44 ವರ್ಷದವರಿಗೆ ಲಸಿಕೆ ನೀಡುವ ಅಭಿಯಾನಕ್ಕೆ ಬ್ರೇಕ್​ ಬಿದ್ದಿದೆ. ಇಂದು ರಾಜ್ಯ ಸರ್ಕಾರವು ನೇರವಾಗಿ 18 ರಿಂದ 44 ವರ್ಷದ ವಯೋಮಾನದ ಫಲಾನುಭವಿಗಳ ಲಸಿಕಾಕರಣಕ್ಕೆ ಖರೀದಿಸಿದ ಪೂರ್ಣ ದಾಸ್ತಾನನ್ನು ಸಹ 2ನೆಯ ಡೋಸ್ ಪಡೆಯಲು ಬಾಕಿ ಇರುವ ಫಲಾನುಭವಿಗಳ ಬಳಕೆಗೆ ವಿನಿಯೋಗಿಸಲು ನಿರ್ಧರಿಸಿದೆ.

ಮೇ 14 ರಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡೋಲ್ಲ

author img

By

Published : May 12, 2021, 10:33 PM IST

ಬೆಂಗಳೂರು: ರಾಜ್ಯದಲ್ಲಿ ಲಸಿಕಾ ಕಾರ್ಯಕ್ರಮ ತಾತ್ಕಾಲಿಕವಾಗಿ ಸ್ಥಗಿತಗೊಳ್ಳುತ್ತಿದೆ. ಈ ಸಂಬಂಧ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದಿಂದ 45 ವರ್ಷಕ್ಕಿಂತ ಮೇಲ್ಪಟ್ಟ ವಯೋಮಾನದವರ ಲಸಿಕಾಕರಣಕ್ಕಾಗಿ ಹಂಚಿಕೆಯಾದ ಲಸಿಕೆಗಳನ್ನು 2ನೇಯ ಡೋಸ್ ಪಡೆಯಲು ಬಾಕಿ ಇರುವ ಫಲಾನುಭವಿಗಳಿಗೆ ಮಾತ್ರ ಬಳಸಲು ನಿರ್ಧರಿಸಿದೆ.

ಇಂದು ರಾಜ್ಯ ಸರ್ಕಾರವು ನೇರವಾಗಿ 18 ರಿಂದ 44 ವರ್ಷದ ವಯೋಮಾನದ ಫಲಾನುಭವಿಗಳ ಲಸಿಕಾಕರಣಕ್ಕೆ ಖರೀದಿಸಿದ ಪೂರ್ಣ ದಾಸ್ತಾನನ್ನು ಸಹ 2ನೆಯ ಡೋಸ್ ಪಡೆಯಲು ಬಾಕಿ ಇರುವ ಫಲಾನುಭವಿಗಳ ಬಳಕೆಗೆ ವಿನಿಯೋಗಿಸಲು ನಿರ್ಧರಿಸಿದೆ. ಆದ್ದರಿಂದ ರಾಜ್ಯದಲ್ಲಿ ಇರುವ ಎಲ್ಲಾ ಲಸಿಕೆಗಳ (ಕೇಂದ್ರ ಸರ್ಕಾರದಿಂದ ಒದಗಿಸಲಾದ ಹಾಗೂ ರಾಜ್ಯ ಸರ್ಕಾರದಿಂದ ನೇರವಾಗಿ ಖರೀದಿಸಿದ) ಪೂರ್ಣ ದಾಸ್ತಾನನ್ನು 2ನೇಯ ಡೋಸ್ ಪಡೆಯಲು ಬಾಕಿ ಇರುವ ಫಲಾನುಭವಿಗಳ ಲಸಿಕಾಕರಣಕ್ಕೆ ಮಾತ್ರ ಬಳಸಲು ಮುಂದಾಗಿದೆ.

ಈ ಹಿನ್ನೆಲೆಯಲ್ಲಿ 18 ರಿಂದ 44 ವರ್ಷ ವಯೋಮಾನದವರ ಕೋವಿಡ್ ಲಸಿಕಾಕರಣವನ್ನು (ಈಗಾಗಲೇ ಲಸಿಕೆಗಾಗಿ ಸಮಯ ನಿಗದಿಪಡಿಸಿಕೊಂಡವರೂ ಸೇರಿದಂತೆ) ಮೇ 14 ರಿಂದ ಮುಂದಿನ ಆದೇಶದವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಸಲಾಗಿದೆ. ಈ ಆದೇಶವು ಕೋವಿಡ್ ಲಸಿಕಾಕರಣ ನಡೆಸುತ್ತಿರುವ ಎಲ್ಲಾ ಸರ್ಕಾರಿ ಕೋವಿಡ್ ಲಸಿಕಾ ಕೇಂದ್ರಗಳಿಗೆ ಅನ್ವಯವಾಗಲಿದೆ‌‌.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.