ಬೆಂಗಳೂರು: ಸನ್ಮಾನ್ಯ ಅಶೋಕ್ ಅವರು ಭವಿಷ್ಯವನ್ನು, ಸಂಖ್ಯಾಶಾಸ್ತ್ರ ಹೇಳುತ್ತಾರೆ ಎಂದು ನನಗೆ ಈಗಲೇ ಗೊತ್ತಾಗಿದ್ದು, ಅವರಲ್ಲೊಬ್ಬರು ‘ಕಾಲಜ್ಞಾನಿ’, ‘ಸಂಖ್ಯಾಜ್ಞಾನಿ’ ಇದ್ದಾರೆ ಎನ್ನುವ ಸೋಜಿಗ ನನಗೆ ಬೆಕ್ಕಸ ಬೆರಗನ್ನುಂಟು ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.
-
ಸನ್ಮಾಶ್ರೀ @RAshokaBJP ಅವರು ಭವಿಷ್ಯವನ್ನು, ಸಂಖ್ಯಾಸಾಸ್ತ್ರವನ್ನು ಹೇಳುತ್ತಾರೆ ಎಂದು ನನಗೆ ಗೊತ್ತಾಗಿದ್ದು ಈಗಲೇ. ಅವರಲ್ಲೂ ಒಬ್ಬರು 'ಕಾಲಜ್ಞಾನಿ', 'ಸಂಖ್ಯಾಜ್ಞಾನಿ' ಇದ್ದಾರೆನ್ನುವ ಸೋಜಿಗ ನನಗೆ ಬೆಕ್ಕಸ ಬೆರಗುಂಟು ಮಾಡಿದೆ.
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) March 16, 2023 " class="align-text-top noRightClick twitterSection" data="
ಚುನಾವಣೆ ನಂತರ ತಮ್ಮ ದುಡಿಮೆಗೆ ದೋಖಾ ಇಲ್ಲ ಎನ್ನುವ ಆತ್ಮವಿಶ್ವಾಸ ಅಶೋಕ್ ಅವರಲ್ಲಿದೆ, ಸಂತೋಷ. 1/7
">ಸನ್ಮಾಶ್ರೀ @RAshokaBJP ಅವರು ಭವಿಷ್ಯವನ್ನು, ಸಂಖ್ಯಾಸಾಸ್ತ್ರವನ್ನು ಹೇಳುತ್ತಾರೆ ಎಂದು ನನಗೆ ಗೊತ್ತಾಗಿದ್ದು ಈಗಲೇ. ಅವರಲ್ಲೂ ಒಬ್ಬರು 'ಕಾಲಜ್ಞಾನಿ', 'ಸಂಖ್ಯಾಜ್ಞಾನಿ' ಇದ್ದಾರೆನ್ನುವ ಸೋಜಿಗ ನನಗೆ ಬೆಕ್ಕಸ ಬೆರಗುಂಟು ಮಾಡಿದೆ.
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) March 16, 2023
ಚುನಾವಣೆ ನಂತರ ತಮ್ಮ ದುಡಿಮೆಗೆ ದೋಖಾ ಇಲ್ಲ ಎನ್ನುವ ಆತ್ಮವಿಶ್ವಾಸ ಅಶೋಕ್ ಅವರಲ್ಲಿದೆ, ಸಂತೋಷ. 1/7ಸನ್ಮಾಶ್ರೀ @RAshokaBJP ಅವರು ಭವಿಷ್ಯವನ್ನು, ಸಂಖ್ಯಾಸಾಸ್ತ್ರವನ್ನು ಹೇಳುತ್ತಾರೆ ಎಂದು ನನಗೆ ಗೊತ್ತಾಗಿದ್ದು ಈಗಲೇ. ಅವರಲ್ಲೂ ಒಬ್ಬರು 'ಕಾಲಜ್ಞಾನಿ', 'ಸಂಖ್ಯಾಜ್ಞಾನಿ' ಇದ್ದಾರೆನ್ನುವ ಸೋಜಿಗ ನನಗೆ ಬೆಕ್ಕಸ ಬೆರಗುಂಟು ಮಾಡಿದೆ.
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) March 16, 2023
ಚುನಾವಣೆ ನಂತರ ತಮ್ಮ ದುಡಿಮೆಗೆ ದೋಖಾ ಇಲ್ಲ ಎನ್ನುವ ಆತ್ಮವಿಶ್ವಾಸ ಅಶೋಕ್ ಅವರಲ್ಲಿದೆ, ಸಂತೋಷ. 1/7
ಈ ಕುರಿತು ಟ್ವೀಟ್ ಮಾಡಿರುವ ಅವರು, ‘‘ಚುನಾವಣೆ ನಂತರ ತಮ್ಮ ದುಡಿಮೆಗೆ ದೋಖಾ ಇಲ್ಲ ಎನ್ನುವ ಆತ್ಮವಿಶ್ವಾಸ ಅಶೋಕ್ ಅವರಲ್ಲಿದೆ, ಸಂತೋಷ ಎಂದು ಲೇವಡಿ ಮಾಡಿದ್ದಾರೆ. ಜೆಡಿಎಸ್ ಪಕ್ಷಕ್ಕೆ 20 ಸ್ಥಾನಗಳು ಬರುತ್ತವೆ ಎಂದು ಚಿಕ್ಕಬಳ್ಳಾಪುರದಲ್ಲಿ ಗಿಣಿ ಭವಿಷ್ಯ ಹೇಳಿರುವ ಅಶೋಕ್ ಅವರು, ಬಿಜೆಪಿ ಅದೆಷ್ಟು ಸೀಟು ಗೆಲ್ಲುತ್ತದೆ ಎನ್ನುವುದನ್ನು ಹೇಳಲು ಮರೆತಿದ್ದಾರೆ. ಮರೆತಿದ್ದಾರೆಯೋ ಅಥವಾ ಬೇಕೆಂದೇ ಹೇಳಲಿಲ್ಲವೋ..? ಅವರೇ ಹೇಳಬೇಕು. ಎಷ್ಟೇ ಆಗಲಿ, ಅವರ ಜಾಣತನ ಜಗಜ್ಜಾಹೀರು ಎಂದು ಕುಟುಕಿದ್ದಾರೆ.
ಅಶೋಕ್ ಸಾಹೇಬರು ‘ವಿಜಯ ಸಂಕಲ್ಪ’ಕ್ಕೆ ಬದಲಾಗಿ ‘ಸುಳ್ಳುಸಂಕಲ್ಪ’ ಮಾಡಿಕೊಂಡೇ ರಾಜ್ಯ ಸುತ್ತುತ್ತಿದ್ದಾರೆ. ಅವರ ಸುಳ್ಳುಸಂಕಲ್ಪ ಯಾತ್ರೆಗೆ ನನ್ನ ಶುಭಾಶಯಗಳು ಹಾಗೂ ಗಾಢ ಸಾಂತ್ವನಗಳು. ಆದರೆ, ಅವರ ಕಾಮಾಲೆ ಮನಸ್ಸಿನ, ಅದರ ಅರೆ ಬೆಂದ ಲೆಕ್ಕದ ಬಗ್ಗೆ ನನ್ನ ಅನುಕಂಪವಿದೆ ಎಂದು ಹೆಚ್ಡಿಕೆ ವ್ಯಂಗ್ಯವಾಡಿದ್ದಾರೆ.
ತಮ್ಮ ತಟ್ಟೆಯಲ್ಲಿ ಹೆಗ್ಗಣ ಸತ್ತು ಬಿದ್ದಿದ್ದರೂ ಕಂಡವರ ತಟ್ಟೆಯಲ್ಲಿ ನೊಣ ಹುಡುಕುವುದು ಬಿಜೆಪಿಗೆ ಅಂಟಿದ ಜಾಡ್ಯ ಮತ್ತು ಆಜನ್ಮಪರ್ಯಂತ ಬಂದಿರುವ ಚಾಳಿ. ನಮ್ಮ ಪಕ್ಷ ಬಿಡುವವರ ಮಾತು ಹಾಗಿರಲಿ, ನಿಮ್ಮ ಪಕ್ಷದಲ್ಲಿ ವಾರೊಪ್ಪತ್ತಿನಿಂದ ನಿರಂತರವಾಗಿ ಕೇಳಿ ಬರುತ್ತಿರುವ ಅರುಣರಾಗ, ವಿಜಯನಾದ ಕಥನಗಳ ಕಥೆ ಏನು ಅಶೋಕ್ ಅವರೇ? ಎಂದು ಪ್ರಶ್ನಿಸಿದ್ದಾರೆ.
ನಿನ್ನೆ ದಿನ ನಿಮ್ಮ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಾಡಿದ ಪಂಚಾಯಿತಿ ಕಟ್ಟೆ ಪುರಾಣದ ಅಸಲಿಯೆತ್ತೇನು?. ಈ ಬಿಜೆಪಿಯ ಗೃಹಭಂಗದಿಂದ ಯಾರಿಗೆ ದುಃಖ?, ಯಾರಿಗೆ ಸಂತೋಷ!? ಕೊಂಚ ಹೇಳಬಲ್ಲಿರಾ ಅಶೋಕ್ ಅವರೇ?. ಇಷ್ಟೆಲ್ಲ ಅವಾಂತರ, ಹಗರಣಗಳ ಹೊಲಸು ಮೆತ್ತಿಕೊಂಡಿರುವ ನೀವು, ನಮ್ಮನ್ನು 20 ಸೀಟಿಗೇ ಕಟ್ಟಿ ಹಾಕ್ತೀರಾ?. ಶೇ 40ರಷ್ಟು ಕಮಿಷನ್ ಸರ್ಕಾರಕ್ಕೆ ಆ ಧಮ್ಮು ತಾಕತ್ತು ಇದೆಯಾ?, ಹಾಗಿದ್ದರೆ, ವಿಶ್ವವಂದ್ಯ ಪ್ರಧಾನಿಗಳು ಅಷ್ಟು ಬಿಡುವಾಗಿ ಕರ್ನಾಟಕಕ್ಕೆ ಪದೇ ಪದೆ ಓಡೋಡಿ ಬರುತ್ತಾರೇಕೆ?. ಅಮಿತ್ ಶಾ ಅವರ ಅಪರಿಮಿತ ಭೇಟಿಗಳು ಯಾಕೋ? ಪಾಪ.. ನಿಮ್ಮ ಫಜೀತಿ!! ಎಂದು ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಚುನಾವಣೆ ಆಗಲಿ, ಫಲಿತಾಂಶ ಬರಲಿ. ಓಡು ಮಗಾ, ಓಡು ಮಗಾ ಸರದಿ ಯಾರದ್ದೆನ್ನುವುದು ಜನಕ್ಕೇ ಗೊತ್ತಾಗುತ್ತದೆ. ಎಷ್ಟಾದರೂ ಓಡು ಮಗಾ ರೇಸ್ನಲ್ಲಿ ನಿಮ್ಮನ್ನು ಸರಿಗಟ್ಟುವ ವೀರರೂ ಶೂರರೂ ಕರ್ನಾಟಕದಲ್ಲಿ ಇದ್ದಾರೆಯೇ? ‘‘ಆಪರೇಷನ್ ಕಮಲಕಾಂಡ’’ ದಲ್ಲಿ ನಿಮ್ಮದೂ ಒಂದು ತುಕ್ಕುಹಿಡಿದ ಅಧ್ಯಾಯವಿದೆಯಲ್ಲಾ? ಸಾಮ್ರಾಟ್ ಅಶೋಕವೂ ಮತ್ತು ಆಪರೇಷನ್ ಕಮಲವೂ.. ಎಂದು ಕುಮಾರಸ್ವಾಮಿ ಅವರು ಲೇವಡಿ ಮಾಡಿದ್ದಾರೆ.
ಇದನ್ನೂ ಓದಿ : ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಟೋಲ್ ವಿರೋಧಿಸಿ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ