ETV Bharat / state

ಪ್ರಭಾವಿ ಹುದ್ದೆಗೆ ಅಕ್ರಮ ನೇಮಕಾತಿ: ಸಿದ್ದರಾಮಯ್ಯ ವಿರುದ್ಧ ಎನ್ ಆರ್ ರಮೇಶ್ ಲೋಕಾಯುಕ್ತಕ್ಕೆ ದೂರು - ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988

2014 ರಲ್ಲಿ ಮುಖ್ಯಮಂತ್ರಿ ಆಗಿದ್ದ ಸಿದ್ದರಾಮಯ್ಯ ಕಿಂಗ್ಸ್ ಕೋರ್ಟ್ ವಿವೇಕ್ ಎಂದೇ ಖ್ಯಾತಿಯ ಎಲ್. ವಿವೇಕಾನಂದ ಎಂಬುವರಿಂದ 1 ಕೋಟಿ 30 ಲಕ್ಷ ರೂಪಾಯಿ ಪಡೆದು ಬೆಂಗಳೂರು ಟರ್ಫ್ ಕ್ಲಬ್ ಉಸ್ತುವಾರಿ ಹುದ್ದೆಗೆ ನೇಮಕ ಮಾಡಿದ್ದಾರೆ ಎಂದು ಬಿಜೆಪಿ ವಕ್ತಾರ ಎನ್. ಆರ್ ರಮೇಶ್ ಆರೋಪಿಸಿದ್ದಾರೆ.

ಎನ್ ಆರ್ ರಮೇಶ್
ಎನ್ ಆರ್ ರಮೇಶ್
author img

By

Published : Nov 2, 2022, 8:53 PM IST

ಬೆಂಗಳೂರು: ತಮ್ಮ ಆಡಳಿತದ ಅವಧಿಯಲ್ಲಿ ಪ್ರಭಾವಿ ಹುದ್ದೆಗೆ ನೇಮಕಾತಿ ಮಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚೆಕ್ ಮೂಲಕ ಹಣ ಪಡೆದಿದ್ದು, ಇಂತಹ ಗಂಭೀರ ಪ್ರಕರಣದ ತನಿಖೆ ನಡೆಸುವಂತೆ ಬಿಜೆಪಿ ವಕ್ತಾರ ಎನ್ ಆರ್ ರಮೇಶ್ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ಎನ್ ಆರ್ ರಮೇಶ್ ಲೋಕಾಯುಕ್ತಕ್ಕೆ ದೂರು

ನಗರದಲ್ಲಿಂದು ಲೋಕಾಯುಕ್ತ ಕಚೇರಿಗೆ ದಾಖಲೆ ಸಲ್ಲಿಸಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, 2014 ರಲ್ಲಿ ಮುಖ್ಯಮಂತ್ರಿ ಆಗಿದ್ದ ಸಿದ್ದರಾಮಯ್ಯ ಕಿಂಗ್ಸ್ ಕೋರ್ಟ್ ವಿವೇಕ್ ಎಂದೇ ಖ್ಯಾತಿಯ ಎಲ್. ವಿವೇಕಾನಂದ ಎಂಬಾತನಿಂದ 1 ಕೋಟಿ 30 ಲಕ್ಷ ರೂಪಾಯಿ ಪಡೆದು ಬೆಂಗಳೂರು ಟರ್ಫ್ ಕ್ಲಬ್ ಉಸ್ತುವಾರಿ ಹುದ್ದೆಗೆ ನೇಮಕ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

3 ವರ್ಷಗಳ ಅವಧಿಗೆ ಬೆಂಗಳೂರು ಟರ್ಫ್ ಕ್ಲಬ್‌ ಕಾರ್ಯಕಾರಿ ಸಮಿತಿಯ ಸದಸ್ಯ ಸ್ಥಾನಕ್ಕೆ ನೇಮಕ ಮಾಡಿದ್ದರು. ಇದಕ್ಕೆ ಪುಷ್ಠಿ ನೀಡುವಂತೆ ಲೋಕಾಯುಕ್ತಕ್ಕೆ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ 2018 ರ ಏಪ್ರಿಲ್ 21 ರಂದು ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಸಾಲ ಪಡೆದುಕೊಂಡಿರುವುದಾಗಿ ಮಾಹಿತಿ ನೀಡಿದ್ದಾರೆ.

ಗೃಹ ಇಲಾಖೆಯ ನಿಯಮ 4.1 ಏನು ಹೇಳುತ್ತದೆ: ಕೇಂದ್ರ ಸರ್ಕಾರದ ಗೃಹ ಇಲಾಖೆಯ ನಿಯಮ 4.1 ಸ್ಪಷ್ಟವಾಗಿ ಹೇಳುವಂತೆ ಮುಖ್ಯಮಂತ್ರಿಗಳಾಗಲೀ ಅಥವಾ ಯಾವುದೇ ಸಚಿವರಾಗಲೀ ಯಾವುದೇ ವ್ಯಕ್ತಿಗೆ ಪ್ರಭಾವೀ ಹುದ್ದೆಯನ್ನು ನೀಡಿ, ಫಲಾನುಭವಿಯಿಂದ ಯಾವುದೇ ರೀತಿಯ ಉಡುಗೊರೆಗಳನ್ನಾಗಲೀ, ನಗದನ್ನಾಗಲೀ ಅಥವಾ ಯಾವುದೇ ರೂಪದಲ್ಲಿ ಹಣ ಸ್ವೀಕರಿಸುವುದು ಅಕ್ಷಮ್ಯ ಅಪರಾಧವಾಗಿದೆ ಎಂದಿದ್ದಾರೆ.

ಭ್ರಷ್ಟಾಚಾರ ನಿಗ್ರಹ ಕಾಯ್ದೆ–1988 ರ ಕಲಂ ಅಡಿ ಅಕ್ರಮ: ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988 ರ ಕಲಂ ಅಡಿ ಅಂದಿನ ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರಭಾವಿ ವ್ಯಕ್ತಿಯೊಬ್ಬರಿಂದ 1 ಕೋಟಿ 30 ಲಕ್ಷ ರೂಪಾಯಿಗಳಷ್ಟು ಹಣವನ್ನು ಚೆಕ್ ಮೂಲಕ ಪಡೆದು ಕ್ಲಬ್​​​ನ ಕಾರ್ಯಕಾರಿ ಸಮಿತಿಯ ಸದಸ್ಯ ಸ್ಥಾನಕ್ಕೆ ನಿಯೋಜನೆ ಮಾಡಿರುವುದು ಕಾನೂನು ಬಾಹಿರವಾಗಿದೆ ಎಂದು ಹೇಳಿದ್ದಾರೆ.

ಓದಿ: ಟರ್ಫ್ ಕ್ಲಬ್ ಉಸ್ತುವಾರಿ ನೇಮಕಕ್ಕೆ ಸಿದ್ದರಾಮಯ್ಯ 1.30 ಕೋಟಿ ರೂ ಪಡೆದಿದ್ದರು: ಎನ್​ ಆರ್​ ರಮೇಶ್ ಆರೋಪ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.