ಬೆಂಗಳೂರು: ಸ್ವಾತಂತ್ರ್ಯ ಹಾಗೂ ಗಣರಾಜ್ಯೋತ್ಸವ ದಿನಾಚರಣೆಗಳಂದು ರಾಷ್ಟ್ರಪತಿಗಳಿಂದ ನೀಡಲಾಗುವ ವಿಶಿಷ್ಟ ಸೇವೆ ಹಾಗೂ ಶ್ಲಾಘನೀಯ ಸೇವಾ ಪದಕ ಪ್ರದಾನ ಸಮಾರಂಭ ನ. 8ರಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ರಾಜಭವನದ ಗಾಜಿನ ಮನೆಯಲ್ಲಿ ನಡೆಯಲಿದೆ.
ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು, ಗೃಹ ರಕ್ಷಕ ದಳ, ಪೌರ ರಕ್ಷಣೆ ಮತ್ತು ರಾಜ್ಯ ವಿಪತ್ತು ಸ್ಪಂದನಾ ಪಡೆಗಳ ನಿರ್ದೇಶನಾಲಯಗಳ ಸಂಯುಕ್ತಾಶ್ರಯದಲ್ಲಿ 2014ರಿಂದ 2017ನೇ ಸಾಲಿನ ಸ್ವಾತಂತ್ರ್ಯೋತ್ಸವ ಹಾಗೂ ಗಣರಾಜ್ಯೋತ್ಸವ ದಿನಾಚರಣೆ ಸಂದರ್ಭದಲ್ಲಿ ರಾಷ್ಟ್ರಪತಿಗಳ ವಿಶಿಷ್ಟ ಸೇವೆ ಹಾಗೂ ಶ್ಲಾಘನೀಯ ಸೇವಾ ಪದಕಗಳನ್ನು ನೀಡಲಾಗಿದೆ. ರಾಜ್ಯಪಾಲರು ಪದಕಗಳನ್ನು ನೀಡಲು ಒಪ್ಪಿಗೆ ಸೂಚಿಸಿದ್ದಾರೆ. ಇದರಲ್ಲಿ 2014ರಿಂದ 17ರವರೆಗೆ ವಿಶಿಷ್ಟ ಸೇವೆಗೆ 6 ಪದಕ ಹಾಗೂ ಶ್ಲಾಘನೀಯ ಸೇವೆಗೆ 52 ಪದಕ ಸೇರಿದಂತೆ ಒಟ್ಟು 58 ಪದಕಗಳನ್ನು ನೀಡಲಾಗುತ್ತಿದೆ. ಈ ಸಮಾರಂಭದ ಅಧ್ಯಕ್ಷತೆಯನ್ನು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ವಹಿಸಲಿದ್ದಾರೆ.