ETV Bharat / state

ವಿಧಾನ ಪರಿಷತ್ ಸದಸ್ಯ ಸ್ಥಾನ ನಾಮನಿರ್ದೇಶನಕ್ಕೆ ಆಕ್ಷೇಪ: ಪರಿಶೀಲಿಸುವಂತೆ ಸಿಎಸ್​​ಗೆ ರಾಜ್ಯಪಾಲರ ಸೂಚನೆ

ಸಾಮಾಜಿಕ ಸೇವೆ ಕ್ಷೇತ್ರದಲ್ಲಿ ಸುಧಾಮ್ ದಾಸ್, ಶಿಕ್ಷಣ ಕ್ಷೇತ್ರ ಎಂ ಆರ್ ಸೀತಾರಾಮ್ ಮತ್ತು ಸಹಕಾರ ಕ್ಷೇತ್ರದಿಂದ ಮನ್ಸೂರ್ ಖಾನ್ ಅವರನ್ನು ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ನಾಮನಿರ್ದೇಶನಗೊಳಿಸಲಾಗಿತ್ತು. ಜುಲೈ 29ಕ್ಕೆ ಮೂವರ ನಾಮನಿರ್ದೇಶನ ಆಕ್ಷೇಪಿಸಿ ರಾಘವಾಚಾರ್ ಶಾಸ್ತ್ರಿ ಎಂಬುವರು ರಾಜ್ಯಪಾಲರಿಗೆ ದೂರು ನೀಡಿದ್ದರು.

Bangalore Vidhana Soudha
ಬೆಂಗಳೂರು ವಿಧಾನಸೌಧ
author img

By

Published : Aug 5, 2023, 5:45 PM IST

ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ನಾಮ‌ನಿರ್ದೇಶನ ಶಿಫಾರಸು ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ದೂರು ದಾಖಲಾದ ಹಿನ್ನೆಲೆ ಪರಿಶೀಲನೆ ನಡೆಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ರಾಜ್ಯಪಾಲರು ಸೂಚನೆ ನೀಡಿದ್ದಾರೆ. ರಾಜ್ಯಪಾಲರಿಗೆ ಕರ್ನಾಟಕ ರಾಜ್ಯ ಮುಸ್ಲಿಂ ಜನ ಜಾಗೃತಿ ವೇದಿಕೆ ಮತ್ತು ನ್ಯಾಯಮಿತ್ರ ಸಂಘಟನೆಯ ಕಾರ್ಯದರ್ಶಿ ರಾಘವಾಚಾರ್ ಶಾಸ್ತ್ರಿ ಅವರು ದೂರು ನೀಡಿದ್ದರು. ಈ ದೂರು ಹಿನ್ನೆಲೆಯಲ್ಲಿ ಆರೋಪದ ಬಗ್ಗೆ ಪರಿಶೀಲನೆ ನಡೆಸುವಂತೆ ಮುಖ್ಯ ಕಾರ್ಯದರ್ಶಿಗೆ ರಾಜ್ಯಪಾಲರು ಸೂಚನೆ ನೀಡಿದ್ದಾರೆ.

ಎಂ ಆರ್ ಸೀತಾರಾಮ್, ಸುಧಾಮ್ ದಾಸ್ ಮತ್ತು ಮನ್ಸೂರ್ ಖಾನ್ ನಾಮನಿರ್ದೇಶನ ಶಿಫಾರಸು ಬಗ್ಗೆ ಆಕ್ಷೇಪಿಸಲಾಗಿತ್ತು. ಈ ಸಂಬಂಧ ರಾಜ್ಯಪಾಲರಿಂದ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪರಿಶೀಲಿಸುವಂತೆ ನಿರ್ದೇಶನ ನೀಡಿದ್ದಾರೆ. ಸಾಮಾಜಿಕ ಸೇವೆ ಕ್ಷೇತ್ರದಲ್ಲಿ ಸುಧಾಮ್ ದಾಸ್, ಶಿಕ್ಷಣ ಕ್ಷೇತ್ರದಲ್ಲಿ ಎಂ. ಆರ್. ಸೀತಾರಾಮ್ ಮತ್ತು ಸಹಕಾರ ಕ್ಷೇತ್ರದಿಂದ ಮನ್ಸೂರ್ ಖಾನ್ ಅವರನ್ನು ವಿಧಾನಪರಿಷತ್ ಸ್ಥಾನಕ್ಕೆ ನಾಮನಿರ್ದೇಶನ ಮಾಡಿ ಶಿಫಾರಸು ಮಾಡಲಾಗಿತ್ತು. ಜುಲೈ 29ಕ್ಕೆ ಮೂವರ ನಾಮನಿರ್ದೇಶನಕ್ಕೆ ಆಕ್ಷೇಪ ವ್ಯಕ್ತಪಡಿಸಿ ರಾಜ್ಯಪಾಲರಿಗೆ ದೂರು ನೀಡಲಾಗಿದೆ‌.

ಈ ಹಿಂದೆ ವಿ ಸೋಮಣ್ಣ ಅವರ ಹೆಸರು ಸಹ ಇದೇ ರೀತಿ ಆಕ್ಷೇಪಣೆಗೆ ಒಳಗಾಗಿತ್ತು. ನಾಮನಿರ್ದೇಶನ ಶಿಫಾರಸು ವೇಳೆ ನಿಗದಿತ ವಿಭಾಗ ಮತ್ತು ಶಿಫಾರಸುಗೊಂಡವರ ಬಗ್ಗೆ ಸೂಕ್ತ ದಾಖಲೆ ಸಲ್ಲಿಸಬೇಕು. ವಿ ಸೋಮಣ್ಣ ಶಿಕ್ಷಣ ಕ್ಷೇತ್ರದಿಂದ ಶಿಫಾರಸುಗೊಂಡಿದ್ದರು. ಅಂದು ರಾಜ್ಯಪಾಲರು ತಿರಸ್ಕಾರ ಮಾಡಿದ್ದರಿಂದ ಸಾಮಾಜಿಕ ಕ್ಷೇತ್ರದ ಮೂಲಕ ಪರಿಷತ್ ಸದಸ್ಯರಾಗಿ ನೇಮಕ ಮಾಡಲಾಗಿತ್ತು.

ಇದೀಗ ಮತ್ತೆ ಅದೇ ರೀತಿಯ ಆಡಳಿತಾತ್ಮಕ ಸಂಕಷ್ಟ ಸೃಷ್ಟಿಯಾಗಿದೆ. ಮುಖ್ಯಮಂತ್ರಿಗಳ ಜೊತೆಗೆ ಚರ್ಚೆ ಮಾಡಿದ ಬಳಿಕ ಮುಖ್ಯ ಕಾರ್ಯದರ್ಶಿ ರಾಜ್ಯಪಾಲರಿಗೆ ವಿವರಣೆ ನೀಡಲಿದ್ದಾರೆ.

ಕಾಂಗ್ರೆಸ್​ ಮುಸ್ಲಿಂ ಮುಖಂಡರ ಸಭೆ: ಮನ್ಸೂರ್ ಖಾನ್ ನಾಮ ನಿರ್ದೇಶನ ವಿವಾದ ಹಿನ್ನೆಲೆ ಚರ್ಚೆ ನಡೆಸಲು ನಾಳೆ ಕೆಪಿಸಿಸಿ ಕಚೇರಿಯಲ್ಲಿ ಸಲೀಂ ಅಹಮದ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಮುಸ್ಲಿಂ ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರು, ಮಾಜಿ ಸಂಸದರು, ಜಿಲ್ಲಾಧ್ಯಕ್ಷರು, ಮಾಜಿ ಜಿಲ್ಲಾಧ್ಯಕ್ಷರ ಸಭೆ ಕರೆಯಲಾಗಿದೆ.

ಇದನ್ನೂಓದಿ: ನೈಸ್ ಹಗರಣದ ದಾಖಲೆಗಳನ್ನು ಪ್ರಧಾನಿ ಮೋದಿಗೆ ಕೊಡುತ್ತೇನೆ, ಪೆನ್ ಡ್ರೈವ್ ಬಿಡುಗಡೆ ಮಾಡಿದ್ರೆ ತನಿಖೆ ಮಾಡುವ ತಾಕತ್ತು ಸರ್ಕಾರಕ್ಕೆ ಇದೆಯಾ? ಕುಮಾರಸ್ವಾಮಿ ಸವಾಲು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.