ETV Bharat / state

ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ - ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲು ಸರ್ಕಾರದ ಸೂಚನೆ

ಎಲ್ಲಾ ಜಿಲ್ಲಾಧಿಕಾರಿಗಳು, ಉಪವಿಭಾಗಾಧಿಕಾರಿಗಳು ಮತ್ತು ತಹಶೀಲ್ದಾರ್ ಅವರಿಗೆ ಆದೇಶ ನೀಡಿರುವ ನಗರಾಭಿವೃದ್ಧಿ ಇಲಾಖೆ ನವೆಂಬರ್ 02ರ ಒಳಗೆ ಅಧ್ಯಕ್ಷ-ಉಪಾಧ್ಯಕ್ಷರಿಗೆ ಚುನಾವಣೆ ನಡೆಸುವಂತೆ ಸೂಚನೆ ನೀಡಿದೆ. ಇನ್ನೂ 117 ಪುರಸಭೆ, 100 ಪಟ್ಟಣ ಪಂಚಾಯಿತಿಗಳಿಗೆ ನೀಡಿದ್ದ ತಡೆಯಾಜ್ಞೆಯನ್ನು ಅ.19ರಂದು ತೆರವುಗೊಳಿಸಲಾಗಿದ್ದು, ಇವುಗಳಿಗೆ ನವೆಂಬರ್ 10 ರೊಳಗೆ ಚುನಾವಣೆ ನಡೆಸುವಂತೆ ಸೂಚಿಸಲಾಗಿದೆ.

Karnataka local body elections
ಸಂಗ್ರಹ ಚಿತ್ರ
author img

By

Published : Oct 23, 2020, 7:19 PM IST

ಬೆಂಗಳೂರು : ಚುನಾವಣೆ ನಡೆದಿದ್ದರೂ ಕಳೆದ ಎರಡು ವರ್ಷಗಳಿಂದ ಅಧಿಕಾರ ಇಲ್ಲದೇ ಖಾಲಿ ಇದ್ದ 276 ನಗರ ಸ್ಥಳೀಯ ಸಂಸ್ಥೆಗಳಿಗೆ ಕೊನೆಗೂ ಪದಗ್ರಹಗಣದ ಸಮಯ ಕೂಡಿ ಬಂದಿದೆ. ನವೆಂಬರ್ 02 ರೊಳಗೆ 59 ನಗರಸಭೆಗಳಿಗೆ, ನವೆಂಬರ್ 10 ರೊಳಗೆ 117 ಪುರಸಭೆ ಹಾಗೂ 100 ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ - ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರ ಸೂಚಿಸಿ ಆದೇಶ ಹೊರಡಿಸಿದೆ.

Karnataka local body elections
ರಾಜ್ಯ ಸರ್ಕಾರದ ಆದೇಶ ಪ್ರತಿ

2018ರ ಆಗಸ್ಟ್​​​ನಲ್ಲಿ 276 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲಾಗಿತ್ತು. ಚುನಾಯಿತ ಪ್ರತಿನಿಧಿಗಳು ಆಯ್ಕೆಯಾದ ಬಳಿಕ ಅಧ್ಯಕ್ಷ - ಉಪಾಧ್ಯಕ್ಷರ ಆಯ್ಕೆಯಾಗಬೇಕು. ಅವರ ಅಧ್ಯಕ್ಷತೆಯಲ್ಲಿ ಮೊದಲ ಸಭೆ ನಡೆದ ಬಳಿಕ ಚುನಾಯಿತ ಪ್ರತಿನಿಧಿಗಳ ಆಡಳಿತ ಜಾರಿಗೆ ಬರಲಿದೆ. ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ನಿಗದಿಪಡಿಸಲಾಗಿದ್ದ ಮೀಸಲು ವಿವಾದಕ್ಕೆ ಕಾರಣವಾಗಿತ್ತು. ಮೀಸಲಾತಿ ನಿಗದಿಯಲ್ಲಿ ಪಕ್ಷಪಾತ ನಡೆದಿದೆ ಎಂದು ಕೆಲವರು ಹೈಕೋರ್ಟ್ ಮೆಟ್ಟಿಲೇರಿದ್ದರು.

ನ್ಯಾಯಾಲಯ ಮೀಸಲಾತಿಗೆ ತಡೆಯಾಜ್ಞೆ ನೀಡಿತ್ತು. ಇತ್ತೀಚೆಗೆ ನಡೆದ ವಿಧಾನಮಂಡಲದ ಅಧಿವೇಶನದಲ್ಲಿ ಈ ಬಗ್ಗೆ ಗಂಭೀರ ಚರ್ಚೆ ನಡೆದಿತ್ತು. ಪಕ್ಷಾತೀತವಾಗಿ ವಿಧಾನ ಪರಿಷತ್ ಸದಸ್ಯರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು. ಆದಷ್ಟು ಶೀಘ್ರವಾಗಿ ಪರಿಷ್ಕೃತ ಮೀಸಲಾತಿ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿ ತಡೆಯಾಜ್ಞೆ ತೆರವುಗೊಳಿಸಿ ಚುನಾಯಿತ ಸದಸ್ಯರ ಆಡಳಿತ ಅಸ್ತಿತ್ವಕ್ಕೆ ಬರುವಂತೆ ನೋಡಿಕೊಳ್ಳುವ ಭರವಸೆಯನ್ನು ಪೌರಾಡಳಿತ ಸಚಿವ ನಾರಾಯಣಗೌಡ ಸದನಕ್ಕೆ ನೀಡಿದ್ದರು. ಅದರಂತೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆದು, ಮಾರ್ಗಸೂಚಿಗಳ ಪ್ರಕಾರವೇ ಅಕ್ಟೋಬರ್ 8ರಂದು ಪರಿಷ್ಕೃತ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಅದರಲ್ಲೂ ಲೋಪಗಳಿವೆ ಎಂದು ಕೆಲವರು ಹೈಕೋರ್ಟ್ ಮೆಟ್ಟಿಲೇರಿದ್ದರು.

Karnataka local body elections
ರಾಜ್ಯ ಸರ್ಕಾರದ ಆದೇಶ ಪ್ರತಿ

ಮತ್ತೆ ವಿಚಾರಣೆ ನಡೆಸಿದ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಮುಂದುವರೆದ ವಿಚಾರಣೆಯಲ್ಲಿ ಅಕ್ಟೋಬರ್ 18ರಂದು 56 ನಗಸಭೆಗಳ ಮೀಸಲಾತಿ ಪಟ್ಟಿಗೆ ನೀಡಲಾಗಿದ್ದ ತಡೆಯಾಜ್ಞೆ ತೆರವುಗೊಳಿಸಲಾಗಿದೆ. ತಕ್ಷಣವೇ ಎಲ್ಲ ಜಿಲ್ಲಾಕಾರಿಗಳು, ಉಪವಿಭಾಗಾಕಾರಿಗಳು ಮತ್ತು ತಹಶೀಲ್ದಾರ್ ಅವರಿಗೆ ಆದೇಶ ನೀಡಿರುವ ನಗರಾಭಿವೃದ್ಧಿ ಇಲಾಖೆ ನವೆಂಬರ್ 02ರ ಒಳಗೆ ಅಧ್ಯಕ್ಷ - ಉಪಾಧ್ಯಕ್ಷರಿಗೆ ಚುನಾವಣೆ ನಡೆಸುವಂತೆ ಸೂಚನೆ ನೀಡಿದೆ. ಇನ್ನೂ 117 ಪುರಸಭೆ, 100 ಪಟ್ಟಣ ಪಂಚಾಯಿತಿಗಳಿಗೆ ನೀಡಿದ್ದ ತಡೆಯಾಜ್ಞೆಯನ್ನು ಅ.19ರಂದು ತೆರವುಗೊಳಿಸಲಾಗಿದ್ದು, ಇವುಗಳಿಗೆ ನವೆಂಬರ್ 10 ರೊಳಗೆ ಚುನಾವಣೆ ನಡೆಸುವಂತೆ ಸೂಚಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.