ETV Bharat / state

ಕೋವಿಡ್ ಕರ್ತವ್ಯಕ್ಕೆ ಗೈರಾದ 3 ಸಾವಿರ ಸಿಬ್ಬಂದಿಗೆ ನೋಟಿಸ್: ಅಶ್ವತ್ಥ ನಾರಾಯಣ

ಕೋವಿಡ್ ಕರ್ತವ್ಯಕ್ಕೆ ಎಂದು ಪಶ್ಚಿಮ ವಲಯಕ್ಕೆ 6,500 ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಇದರಲ್ಲಿ 3 ಸಾವಿರ‌ ಮಂದಿ ಬಂದಿಲ್ಲ. ಹೀಗಾಗಿ ವಲಯದ ಕೋವಿಡ್ ಉಸ್ತುವಾರಿ ಅಧಿಕಾರಿ ಉಜ್ವಲ್ ಘೊಷ್ ಅವರು ಗೈರಾದ ಸಿಬ್ಬಂದಿಗೆ ನೋಟಿಸ್ ನೀಡಿದ್ದಾರೆ.

Ashwaththanarayana
ಕೋವಿಡ್ ಕರ್ತವ್ಯಕ್ಕೆ ಗೈರಾದ 3ಸಾವಿರ ಸಿಬ್ಬಂದಿಗೆ ನೋಟಿಸ್:ಅಶ್ವತ್ಥ ನಾರಾಯಣ
author img

By

Published : Aug 8, 2020, 8:10 AM IST

ಬೆಂಗಳೂರು: ಬಿಬಿಎಂಪಿ ಪಶ್ಚಿಮ ವಲಯದ ಕೋವಿಡ್ ಪರಿಸ್ಥಿತಿ ಅವಲೋಕಿಸಿದ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಕರ್ತವ್ಯಕ್ಕೆ ಗೈರಾದ 3 ಸಾವಿರ ಮಂದಿಗೆ ನೋಟಿಸ್ ‌ನೀಡಲಾಗಿದೆ ಎಂದು ತಿಳಿಸಿದರು.

ಕೋವಿಡ್ ಕರ್ತವ್ಯಕ್ಕೆ ಗೈರಾದ 3ಸಾವಿರ ಸಿಬ್ಬಂದಿಗೆ ನೋಟಿಸ್:ಅಶ್ವತ್ಥ ನಾರಾಯಣ

ಪಶ್ಚಿಮ ವಲಯಕ್ಕೆ 6,500 ಸಿಬ್ಬಂದಿಯನ್ನು ಕೋವಿಡ್ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಇದರಲ್ಲಿ 3 ಸಾವಿರ‌ ಮಂದಿ ಬಂದಿಲ್ಲ. ಹೀಗಾಗಿ ವಲಯದ ಕೋವಿಡ್ ಉಸ್ತುವಾರಿ ಅಧಿಕಾರಿ ಉಜ್ವಲ್ ಘೊಷ್ ಅವರು ನೋಟಿಸ್ ನೀಡಿದ್ದಾರೆ. ಅದರಲ್ಲಿ 700 ಮಂದಿ ಉತ್ತರ ಕೊಟ್ಟಿದ್ದಾರೆ. ಕೇಂದ್ರ ಸರ್ಕಾರಿ‌ ನೌಕರರು ಕೂಡ ಇದರಲ್ಲಿ ಸೇರಿದ್ದಾರೆ ಎಂದು ಅವರು ತಿಳಿಸಿದರು.

ಸಿಬ್ಬಂದಿ ಕೊರತೆಯಿಂದಾಗಿ ಶಂಕಿತ ರೋಗಿಗಳ ಗಂಟಲು ದ್ರವದ ಮಾದರಿ ಸಂಗ್ರಹ ಹೆಚ್ಚು ಪ್ರಮಾಣದಲ್ಲಿ ಮಾಡಲು ಕಷ್ಟ ಆಗುತ್ತಿದೆ. ಹೀಗಾಗಿ ಹೆಚ್ಚುವರಿ ಸಿಬ್ಬಂದಿಯನ್ನು ಕಾಲೇಜು ಶಿಕ್ಷಣ ಇಲಾಖೆಯಿಂದ ಒದಗಿಸುವಂತೆ ಆಯುಕ್ತರಾದ ಪಿ.ಪ್ರದೀಪ್ ಅವರಿಗೆ ಸೂಚಿಸಿದ್ದು, ಲ್ಯಾಬ್​ಟೆಕ್ನಿಷಿಯನ್​ಗಳ ಕೊರತೆಗೆ ಪರ್ಯಾಯ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಖಾಸಗಿ ಆಸ್ಪತ್ರೆಗೆ ಖುದ್ದು ಹೋಗಿ ಮಾತನಾಡಿ: ಕೆಲವು ಖಾಸಗಿ ಆಸ್ಪತ್ರೆಗಳು ನಿಗದಿ ಪ್ರಕಾರ ಬೆಡ್ ಕೊಡುತ್ತಿಲ್ಲ‌‌ ಎನ್ನುವ ಆರೋಪಗಳು ಇದ್ದು, ಈ ಬಗ್ಗೆ ಅಧಿಕಾರಿಗಳು ಖುದ್ದು ಹೋಗಿ ಪರಿಶೀಲಿಸಬೇಕು. ತಪ್ಪು ಎಸಗಿದ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ಸೂಚಿಸಿದರು. ಖಾಸಗಿ ಆಸ್ಪತ್ರೆಗಳ ಆಡಳಿತ ಮಂಡಳಿಗಳ ಜೊತೆ ಸಭೆ ನಡೆಸಿದ್ದರ ಬಗ್ಗೆ ಘೋಷ್ ಅವರು ಡಿಸಿಎಂ ಅವರಿಗೆ ಮಾಹಿತಿ‌ ನೀಡಿದರು.

ಇನ್ನು ಮಲ್ಲೇಶ್ವರದ ಮಣಿಪಾಲ್ ಆಸ್ಪತ್ರೆ ಮತ್ತು ಕೊಲಂಬಿಯಾ ಏಷ್ಯಾ ಆಸ್ಪತ್ರೆಗಳು ನಿಗದಿಯಂತೆ ಬೆಡ್​ಗಳನ್ನು ನೀಡುತ್ತಿಲ್ಲ ಎನ್ನುವ ದೂರುಗಳು ಬಂದಿದ್ದು, ಅದರ ಪರಿಶೀಲನೆಗೂ ಡಿಸಿಎಂ ಸೂಚಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.