ETV Bharat / state

ಪಿಪಿಇ ಕಿಟ್ ವೈಜ್ಞಾನಿಕ ವಿಲೇವಾರಿ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ - Bangaluru latest news

ಆಸ್ಪತ್ರೆಗಳಲ್ಲಿ ಕಾರ್ಯ ನಿರ್ವಹಿಸುವ ದಾದಿಯರಿಂದ ಹಿಡಿದು ವೈದ್ಯರವರೆಗೆ ಎಲ್ಲರೂ ಪಿಪಿಇ ಕಿಟ್ ಬಳಕೆ ಮಾಡುತ್ತಾರೆ. ಇದಲ್ಲದೇ, ಕೋವಿಡ್ ಅಲ್ಲದ ಸಾಮಾನ್ಯ ಆಸ್ಪತ್ರೆಗಳಲ್ಲಿ, ಪ್ಯಾರಾ ಮೆಡಿಕಲ್ ಸಂಸ್ಥೆಗಳಲ್ಲಿ, ಸಾರ್ವಜನಿಕರು ಮನೆಗಳಲ್ಲಿ ಬಳಸುವ ಕಿಟ್​​ಗಳ ನಿರ್ವಹಣೆ ಹೇಗೆ ಎಂದು ಹೈಕೋರ್ಟ್ ಪ್ರಶ್ನಿಸಿದೆ.

Notice from HC to the Govt on PPE Kit Scientific Disposal
ಹೈಕೋರ್ಟ್
author img

By

Published : Oct 6, 2020, 6:44 PM IST

ಬೆಂಗಳೂರು : ಪರ್ಸನಲ್ ಪ್ರೊಟೆಕ್ಷನ್ ಇಕ್ವಿಪ್ಮೆಂಟ್(ಪಿಪಿಇ) ಕಿಟ್​​ಗಳ ವೈಜ್ಞಾನಿಕ ವಿಲೇವಾರಿಗೆ ಸಂಬಂಧಿಸಿದಂತೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ರಾಜ್ಯ ಸರ್ಕಾರ, ಬಿಬಿಎಂಪಿ ಹಾಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ನೋಟಿಸ್ ಜಾರಿ ಮಾಡಿರುವ ಹೈಕೋರ್ಟ್, ಕಿಟ್ ನಿರ್ವಹಣೆಯ ವಿಧಾನಗಳನ್ನು ತಿಳಿಸುವಂತೆ ನಿರ್ದೇಶಿಸಿದೆ.

ಈ ಕುರಿತು ನಗರದ ವಕೀಲರಾದ ಕೆ.ಬಿ ವಿಜಯ್ ಕುಮಾರ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ಹಾಗೂ ನ್ಯಾ. ಅರವಿಂದ್ ಕುಮಾರ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಈ ವೇಳೆ, ಅರ್ಜಿದಾರ ವಕೀಲ ಕೆ.ಬಿ ಚಂದ್ರಶೇಖರ್ ವಾದಿಸಿ, ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುವಲ್ಲಿ ಬಳಸುತ್ತಿರುವ ಪಿಪಿಇ ಕಿಟ್​​ಗಳನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕಿದೆ. ಆದರೆ, ಈ ಸಂಬಂಧ ಯಾವುದೇ ಸೂಕ್ತ ಮಾರ್ಗಸೂಚಿಗಳು ಇರುವಂತೆ ಕಾಣುವುದಿಲ್ಲ. ಸೋಂಕಿತರಷ್ಟೇ ಅಲ್ಲದೇ, ಇತರ ಆಸ್ಪತ್ರೆಗಳಲ್ಲಿ ಮತ್ತು ಮನೆಯಲ್ಲೇ ಐಸೋಲೇಷನ್ ಆಗಿ ಚಿಕಿತ್ಸೆ ಪಡೆಯುವ ಜನರು ಬಳಸುವ ಪಿಪಿಇ ಕಿಟ್​​ಗಳ ನಿರ್ವಹಣೆ ಸರಿಯಾಗಿ ಆಗುತ್ತಿಲ್ಲ ಎಂದು ವಿವರಿಸಿದರು. ಇದೇ ವೇಳೆ, ಸರ್ಕಾರದ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ಪಿಪಿಇ ಕಿಟ್​​ಗಳನ್ನು ವಿಲೇವಾರಿ ಮಾಡುವ ಸಂಬಂಧ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆಸ್ಪತ್ರೆಗಳಿಗೆ ಸೂಚನೆ ನೀಡಿದೆ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ ನಗರದಲ್ಲಿ 380 ಕೋವಿಡ್ ಆಸ್ಪತ್ರೆಗಳಿವೆ ಎಂದು ತಿಳಿಸಿದ್ದೀರಿ. ಈ ಆಸ್ಪತ್ರೆಗಳಲ್ಲಿ ಕಾರ್ಯ ನಿರ್ವಹಿಸುವ ದಾದಿಯರಿಂದ ಹಿಡಿದು ವೈದ್ಯರವರೆಗೆ ಎಲ್ಲರೂ ಪಿಪಿಇ ಕಿಟ್ ಬಳಕೆ ಮಾಡುತ್ತಾರೆ. ಇದಲ್ಲದೇ, ಕೋವಿಡ್ ಅಲ್ಲದ ಸಾಮಾನ್ಯ ಆಸ್ಪತ್ರೆಗಳಲ್ಲಿ, ಪ್ಯಾರಾ ಮೆಡಿಕಲ್ ಸಂಸ್ಥೆಗಳಲ್ಲಿ, ಸಾರ್ವಜನಿಕರು ಮನೆಗಳಲ್ಲಿ ಬಳಸುವ ಕಿಟ್​​ಗಳ ನಿರ್ವಹಣೆ ಹೇಗೆ ಎಂದು ಪ್ರಶ್ನಿಸಿತು.

ಅಲ್ಲದೇ, ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ರಾಜ್ಯ ಸರ್ಕಾರ, ಬಿಬಿಎಂಪಿ ಹಾಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಪೀಠ, ಅಕ್ಟೋಬರ್ 17ರೊಳಗೆ ಪಿಪಿಇ ಕಿಟ್​​ಗಳನ್ನು ವೈಜ್ಞಾನಿಕ ಹೇಗೆ ಸಂಗ್ರಹಿಸಲಾಗುವುದು ಮತ್ತು ವಿಲೇವಾರಿ ಮಾಡಲಾಗುವುದು ಎಂಬ ಮಾಹಿತಿಯನ್ನು ಸಲ್ಲಿಸುವಂತೆ ನಿರ್ದೇಶಿಸಿ ವಿಚಾರಣೆ ಮುಂದೂಡಿತು. ಇದೇ ವೇಳೆ, ರಾಜ್ಯದಲ್ಲಿ ಜಿಲ್ಲಾವಾರು ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗೆ ಲಭ್ಯವಿರುವ ಬೆಡ್​ಗಳ ಸಂಖ್ಯೆ, ಐಸಿಯು ಬೆಡ್​ಗಳ ಸಂಖ್ಯೆ ಹಾಗೂ ವೆಂಟಿಲೇಟರ್​​ಗಳ ಲಭ್ಯತೆಯ ವಿವರಗಳನ್ನು ಸಲ್ಲಿಸುವಂತೆಯೂ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.