ಬೆಂಗಳೂರು: ಇಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕನಕಲಕ್ಷ್ಮೀ ಎಂಬುವರು ಮೊದಲ ನಾಮಪತ್ರ ಸಲ್ಲಿಸಿದ್ದಾರೆ.
ಲೋಕಸಭಾ ಚುನಾವಣೆಗೆ ನಿನ್ನೆಯಿಂದಲೇ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಆದ್ರೆ ನಿನ್ನೆ ಯಾವ ಅಭ್ಯರ್ಥಿಯೂ ನಾಮಪತ್ರ ಸಲ್ಲಿಸಿರಲಿಲ್ಲ. ಇಂದು ಪಕ್ಷೇತರ ಅಭ್ಯರ್ಥಿಯಾಗಿ ಕನಕಲಕ್ಷ್ಮೀ ಅವರು ಚುನಾವಣಾಧಿಕಾರಿ ಅನಿರುದ್ಧ್ ಶ್ರವಣ್ಗೆ ನಾಮಪತ್ರ ಸಲ್ಲಿಸಿದರು.