ETV Bharat / state

ಕಬ್ಬಿನ ದರ ಏರಿಕೆ ಬಗ್ಗೆ ಸರ್ಕಾರ ನಿರ್ಧಾರ ಕೈಗೊಳ್ಳದಿದ್ದರೆ ಸುವರ್ಣಸೌಧಕ್ಕೆ ಮುತ್ತಿಗೆ: ಕುರುಬೂರ್ ಶಾಂತಕುಮಾರ್ - ಕಬ್ಬು ಬೆಳೆಗಾರ ಪ್ರತಿಭಟನೆ

ಕಬ್ಬಿನ ದರ ಏರಿಕೆ ಬಗ್ಗೆ ಡಿಸೆಂಬರ್ 23ರ ಒಳಗೆ ಸರ್ಕಾರದ ನಿರ್ಧಾರ ಕೈಗೊಳ್ಳದಿದ್ದರೆ ಸುವರ್ಣಸೌಧ ಮುತ್ತಿಗೆ ಹಾಕುವುದಾಗಿ ಸರ್ಕಾರಕ್ಕೆ ಕುರುಬೂರ್ ಶಾಂತಕುಮಾರ್ ಎಚ್ಚರಿಕೆ ಕೊಟ್ಟರು.

Sugarcane grower protest
ಕಬ್ಬು ಬೆಳೆಗಾರ ಪ್ರತಿಭಟನೆ
author img

By

Published : Dec 18, 2022, 8:33 PM IST

ರಾಜ್ಯ ಕಬ್ಬು ಬೆಳಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್

ಬೆಂಗಳೂರು : ಕಬ್ಬಿನ ದರ ಏರಿಕೆ ಬಗ್ಗೆ ಡಿಸೆಂಬರ್ 23ರ ಒಳಗೆ ಸರ್ಕಾರದ ನಿರ್ಧಾರವಾಗದಿದ್ದರೆ 26 ರಂದು ಬೆಳಗಾವಿ ಸುವರ್ಣಸೌಧ ಮುತ್ತಿಗೆ ಹಾಕಲಾಗುವುದು ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ತಿಳಿಸಿದರು.

ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ 27ನೇ ದಿನದ ಧರಣಿ ನಿರತ ರೈತರ ಉದ್ದೇಶಿಸಿ ಮಾತನಾಡಿದ ಅವರು, ಕಬ್ಬಿನ ಎಫ್​ಆರ್​ಪಿ ದರ ಏರಿಕೆ, ಕಟಾವು ಕೂಲಿ, ಸಾಗಾಣಿಕೆ ವೆಚ್ಚ ಕಡಿತ ಮಾಡುವ ಬಗ್ಗೆ ಮುಖ್ಯಮಂತ್ರಿ ಒಪ್ಪಿಕೊಂಡಿದ್ದಾರೆ. ಅದರಂತೆ ಡಿಸೆಂಬರ್ 23 ವಿಶ್ವ ರೈತ ದಿನದ ಆಚರಣೆಯ ಒಳಗೆ ತೀರ್ಮಾನ ಕೈಗೊಳ್ಳಬೇಕು. ನಿರ್ಲಕ್ಷ್ಯ ಮಾಡಿದರೆ 26ರಂದು ಬೆಳಗಾವಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಬೇಕಾಗುತ್ತದೆ ಎಂದು ಎಚ್ಚರಿಕೆ ರವಾನಿಸಿದರು.

ಕಳೆದ ನಾಲ್ಕು ತಿಂಗಳಿಂದ ಕಬ್ಬು ನುರಿಸಿರುವ ಕಾರ್ಖಾನೆಗಳು ರೈತರಿಗೆ ಕಬ್ಬಿನ ಹಣವನ್ನೇ ಪಾವತಿಸಿಲ್ಲ. ಕೆಲವು ಕಾರ್ಖಾನೆಗಳು ನೆಪ ಮಾತ್ರಕ್ಕೆ ಅಲ್ಪ ಸ್ವಲ್ಪ ಪಾವತಿಸಿದ್ದಾರೆ. ಎಫ್​ಆರ್​ಪಿ ನಿಯಮ ಪ್ರಕಾರ 14 ದಿವಸದಲ್ಲಿ ಪಾವತಿಸಬೇಕು ಎಂದು ಇದೆ. ಆದರೆ ಕಾರ್ಖಾನೆಗಳು ಈ ನಿಯಮ ಉಲ್ಲಂಘನೆ ಮಾಡಿ, ಎರಡು ಸಾವಿರ ಕೋಟಿಗೂ ಹೆಚ್ಚು ಹಣ ಉಳಿಸಿಕೊಂಡಿದ್ದಾರೆ. ರಾಜ್ಯ ಸರ್ಕಾರ ಈ ಕುರಿತು ಕೂಡಲೇ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಡಿಸೆಂಬರ್ 23ರಂದು ಧಾರವಾಡದಲ್ಲಿ ನಡೆಯುವ ರಾಜ್ಯಮಟ್ಟದ ವಿಶ್ವ ರೈತ ದಿನಾಚರಣೆಯಲ್ಲಿ ಕೃಷಿ ಕ್ಷೇತ್ರದಲ್ಲಿ ದುಡಿದ ಕಾಯಕಯೋಗಿಗಳಿಗೆ ಗೌರವ ಪುರಸ್ಕಾರ ಮಾಡಲು, ಒಂದು ವರ್ಷ ದೆಹಲಿಯ ಗಡಿಯಲ್ಲಿ ಹೋರಾಟ ಮಾಡಿದ ಪಂಜಾಬ್ ಮೂಲದ, ಸಂಯುಕ್ತ ಕಿಸಾನ್ ಮೋರ್ಚಾ ರಾಷ್ಟ್ರೀಯ ನಾಯಕ ಜಗಜಿತ್ ಸಿಂಗ್ ಧಲೆವಾಲ, ಆಗಮಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ನಾಳೆ ದೆಹಲಿಯಲ್ಲಿ ವಿವಿಧ ರಾಜ್ಯಗಳ ರೈತ ಮುಖಂಡರು ಮತ್ತು ಸಂಸದರ ನಿಯೋಗದೊಂದಿಗೆ, ಕೇಂದ್ರ ಕೃಷಿ ಸಚಿವ, ಆಹಾರ ಸಚಿವರನ್ನು ಭೇಟಿ ಮಾಡಿ ಕಬ್ಬು ಬೆಳೆಗಾರರ ಜ್ವಲಂತ ಸಮಸ್ಯೆಗಳ ಪರಿಹಾರ ಕ್ರಮಕ್ಕೆ ಒತ್ತಾಯಿಸಲಾಗುವುದು ಎಂದು ಶಾಂತಕುಮಾರ್ ಹೇಳಿದರು.

ಇದನ್ನೂ ಓದಿ :ಭೂ ಸುಧಾರಣ ಕಾಯ್ದೆ ತಿದ್ದುಪಡಿಗೆ ವಿರೋಧ: ಸಿಎಂ ಮನೆಗೆ ಮುತ್ತಿಗೆ ಎಚ್ಚರಿಕೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.