ETV Bharat / state

ಶೀಘ್ರವೇ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಸಭೆ: ಸಿಎಂ ಬೊಮ್ಮಾಯಿ

ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಭಾಗದ ಜನರಿಗೆ ಜಮೀನು ಮಂಜೂರು ಮಾಡಿರುವುದು ಒಂದು ಭಾಗವಾಗಿದೆ. ಉತ್ತರ ಕರ್ನಾಟಕಕ್ಕೆ ಇನ್ನೂ ಸಾಕಷ್ಟು ಕೆಲಸ ಮಾಡಬೇಕಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಉತ್ತರ ಕರ್ನಾಟಕ ಸಂಘ
ಉತ್ತರ ಕರ್ನಾಟಕ ಸಂಘ
author img

By

Published : Aug 14, 2022, 9:32 PM IST

ಬೆಂಗಳೂರು: ಉತ್ತರ ಕರ್ನಾಟಕ ಭಾಗದ ಜನರಿಗಾಗಿ ಬೆಂಗಳೂರು ನಗರದಲ್ಲಿ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಚರ್ಚಿಸಲು ಶೀಘ್ರವೇ ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಸಭೆ ಕರೆಯುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಶುಕ್ರವಾರ ಸಿಎಂ ಸಚಿವ ಸಂಪುಟ ಸಭೆ ನಡೆಸಿದ್ದರು. ಸಭೆಯಲ್ಲಿ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಗೆ ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿನ ದಾಸನಪುರ ಹೋಬಳಿಯ ಕಮ್ಮಸಂದ್ರದಲ್ಲಿ 3 ಎಕರೆ 24 ಗುಂಟೆ ಜಮೀನು ಮಂಜೂರು ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆ ವತಿಯಿಂದ ನೂರಾರು ಪದಾಧಿಕಾರಿಗಳು ಆರ್.ಟಿ ನಗರದಲ್ಲಿನ ಖಾಸಗಿ ನಿವಾಸದಲ್ಲಿ ಸಿಎಂಗೆ ಸನ್ಮಾನಿಸಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಸಿಎಂ, ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಭಾಗದ ಜನರಿಗೆ ಜಮೀನು ಮಂಜೂರು ಮಾಡಿರುವುದು ಒಂದು ಭಾಗವಾಗಿದೆ. ಉತ್ತರ ಕರ್ನಾಟಕಕ್ಕೆ ಇನ್ನೂ ಸಾಕಷ್ಟು ಕೆಲಸ ಮಾಡಬೇಕಿದೆ. ಆ ಭಾಗದ ಜನರು ಬೆಂಗಳೂರಿಗೆ ಬಂದಾಗ ಉಳಿದುಕೊಳ್ಳಲು ಸೂಕ್ತ ವಸತಿ ವ್ಯವಸ್ಥೆ, ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಭಾಗದ ಜನರು ಹಬ್ಬ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸುಸಜ್ಜಿತ ಸಭಾಭವನ ಸೇರಿದಂತೆ ಎಲ್ಲ ರೀತಿಯ ಮೂಲ ಸೌಕರ್ಯಗಳನ್ನು ಕಲ್ಪಿಸಲು ಕ್ರಮ ವಹಿಸಲಾಗುವುದು. ಈ ನಿಟ್ಟಿನಲ್ಲಿ ಶೀಘ್ರವೇ ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಭಾಗದ ಸಂಘ ಸಂಸ್ಥೆಗಳ ಪದಾಧಿಕಾರಿಗಳ ಸಭೆ ಕರೆದು ಚರ್ಚಿಸುವುದಾಗಿ ಹೇಳಿದರು.

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆ ಅಧ್ಯಕ್ಷ ಶಿವಕುಮಾರ್ ಮೇಟಿ ಮಾತನಾಡಿ, ಉತ್ತರ ಕರ್ನಾಟಕ ಭಾಗದ ಜನರ ಭಾವನೆಗಳಿಗೆ ಸ್ಪಂದಿಸಿ, ನಮ್ಮ ಬೇಡಿಕೆ ಈಡೇರಿಸಿ ಜಮೀನು ಮಂಜೂರು ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕದ ಎಲ್ಲ ಸಂಘ ಸಂಸ್ಥೆಗಳ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ. ಜಮೀನು ನೀಡುವ ಇಚ್ಛಾಶಕ್ತಿ ಪ್ರದರ್ಶಿಸಿರುವ ಮುಖ್ಯಮಂತ್ರಿಗಳಿಗೆ ಸಮಗ್ರ ಉತ್ತರ ಕರ್ನಾಟಕ ಜನತೆಯ ಪರವಾಗಿ ಧನ್ಯವಾದ ಅರ್ಪಿಸುವುದಾಗಿ ಮೇಟಿ ತಿಳಿಸಿದರು.

ಇದನ್ನೂ ಓದಿ: ಏಸೂರು ಕೊಟ್ರು ಈಸೂರು ಕೊಡೆವು.. 1942ರಲ್ಲೇ ಸ್ವಾತಂತ್ರ್ಯ ಘೋಷಿಸಿಕೊಂಡ ಮೊದಲ ಗ್ರಾಮ ಈಸೂರು..

ETV Bharat Logo

Copyright © 2024 Ushodaya Enterprises Pvt. Ltd., All Rights Reserved.