ETV Bharat / state

'ಜಕ್ಕೂರ್ ಏರೋಡ್ರಮ್ ವ್ಯಾಪ್ತಿಯಲ್ಲಿ ನಿಯಮ ಮೀರಿ ನಿರ್ಮಿಸಿದ ಕಟ್ಟಡಗಳ ತೆರವಿಗೆ ಸೂಚನೆ'

author img

By

Published : Jul 15, 2021, 9:12 PM IST

ಕಳೆದ ನಾಲ್ಕು ವರ್ಷಗಳಿಂದ ಸ್ಥಗಿತವಾಗಿದ್ದ ಜಕ್ಕೂರು ಸರ್ಕಾರಿ ವೈಮಾನಿಕ ತರಬೇತಿ ಶಾಲೆಯನ್ನು ಆಗಸ್ಟ್ 20 ರಿಂದ ಆರಂಭಿಸಲಾಗುವುದು ಎಂದು ಸಚಿವ ಡಾ‌. ನಾರಾಯಣ ಗೌಡ ತಿಳಿಸಿದರು.

vikasa soudha
ವಿಕಾಸ ಸೌಧದಲ್ಲಿ ನಡೆದ ಸಭೆ

ಬೆಂಗಳೂರು: ಜಕ್ಕೂರು ಏರೋಡ್ರಮ್​ನ 5 ಕಿ. ಮೀ. ವ್ಯಾಪ್ತಿಯಲ್ಲಿ ನಿಯಮ ಮೀರಿ 45 ಮೀಟರ್‌ಗಿಂತಲೂ ಎತ್ತರ ಕಟ್ಟಿರುವ ಕಟ್ಟಡಗಳನ್ನು ತಕ್ಷಣವೇ ತೆರವುಗೊಳಿಸಲು ಬಿಬಿಎಂಪಿ ಅಧಿಕಾರಿಗಳಿಗೆ, ಯುವ ಸಬಲೀಕರಣ ಮತ್ತು ಕ್ರೀಡೆ, ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಾ‌. ನಾರಾಯಣ ಗೌಡ ಆದೇಶಿಸಿದರು.

ವಿಕಾಸ ಸೌಧದಲ್ಲಿ ಇಂದು ನಡೆದ ಸಭೆಯಲ್ಲಿ ಮಾತನಾಡಿ, ಜಕ್ಕೂರು ಏರೋಡ್ರಮ್ ನ 5 ಕಿ. ಮಿ. ವ್ಯಾಪ್ತಿಯಲ್ಲಿ 45 ಮೀಟರ್ ಗಿಂತ ಎತ್ತರದ ಕಟ್ಟಡ ಕಟ್ಟುವಂತಿಲ್ಲ. ಆದಾಗ್ಯೂ ಡಿಜಿಸಿಎ ನಿಯಮ ಮೀರಿ, ಪರವಾನಿಗೆ ಇಲ್ಲದೆ ಕಟ್ಟಡಗಳನ್ನು ಕಟ್ಟಿದ್ದಾರೆ. ಸಚಿವರ ಸೂಚನೆ ಮೇರೆಗೆ ಸರ್ವೆ ನಡೆಸಿದಾಗ ಈ ವಿಚಾರ ಬೆಳಕಿಗೆ ಬಂದಿದೆ. ಪ್ರಾಥಮಿಕ ಸಮೀಕ್ಷೆಯಲ್ಲಿ 15 ಕಟ್ಟಡಗಳು ನಿಯಮ ಉಲ್ಲಂಘಿಸಿ 45 ಮೀಟರ್‌ಗಿಂತ ಹೆಚ್ಚು ಎತ್ತರದ ಕಟ್ಟಡಗಳನ್ನು ನಿರ್ಮಿಸಿರುವುದು ಪತ್ತೆ ಹಚ್ಚಲಾಗಿದೆ. ಆದ್ದರಿಂದ ಅಕ್ರಮ ಕಟ್ಟಡಗಳನ್ನು ತಕ್ಷಣವೇ ತೆರವು ಮಾಡಬೇಕು ಎಂದು ಸೂಚಿಸಿದರು.

ನಿಯಮ ಮೀರಿ 5 ಕಿ. ಮೀ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಿಸಿರುವುದನ್ನು ಪತ್ತೆ ಹಚ್ಚಲು ಡ್ರೋನ್​ ಸರ್ವೆ ನಡೆಸಿ 15 ದಿನಗಳಲ್ಲಿ ವರದಿ ನೀಡುವಂತೆ ಬಿಬಿಎಂಪಿ ಅಧಿಕಾರಿಗಳು ಹಾಗೂ ಇಲಾಖೆ ಅಧಿಕಾರಿಗಳಿಗೆ ಜಂಟಿ ಸರ್ವೆ ನಡೆಸುವಂತೆ ಸೂಚಿಸಿದರು. ಕೆಲವರು ಎನ್‌ಓಸಿ ಪಡೆಯದೆ ಕಟ್ಟಡ ನಿರ್ಮಿಸಿದ್ದು, ಮತ್ತೆ ಕೆಲವರು ಎನ್ ಓ ಸಿ ಪಡೆದರೂ ಅನುಮೋದಿತ ಎತ್ತರದ ಮಿತಿ ಉಲ್ಲಂಘಿಸಿದ್ದಾರೆ. ಏರ್​ಪೋರ್ಟ್​ ಅಥಾರಿಟಿ ಆಫ್ ಇಂಡಿಯಾ ನಡೆಸಿದ ಸರ್ವೆಯಲ್ಲಿ 11 ಕಟ್ಟಡಗಳು ಹಾಗೂ ವೈಮಾನಿಕ ತರಬೇತಿ ಶಾಲೆಯಿಂದ ನಡೆಸಿದ ಸರ್ವೆಯಲ್ಲಿ 4 ಕಟ್ಟಡಗಳು ನಿಯಮ ಉಲ್ಲಂಘಿಸಿದ್ದು ಪತ್ತೆಯಾಗಿದೆ. ಕೆಲವರು ಸರ್ವೆ ನಡೆಸಲು ಅಸಹಕಾರ ತೋರಿದ್ದಾರೆ. ಹೀಗಾಗಿ ಮತ್ತೊಮ್ಮೆ ಸರ್ವೆ ನಡೆಸಲು ಸೂಚನೆ ನೀಡಿದರು‌.

ಬಾಡಿಗೆ ಬಾಕಿ ನೀಡದ ಕಂಪೆನಿ ಆಸ್ತಿ ಜಪ್ತಿ

ಲ್ಯಾಂಡಿಂಗ್ ಹಾಗೂ ಪಾರ್ಕಿಂಗ್ ಬಾಡಿಗೆ ಬಾಕಿ ನೀಡದ ಕಂಪೆನಿಗಳ ಆಸ್ತಿಯನ್ನು ಸೀಜ್ ಮಾಡಲಾಗಿದೆ ಎಂದು ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು. ಎಲ್ಲ ಕಂಪೆನಿಗಳಿಂದ ಸುಮಾರು ರೂ. 5 ಕೋಟಿ ಬಾಡಿಗೆ ಹಣ ಬಾಕಿ ಇದೆ. ಬಾಕಿ ಹಣ ಪಾವತಿಸಲು ನೀಡಿರುವ ಕೊನೆಯ ನೋಟಿಸ್ ನ ಅವಧಿ ಮುಗಿದಿದೆ. ಕೆಲವು ಕಂಪೆನಿಗಳು ಸ್ವಲ್ಪ ಪ್ರಮಾಣದಲ್ಲಿ ಬಾಕಿ ಪಾವತಿಸಿದ್ದಾರೆ‌. ಎಲ್ಲ ಕಂಪೆನಿಗಳು ಹಣ ಪಾವತಿಸಬೇಕು. ಅದಕ್ಕಾಗಿ ಕಂಪೆನಿಗಳ ಮುಖ್ಯಸ್ಥರ ಜೊತೆ ಮಾತನಾಡುವಂತೆ ಅವರು ಸೂಚಿಸಿದರು.

ಆಗಸ್ಟ್ 20 ರಿಂದ ವೈಮಾನಿಕ‌ ತರಬೇತಿ ಶಾಲೆ ಆರಂಭ

ಕಳೆದ ನಾಲ್ಕು ವರ್ಷಗಳಿಂದ ಸ್ಥಗಿತವಾಗಿದ್ದ ಜಕ್ಕೂರು ಸರ್ಕಾರಿ ವೈಮಾನಿಕ ತರಬೇತಿ ಶಾಲೆ ಆಗಸ್ಟ್ 20 ರಿಂದ ಆರಂಭಿಸಲಾಗುವುದು. ಮುಖ್ಯ ಬೋಧಕರ ನೇಮಕವಾಗಿದ್ದು, ಸಹಾಯಕ ಬೋಧಕರ ನೇಮಕ ಪ್ರಕ್ರಿಯೆ ನಡೆಯುತ್ತಿದೆ. ಶೀಘ್ರದಲ್ಲಿ ಎಲ್ಲ ಪ್ರಕ್ರಿಯೆ ಮುಗಿಸಿ, ಮುಖ್ಯಮಂತ್ರಿಗಳಿಂದ ಚಾಲನೆ ಕೊಡಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.

ಅಪರಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತ ಡಾ. ಗೋಪಾಲಕೃಷ್ಣ ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಶೃಂಗೇರಿ ಯುವತಿ ಮೇಲೆ ಆ್ಯಸಿಡ್​ ದಾಳಿ ಪ್ರಕರಣ: ನಾಲ್ವರಿಗೆ ಜೀವಾವಧಿ ಶಿಕ್ಷೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.