ಬೆಂಗಳೂರು: ಮೇಕೆದಾಟು ವಿಚಾರದಲ್ಲಿ ನಾವು ಯಾವುದೇ ನಿಯಮ ಉಲ್ಲಂಘನೆ ಮಾಡಿಲ್ಲ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸುಪ್ರೀಂಕೋರ್ಟಿನಲ್ಲಿ ಕೇಸ್ ನಡೆಯುತ್ತಿದೆ. ರಾಜ್ಯದ ಹಿತಾಸಕ್ತಿಗೆ ಯಾವುದೇ ಧಕ್ಕೆ ಆಗದಂತೆ ನಾವು ಬದ್ಧತೆಯಿಂದ ಹೋರಾಟ ಮಾಡುತ್ತೇವೆ ಎಂದರು.
ಮೇಕೆದಾಟು ವಿಚಾರವಾಗಿ ಒಂದು ಸುಮೋಟೋ ಕೇಸ್ ಆಗಿದೆ. ಚೆನೈ ಎನ್ಜಿಟಿ ಕೋರ್ಟ್ ತೆಗೆದುಕೊಂಡಿತ್ತು. ನ್ಯಾಷನಲ್ ಎನ್ಜಿಟಿ ಪ್ರಕರಣ ಕೈಗೆತ್ತಿಕೊಂಡಿದೆ. ಮೂವರು ಸದಸ್ಯರ ಕಮಿಟಿ ತೀರ್ಮಾನ ಮಾಡಲಿದೆ. ನಿನ್ನೆ ವಾದ ಮಂಡನೆ ಆಗಿದೆ ಎಂದು ಹೇಳಿದರು.
ಇದನ್ನು ಓದಿ: ರಾಜ್ಯದಲ್ಲಿ ನಾಯಕತ್ವದ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ: ಸಿಎಂ ಯಡಿಯೂರಪ್ಪ
ತನಿಖೆಗೆ ಆದೇಶ: ಶಾಸಕ ಅರವಿಂದ್ ಬೆಲ್ಲದ್ ಅವರ ಫೋನ್ ಟ್ಯಾಪಿಂಗ್ ವಿಚಾರಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವರು, ನಿನ್ನೆ ಡಿಜಿಪಿ ಹಾಗೂ ಸ್ಪೀಕರ್ ಅವರಿಗೆ ಅರವಿಂದ್ ಬೆಲ್ಲದ್ ಅವರು ಫೋನ್ ಟ್ಯಾಪಿಂಗ್ ಬಗ್ಗೆ ದೂರು ಕೊಟ್ಟಿದ್ದಾರೆ. ಇದರ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ. ಪೊಲೀಸ್ ಆಯುಕ್ತರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿಸಿದರು.