ETV Bharat / state

ರೋಹಿಣಿ ಸಿಂಧೂರಿಗೆ ನೋಟಿಸ್​​​​: ಶನಿವಾರ ಖುದ್ದು ಕಾರ್ಯದರ್ಶಿ ಕಚೇರಿಗೆ ಹಾಜರಾಗಲು ಸೂಚನೆ - ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ

ಐಎಎಸ್ ಅಧಿಕಾರಿ ರೋಹಿಣಿ ವಿರುದ್ಧ ತನಿಖೆ ನಡೆಸುವಂತೆ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ದೂರು ನೀಡಿದ್ದರು. ಈ ಹಿನ್ನೆಲೆ ಸರ್ಕಾರಕ್ಕೆ ಸಮಗ್ರ ವರದಿ ನೀಡುವ ಸಲುವಾಗಿ ಒಟ್ಟು 5 ಗಂಭೀರ ಆರೋಪಗಳ ಬಗ್ಗೆ ಹೇಳಿಕೆ ನೀಡಲು ಸೂಚಿಸಲಾಗಿದೆ.

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ನೋಟಿಸ್ : ನಾಳೆ ಖುದ್ದು ಕಾರ್ಯದರ್ಶಿ ಕಚೇರಿಗೆ ಹಾಜರಾಗಲು ಸೂಚನೆ

author img

By

Published : Jul 29, 2022, 10:11 PM IST

Updated : Jul 30, 2022, 6:41 AM IST

ಬೆಂಗಳೂರು: ಮೈಸೂರು ಜಿಲ್ಲಾಧಿಕಾರಿಯಾಗಿದ್ದ ವೇಳೆ ಕೆಲವು ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ನೋಟಿಸ್ ನೀಡಲಾಗಿದೆ. ಸರ್ಕಾರದ ಕಾರ್ಯದರ್ಶಿ ಡಾ.ಜೆ.ರವಿಶಂಕರ್‌ ಅವರು ಈ ನೋಟಿಸ್ ನೀಡಿದ್ದು, ಇಂದು(ಶನಿವಾರ) ಬೆಳಗ್ಗೆ 11 ಗಂಟೆಗೆ ಖುದ್ದು ಕಚೇರಿಗೆ ಹಾಜರಾಗಿ ಆರೋಪಗಳಿಗೆ ಉತ್ತರಿಸಲು ನೋಟಿಸ್​​ನಲ್ಲಿ ಸೂಚಿಸಲಾಗಿದೆ.

ಐಎಎಸ್ ಅಧಿಕಾರಿ ರೋಹಿಣಿ ವಿರುದ್ಧ ತನಿಖೆ ನಡೆಸುವಂತೆ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ದೂರು ನೀಡಿದ್ದರು. ಈ ಹಿನ್ನೆಲೆ ಸರ್ಕಾರಕ್ಕೆ ಸಮಗ್ರ ವರದಿ ನೀಡುವ ಸಲುವಾಗಿ ಒಟ್ಟು 5 ಗಂಭೀರ ಆರೋಪಗಳ ಬಗ್ಗೆ ಹೇಳಿಕೆ ನೀಡಲು ಸೂಚಿಸಲಾಗಿದೆ.

ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ವಿಚಾರದಲ್ಲಿ ಕೋಟ್ಯಂತರ ಹಣ ಅಕ್ರಮ, ಪಾರಂಪರಿಕ ಕಟ್ಟಡದಲ್ಲಿ ಅಕ್ರಮ ಈಜುಕೊಳ ನಿರ್ಮಾಣ ಆರೋಪ, ಪಾರಂಪರಿಕ ಜಿಲ್ಲಾಧಿಕಾರಿ ನಿವಾಸದಲ್ಲಿ ಲಕ್ಷಾಂತರ ರೂ. ವೆಚ್ಚದಲ್ಲಿ ನೆಲಹಾಸು, ಚಾಮರಾಜನಗರ ಜಿಲ್ಲಾಸ್ಪತ್ರೆ ಆಕ್ಸಿಜನ್ ದುರಂತ ವಿಚಾರ ಸೇರಿದಂತೆ ಒಟ್ಟು 5 ಗಂಭೀರ ಆರೋಪಗಳ ಬಗ್ಗೆ ಹೇಳಿಕೆ ನೀಡಲು ಸರ್ಕಾರ ಸೂಚನೆ ನೀಡಿದೆ.

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ನೋಟಿಸ್
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ನೋಟಿಸ್

2021 ಮೇ ತಿಂಗಳಲ್ಲಿ 969 ಜನರು ಮೃತಪಟ್ಟವರ ಬಗ್ಗೆ ಮಾಹಿತಿ ನೀಡಿದಾಗ ಅಂಕಿ - ಅಂಶಗಳ ಪ್ರಕಾರ 238 ರ ಲೆಕ್ಕ ನೀಡಿದ್ದರು. ಚಾಮರಾಜನಗರ ಆಕ್ಸಿಜನ್ ದುರಂತಕ್ಕೆ ರೋಹಿಣಿ ಸಿಂಧೂರಿ ಕಾರಣ ಎಂಬ ಆರೋಪ ಇತ್ತು. ಹೀಗಾಗಿ ಈ ಐದು ಆರೋಪಗಳ ವಿಚಾರವಾಗಿ ರೋಹಿಣಿ ಸಿಂಧೂರಿ‌ ಅವರಿಂದ ಹೇಳಿಕೆ ಪಡೆಯಲು ನೋಟಿಸ್ ನೀಡಲಾಗಿದೆ.

ಜುಲೈ 30 ( ಶನಿವಾರ ) ಬೆಳಗ್ಗೆ 11 ಗಂಟೆಗೆ ಸರ್ಕಾರಿ ಕಾರ್ಯದರ್ಶಿ ವಸತಿ ಇಲಾಖೆ ಕಚೇರಿಗೆ ಬರಲು ತಿಳಿಸಲಾಗಿದೆ. ರೋಹಿಣಿ ಸಿಂಧೂರಿ ಬಳಿ‌ ಹೇಳಿಕೆ ಪಡೆದ ನಂತರ ಕಾರ್ಯದರ್ಶಿ ಡಾ.ಜೆ. ರವಿಶಂಕರ್ ಸರ್ಕಾರಕ್ಕೆ ವರದಿ ಸಲ್ಲಿಸಲಿದ್ದಾರೆ.

ಇದನ್ನೂ ಓದಿ: ಕಬಿನಿ ಬಲದಂಡೆ ನಾಲೆಗೆ ಉರುಳಿಬಿದ್ದ ಕಾರು; ಇಬ್ಬರು ವಕೀಲರ ಸಾವು, ಓರ್ವ ಪ್ರಾಣಾಪಾಯದಿಂದ ಪಾರು

Last Updated : Jul 30, 2022, 6:41 AM IST

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.