ETV Bharat / state

ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಮತದಾರರ ನೋಂದಣಿಗೆ ನವೆಂಬರ್ 6 ಕೊನೆಯ ದಿನಾಂಕ: ಜಿಲ್ಲಾಧಿಕಾರಿ ದಯಾನಂದ - ಬೆಂಗಳೂರು ಪದವೀಧರರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರ

ಬೆಂಗಳೂರು ಪದವೀಧರರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರದ ಮತದಾರರ ನೋಂದಣಿಗೆ ಅರ್ಜಿ ಸ್ವೀಕರಿಸಲು ನವೆಂಬರ್​​ 6 ಕೊನೆ ದಿನಾಂಕ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ ಎ ದಯಾನಂದ ತಿಳಿಸಿದ್ದಾರೆ.

nov-6-last-date-for-voter-registration-for-graduate-and-teacher-constituency-district-collector-dayananda
ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಮತದಾರರ ನೋಂದಣಿಗೆ ನವೆಂಬರ್ 6 ಕೊನೆಯ ದಿನಾಂಕ: ಜಿಲ್ಲಾಧಿಕಾರಿ ದಯಾನಂದ
author img

By ETV Bharat Karnataka Team

Published : Oct 19, 2023, 7:28 AM IST

ಬೆಂಗಳೂರು : ಕರ್ನಾಟಕ ವಿಧಾನ ಪರಿಷತ್​​ಗೆ ಸಂಬಂಧಪಟ್ಟಂತೆ ಬೆಂಗಳೂರು ಪದವೀಧರರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯನ್ನು ನೂತನವಾಗಿ ಸಿದ್ಧಪಡಿಸುವ ಕಾರ್ಯವು ಈಗಾಗಲೇ ಪ್ರಾರಂಭವಾಗಿದ್ದು, ನಮೂನೆ-19ರಲ್ಲಿ ಅರ್ಜಿ ಸ್ವೀಕರಿಸಲು ನವೆಂಬರ್ 6 ಕೊನೆಯ ದಿನಾಂಕವಾಗಿರುತ್ತದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಕೆ ಎ ದಯಾನಂದ ತಿಳಿಸಿದರು.

ಬೆಂಗಳೂರು ಪದವೀಧರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರದ ಮತದಾರರ ನೋಂದಣಿಯ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಕರ್ನಾಟಕ ಪದವೀಧರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರಗಳ ಮತದಾರರ ಪಟ್ಟಿಯನ್ನು ಹೊಸದಾಗಿ ಸಿದ್ಧಪಡಿಸುತ್ತಿರುವುದರಿಂದ ಈ ಹಿಂದಿನ ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಮತದಾರರು ಕೂಡ ನಮೂನೆ-19ರಲ್ಲಿ ಹೊಸದಾಗಿ ಅರ್ಜಿ ಸಲ್ಲಿಸಬೇಕಾಗಿರುತ್ತದೆ ಎಂದು ತಿಳಿಸಿದರು.

ಅರ್ಜಿ ನಮೂನೆ-19ರಲ್ಲಿ ಅರ್ಜಿಯನ್ನು ಸಲ್ಲಿಸಲು ನವೆಂಬರ್ 6 ಕೊನೆ ದಿನಾಂಕವಾಗಿರುತ್ತದೆ. ಕರಡು ಮತದಾರರ ಪಟ್ಟಿಯು ನವೆಂಬರ್ 23ರಂದು ಪ್ರಕಟಿಸಲಾಗುವುದು. ಹಕ್ಕು ಮತ್ತು ಆಕ್ಷೇಪಣೆಗಳಿಗಾಗಿ ನವೆಂಬರ್ 23ರಿಂದ ಡಿಸೆಂಬರ್ 25ರೊಳಗೆ ಅರ್ಜಿ ಸಲ್ಲಿಸಬೇಕು. ಅಂತಿಮ ಮತದಾರರ ಪಟ್ಟಿಯು ಡಿಸೆಂಬರ್ 30ರಂದು ಪ್ರಕಟಿಸಲಾಗುತ್ತದೆ ಎಂದು ಹೇಳಿದರು. ಭಾರತ ಚುನಾವಣಾ ಆಯೋಗವು ಬೆಂಗಳೂರು ಪದವೀಧರ ಕ್ಷೇತ್ರ ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರಗಳ ಮತದಾರರ ಪಟ್ಟಿಗೆ ಸಂಬಂಧಪಟ್ಟಂತೆ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರನ್ನು ಮತದಾರರ ನೋಂದಣಾಧಿಕಾರಿಯಾಗಿ ನೇಮಿಸಿರುತ್ತದೆ ಎಂದರು.

ಪದವೀಧರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನಮೂನೆ-18ರಲ್ಲಿ ಹಾಗೂ ಶಿಕ್ಷಕರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನಮೂನೆ-19ರಲ್ಲಿ ಅರ್ಜಿಗಳನ್ನು ದಾಖಲೆಗಳೊಂದಿಗೆ ಅರ್ಹ ಪದವೀಧರರು ಮತ್ತು ಶಿಕ್ಷಕರು ನಿರ್ದಿಷ್ಟಪಡಿಸಿದ ಅಧಿಕಾರಿಗಳಿಗೆ ನೇರವಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬೇಕು. ಈ ಅರ್ಜಿ ನಮೂನೆಗಳನ್ನು ಅರ್ಹ ಪದವೀಧರರು ಮತ್ತು ಶಿಕ್ಷಕರು ಸಂಬಂಧಪಟ್ಟ ಸಹಾಯಕ ಮತದಾರರ ನೋಂದಣಾಧಿಕಾರಿಗಳು /ತಹಶೀಲ್ದಾರ್/ನಿಯೋಜಿತ ಅಧಿಕಾರಿಗಳ ಕಚೇರಿಗಳಿಂದ ಮತ್ತು ಶಿಕ್ಷಣ ಸಂಸ್ಥೆಗಳಿಂದ ಪಡೆಯಬಹುದಾಗಿದೆ. ಅಥವಾ ವೆಬ್ಸೈಟ್ https://ceo.karnataka.gov.in/341/teachers-and-graduates-constituencies-2024/en ನಿಂದ ಕೂಡ ಡೌನ್ ಲೋಡ್ ಮಾಡಿಕೊಳ್ಳಬಹುದು ಎಂದು ತಿಳಿಸಿದರು.

ಪದವೀಧರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳಲು ಪದವೀಧರ ಕ್ಷೇತ್ರದಲ್ಲಿ ಸಾಮಾನ್ಯ ನಿವಾಸಿಯಾಗಿದ್ದು ಮತ್ತು 1ನೇ ನವೆಂಬರ್ 2023ಕ್ಕೆ ಮೊದಲು ಕನಿಷ್ಠ ಮೂರು ವರ್ಷಗಳ ಕಾಲ ಅವರು ಯುಜಿಸಿಯಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದ ಪದವೀಧರರಾಗಿರಬೇಕು/ಅಧಿಸೂಚಿತ ಸಂಸ್ಥೆಯಿಂದ ಡಿಪ್ಲೋಮೊ ಹೊಂದಿರಬೇಕು ಅಥವಾ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ಸಿದ್ಧಪಡಿಸಿರುವ ಪದವೀಧರರಿಗೆ ಸಮಾನವಾದ ವಿದ್ಯಾರ್ಹತೆಗಳನ್ನು ಹೊಂದಿರಬೇಕು.

ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳಲು ಪದವೀಧರ ಕ್ಷೇತ್ರದಲ್ಲಿ ಸಾಮಾನ್ಯ ನಿವಾಸಿಯಾಗಿದ್ದು ಮತ್ತು 1ನೇ ನವೆಂಬರ್ 2023ಕ್ಕೆ ಮೊದಲು ಆರು ವರ್ಷದೊಳಗೆ ಅರ್ಹ ವ್ಯಕ್ತಿ ನಿರ್ದಿಷ್ಟಪಡಿಸಿದ ಶಿಕ್ಷಣ ಸಂಸ್ಥೆಗಳ ಪಟ್ಟಿಯಲ್ಲಿ ಸತತವಾಗಿ ಮೂರು ವರ್ಷಗಳ ಕಾಲ ಕರ್ನಾಟಕ ರಾಜ್ಯದಲ್ಲಿ ಪ್ರೌಢ ಶಾಲೆಗಿಂತ ಕಡಿಮೆ ಇಲ್ಲದಂತೆ ಬೋಧನೆಯಲ್ಲಿ ತೊಡಗಿರುವ ವ್ಯಕ್ತಿಯು ಮತದಾರರ ಪಟ್ಟಿಯಲ್ಲಿ ತನ್ನ ಹೆಸರನ್ನು ಸೇರಿಸಲು ಅರ್ಹರಾಗಿರುತ್ತಾರೆ ಎಂದು ತಿಳಿಸಿದರು.

ಶಿಕ್ಷಕರ ಕ್ಷೇತ್ರ ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳಲು ನಮೂನೆ-19ರಲ್ಲಿ ಅರ್ಜಿಯನ್ನು ಸಲ್ಲಿಸಿ ಶಿಕ್ಷಕರ ಕ್ಷೇತ್ರದಲ್ಲಿ ಮತದಾರನಾಗಿ ನೋಂದಾಯಿಸಿಕೊಳ್ಳಲು ತನ್ನ ಶೈಕ್ಷಣಿಕ ಸಂಸ್ಥೆಯ ಮುಖ್ಯಸ್ಥರಿಂದ ಅನುಬಂಧ-2ರಲ್ಲಿ ದೃಢೀಕರಣ ಪತ್ರವನ್ನು ಸಲ್ಲಿಸತಕ್ಕದ್ದು. ಪದವೀಧರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳುವ ಸಂದರ್ಭದಲ್ಲಿ ನಮೂನೆ-18/ನಮೂನೆ-19 ರೊಂದಿಗೆ ವಿದ್ಯಾರ್ಹತೆಗೆ ಸಂಬಂಧಪಟ್ಟ ದಾಖಲೆಗಳ ದೃಢೀಕೃತ ಪ್ರತಿಯನ್ನು ಸಲ್ಲಿಸಬೇಕು. ದಾಖಲೆಗಳನ್ನು ಗೊತ್ತುಪಡಿಸಿದ ಅಧಿಕಾರಿಗಳು/ ಹೆಚ್ಚುವರಿ ನಿಯೋಜಿತ ಅಧಿಕಾರಿಗಳು/ ಸಂಬಂಧಪಟ್ಟ ಜಿಲ್ಲೆಯ ಗೆಜೆಟೆಡ್ ಅಧಿಕಾರಿ/ ನೋಟರಿಯಿಂದ ದೃಢೀಕರಿಸಿ ಸಲ್ಲಿಸಬೇಕು ಎಂದು ಸೂಚಿಸಿದರು.

ಅರ್ಹ ಪದವೀಧರರು ಮತ್ತು ಶಿಕ್ಷಕರು, ಬೆಂಗಳೂರು ಪದವೀಧರರ ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಂಡು ಮತದಾನ ಪ್ರಕ್ರಿಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು. ಸಭೆಯಲ್ಲಿ ಬೆಂಗಳೂರು ನಗರ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ : ಆಯುಧಪೂಜೆಗೆ ವಿಧಾನಸೌಧ, ವಿಕಾಸಸೌಧದಲ್ಲಿ ಅರಿಶಿನ ಕುಂಕುಮ ಬಳಸದಂತೆ ಸುತ್ತೋಲೆ: ಸಿಎಂ ಸ್ಪಷ್ಟನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.