ETV Bharat / state

2023ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ: ಇ- ಪೋರ್ಟ್​ನಲ್ಲಿ ಸಾಧಕರ ನಾಮನಿರ್ದೇಶನಕ್ಕೆ ಅವಕಾಶ - ರಾಜ್ಯೋತ್ಸವ ಸಾಧಕರ ನಾಮನಿರ್ದೇಶನಕ್ಕೆ ಅವಕಾಶ

2023ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗಾಗಿ ಸಾಧಕರ ನಾಮನಿರ್ದೇಶನಕ್ಕೆ ಇಂದಿನಿಂದ ಅ.15ರ ವರೆಗೆ ಅವಕಾಶ ನೀಡಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಕಟಣೆ ಹೊರಡಿಸಿದೆ.

Etv Bharat
Etv Bharat
author img

By ETV Bharat Karnataka Team

Published : Oct 1, 2023, 8:15 AM IST

Updated : Oct 1, 2023, 9:24 AM IST

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಪ್ರಧಾನ ಮಾಡಲಾಗುವ 2023ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗಾಗಿ ಇಂದಿನಿಂದ (ಅಕ್ಟೋಬರ್ 1) ಅರ್ಜಿ ಸಲ್ಲಿಸಬಹುದಾಗಿದೆ. ವಿವಿಧ ಕ್ಷೇತ್ರಗಳ ಸಾಧಕರ ಹೆಸರುಗಳನ್ನು ಸಾರ್ವಜನಿಕರು ಸೇವಾ ಸಿಂಧು ಪೋರ್ಟಲ್‌ನಲ್ಲಿ ನಾಮನಿರ್ದೇಶನ ಮಾಡಬಹುದಾಗಿದ್ದು, ನಾಮನಿರ್ದೇಶನದ ಅವಧಿ ಅ.1 ರಿಂದ ಅ. 15ರ ವರೆಗೆ ಇರಲಿದೆ.

ಸೇವಾ ಸಿಂಧು ಪೋರ್ಟಲ್‌ನ ವೆಬ್‌ಸೈಟ್ ವಿಳಾಸ https://sevasindhu.karnataka.gov.in ರಲ್ಲಿ ಸಾಧಕರ ಹೆಸರನ್ನು ನಾಮನಿರ್ದೇಶನ ಮಾಡಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪತ್ರಿಕಾ ಪ್ರಕಟಣೆ ಹೊರಡಿಸಿದೆ.

ಆಯ್ಕೆ ಸಮಿತಿ ರಚನೆ: 2023ನೇ ಸಾಲಿನ ಕನ್ನಡ ರಾಜೋತ್ಸವ ಪ್ರಶಸ್ತಿಗೆ ಪುರಸ್ಕೃತರನ್ನು ಆಯ್ಕೆ ಮಾಡಲು 39 ಸದಸ್ಯರ ಆಯ್ಕೆ ಸಲಹಾ ಸಮಿತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಚಿಸಿ ಆದೇಶಿಸಲಾಗಿದೆ.

ಕನ್ನಡ ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ‌ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ, ಸಾಹಿತಿಗಳಾದ ಪ್ರೊ. ಜಾಣಗೆರೆ ವೆಂಕಟರಾಮಯ್ಯ, ಹೆಚ್. ಎಲ್. ಪುಷ್ಪ, ವೀರಣ್ಣ ದಂಡ, ಮೂಡ್ನಾಕೂಡು ಚಿನ್ನಸ್ವಾಮಿ, ಅಲ್ಲಮಪ್ರಭು ಬೆಟ್ಟದೂರು, ಕಾ.ತಾ. ಚಿಕ್ಕಣ್ಣ, ವೈದ್ಯ ಡಾ. ಸಿ.ಆರ್. ಚಂದ್ರಶೇಖರ್, ಜಾನಪದ ಕಲಾವಿದ ಪಿಂಡಿಪಾಪನಹಳ್ಳಿ ಮುನಿವೆಂಕಟಪ್ಪ, ಕೃಷ್ಣಮೂರ್ತಿ ಹನೂರು, ಟಾಕಪ್ಪ ಕಣ್ಣೂರು, ಪಿಚ್ಚಳ್ಳಿ ಶ್ರೀನಿವಾಸ್ ಸೇರಿದಂತೆ ವಿವಿಧ ಕ್ಷೇತ್ರಗಳ 36 ಸಾಧಕರನ್ನು ಆಯ್ಕೆ ಸಮಿತಿಯ ಸದಸ್ಯರಾಗಿ ನೇಮಕ ಮಾಡಲಾಗಿದೆ.

ಕಳೆದ ವರ್ಷ 67 ಸಾಧಕರಿಗೆ ರಾಜ್ಯೋತ್ಸವ ಪುರಸ್ಕಾರ: ರಾಜ್ಯೋತ್ಸವ ಪ್ರಶಸ್ತಿಗೆ ಕಳೆದ ವರ್ಷ ಸೇವಾ ಸಿಂಧು ಆ್ಯಪ್​ನಲ್ಲಿ 9000 ಅರ್ಜಿಗಳು ಬಂದಿದ್ದವು. ಆದ್ರೆ ವಿವಿಧ ಕ್ಷೇತ್ರಗಳ 67 ಗಣ್ಯರಿಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಇನ್ನು ಕಳೆದ ವರ್ಷ ಮೊದಲ ಬಾರಿಗೆ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ 5 ಲಕ್ಷ ರೂ. ನಗದು, 25 ಗ್ರಾಂ ಬಂಗಾರ ಹಾಗೂ ಪ್ರಶಸ್ತಿ ಫಲಕ ನೀಡಿ ಗೌರವಿಸಲಾಗಿತ್ತು.

ಇಸ್ರೋ ಮಾಜಿ ಅಧ್ಯಕ್ಷ ಕೆ.ಶಿವನ್, ಹಿರಿಯ ನಟ ದತ್ತಣ್ಣ, ಅವಿನಾಶ್ ಹಾಗೂ ಕಿರುತೆರೆ ವಿಭಾಗದಲ್ಲಿ ಸಿಹಿ ಕಹಿ ಚಂದ್ರು, ಸೋಲಿಗರ ಮಾದಮ್ಮ ವಿದ್ವಾನ್ ಗೋಪಾಲ ಕೃಷ್ಣ ಶರ್ಮ, ಸಾಲುಮರದ ನಿಂಗಣ್ಣ, ಸಾಹಿತ್ಯ ಕ್ಷೇತ್ರದಲ್ಲಿ ಪ್ರೊ.ಅ.ರಾ.ಮಿತ್ರ, ಪ್ರೊ.ಕೃಷ್ಣಗೌಡ ಹಾಗೂ ನ್ಯಾಯಾಂಗ ವಿಭಾಗದಲ್ಲಿ ವೆಂಕಟಾಚಲಪತಿ ಸೇರಿ 67 ಜನರು ಕಳೆದ ವರ್ಷ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದರು.

ಇದನ್ನೂ ಓದಿ: ಐತಿಹಾಸಿಕ ತಾಣ ಹಂಪಿಗೆ ಒಲಿದ ಅತ್ಯುತ್ತಮ ಪ್ರವಾಸೋದ್ಯಮ ಗ್ರಾಮ ರಾಷ್ಟ್ರೀಯ ಪ್ರಶಸ್ತಿ

Last Updated : Oct 1, 2023, 9:24 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.