ETV Bharat / state

ಸಿಎಂ ಗೃಹ ಕಚೇರಿ ಮುಂದೆ ಪ್ರತಿಭಟನೆ: ಕೆಪಿಸಿಸಿ ಮಹಿಳಾ ಅಧ್ಯಕ್ಷೆಗೆ ಜಾಮೀನು ರಹಿತ ವಾರಂಟ್​ ಜಾರಿ... - ಈಟಿವಿ ಭಾರತ ಕನ್ನಡ

ಅನುಮತಿ ಇಲ್ಲದೇ ಮುಖ್ಯಮಂತ್ರಿ ಗೃಹ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆ ಕಾಂಗ್ರೆಸ್​ ಅಧ್ಯಕ್ಷೆ ಪುಷ್ಪಾ ಅಮರನಾಥ್​ಗೆ ಜಾಮೀನು ರಹಿತ ವಾರೆಂಟ್​ ಜಾರಿ ಮಾಡಲಾಗಿದೆ.

KN_BNG
ಪುಷ್ಪಾ ಅಮರನಾಥ್​
author img

By

Published : Nov 4, 2022, 10:24 PM IST

ಬೆಂಗಳೂರು: ಮುಖ್ಯಮಂತ್ರಿಗಳ ಗೃಹ ಕಚೇರಿ ಮುಂದೆ ಅನುಮತಿ ಇಲ್ಲದೆ ಪ್ರತಿಭಟನೆ ನಡೆಸಿದ ಆರೋಪದಲ್ಲಿ ರಾಜ್ಯ ಕಾಂಗ್ರೆಸ್​ ಪಕ್ಷದ ಮಹಿಳಾ ಅಧ್ಯಕ್ಷೆ ಪುಷ್ಪಾ ಅಮರನಾಥ್​ ವಿರುದ್ಧ ಜಾಮೀನು ರಹಿತ ವಾರಂಟ್​ ಜಾರಿ ಮಾಡಲಾಗಿದೆ.

ಹೈಗ್ರೌಂಡ್ಸ್​ ಪೊಲೀಸರ ದಾಖಲಿಸಿರುವ ಪ್ರಕರಣದ ವಿಚಾರಣೆ ನಡೆಸಿದ ನಗರದ 69ನೇ ಮ್ಯಾಜಿಸ್ಟ್ರೇಟ್​ ನ್ಯಾಯಾಲಯದ ನ್ಯಾಯಾಧೀಶರು ಜಾಮೀನು ರಹಿತ ವಾರಂಟ್​ ಜಾರಿ ಮಾಡಿ ವಿಚಾರಣೆ ಮುಂದೂಡಿದ್ದಾರೆ. ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಆರೋಪಿತರಿಗೆ ಈಗಾಗಲೇ ಎರಡು ಬಾರಿ ಸಮನ್ಸ್​ ಜಾರಿ ಮಾಡಲಾಗಿತ್ತು. ಆದರೆ, ಈವರೆಗೂ ಹಾಜರಾಗದ ಹಿನ್ನೆಲೆಯಲ್ಲಿ ಜಾಮೀನು ರಹಿತ ವಾರಂಟ್​ ಜಾರಿ ಮಾಡಿ ಆದೇಶಿಸಿದ್ದು ವಿಚಾರಣೆಯನ್ನು ಡಿಸೆಂಬರ್​ 27ಕ್ಕೆ ಮುಂದೂಡಿದೆ.

2021ರ ಮಾರ್ಚ್ 25ರಂದು ಪುಷ್ಪಾ ಅಮರನಾಥ್​ ಸೇರಿದಂತೆ ಇತರ 7 ಮಂದಿ ಮಹಿಳೆಯರು ಅನುಮತಿ ಪಡೆಯದೇ ಮುಖ್ಯಮಂತ್ರಿಗಳ ಗೃಹ ಕಚೇರಿ ಗೇಟ್​ ಮುಂದೆ ಪ್ರತಿಭಟನೆಗೆ ಮುಂದಾಗಿದ್ದರು. ಅಲ್ಲದೇ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್​ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದರು. ಈ ಸಂಬಂಧ ಅಕ್ರಮವಾಗಿ ಗುಂಪು ಕೂಡಿದ್ದರಿಂದ ಗೃಹ ಕಚೇರಿ ಮುಂಭಾಗದ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿತ್ತು. ಈ ಸಂಬಂಧ ಹೈಗ್ರೌಂಡ್ಸ್​ ಠಾಣೆಯ ಸಹಾಯಕ ಪೊಲೀಸ್​ ಸಬ್​ ಇನ್​ಸ್ಪೆಕ್ಟರ್​ ಆಗಿದ್ದ ಡಿ.ಬಿ.ಚನ್ನಬಸವಯ್ಯ ದೂರು ದಾಖಲಿಸಿದ್ದರು.

ಇದನ್ನೂ ಓದಿ: ಸಂಸದ ಪ್ರತಾಪ್​ ಸಿಂಹ ವಿರುದ್ಧ ಪುಷ್ಪಾ ಅಮರನಾಥ್ ವಾಗ್ದಾಳಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.