ETV Bharat / state

ವಾದ ವಿವಾದವನ್ನು ಮೀರಿ ಧ್ಯಾನಸ್ಥ ಸ್ಥಿತಿಯಲ್ಲಿ ಬರವಣಿಗೆ ಮಾಡಿದವರು ವೈದೇಹಿ: ಮಹೇಶ ಜೋಶಿ

ಕಸಾಪ ಮತ್ತು ಬಿಎಂಟಿಸಿ ಸಹಯೋಗದಲ್ಲಿ ಕೊಡಮಾಡುವ ನೃಪತುಂಗ ಸಾಹಿತ್ಯ ಪ್ರಶಸ್ತಿಯನ್ನು ಹಿರಿಯ ಬರಹಗಾರ್ತಿ ವೈದೇಹಿ ಅವರಿಗೆ ಪ್ರದಾನ ಮಾಡಲಾಯಿತು.

nripatunga-sahitya-award-was-presented-to-veteran-writer-vaidehi
ವಾದ ವಿವಾದವನ್ನು ಮೀರಿ ಧ್ಯಾನಸ್ಥ ಸ್ಥಿತಿಯಲ್ಲಿ ಬರವಣಿಗೆ ಮಾಡಿದವರು ವೈದೇಹಿ: ಮಹೇಶ ಜೋಶಿ
author img

By

Published : Mar 29, 2023, 8:57 PM IST

ಬೆಂಗಳೂರು: ಕನ್ನಡ ಸಾಹಿತ್ಯ ಪರಂಪರೆಯಲ್ಲಿ ಅತ್ಯಂತ ಮಹತ್ವದ ಪ್ರಶಸ್ತಿ ಎಂದು ಗುರುತಿಸಿಕೊಂಡಿರುವ ʻನೃಪತುಂಗʼ ಪ್ರಶಸ್ತಿಯು ಜ್ಞಾನಪೀಠಕ್ಕೆ ಸರಿಸಮಾನವಾದ ಪ್ರಶಸ್ತಿಯಾಗಿದ್ದು, ಕನ್ನಡದ ಜ್ಞಾನಪೀಠ ಎಂದು ಗುರುತಿಸಿಕೊಂಡ ಈ ಪ್ರಶಸ್ತಿಯನ್ನು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ದತ್ತಿ ಇಡುವ ಮೂಲಕ ನೀಡುತ್ತಿದೆ. ಏಳು ಲಕ್ಷದ ಒಂದು ರೂಪಾಯಿ ಮೌಲ್ಯದ ಇಂತಹ ಮಹತ್ವದ ಪ್ರಶಸ್ತಿಗೆ ವೈದೇಹಿ ಪಾತ್ರರಾಗಿರುವುದು ಪ್ರಶಸ್ತಿಯ ಗೌರವವನ್ನು ಹೆಚ್ಚಿಸಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿ ತಿಳಿಸಿದರು.

ಕನ್ನಡ ಸಾಹಿತ್ಯ ಪರಿಷತ್​ ಹಾಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಸಹಯೋಗದಲ್ಲಿ ನೀಡುವ ನೃಪತುಂಗ ಸಾಹಿತ್ಯ ಪ್ರಶಸ್ತಿಯನ್ನು ಹಿರಿಯ ಬರಹಗಾರ್ತಿ ವೈದೇಹಿ ಅವರಿಗೆ ಪ್ರದಾನ ಮಾಡಲಾಯಿತು. ಅದರೊಂದಿಗೆ 2022ನೆಯ ಸಾಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಮಯೂರ ವರ್ಮ ಸಾಹಿತ್ಯ ಪ್ರಶಸ್ತಿಯನ್ನು ಗದಗ ಜಿಲ್ಲೆಯ ಗಜೇಂದ್ರಗಡದ ಹನುಮಂತ ಸೋಮನಕಟ್ಟಿ, ವಿಜಯನಗರ ಜಿಲ್ಲೆಯ ಕೊಟ್ಟೂರಿನ ಗುಡ್ಡಪ್ಪ ಬೆಟಗೇರಿ, ತುಮಕೂರು ಜಿಲ್ಲೆಯ ಡಾ. ಸತ್ಯಮಂಗಲ ಮಹಾದೇವ, ಗಡಿಭಾಗ ಕಾಸರಗೋಡಿನ ವಿದ್ಯಾರಶ್ಮಿ ಪೆಲತ್ತಡ್ಕ ಹಾಗೂ ಹಾಸನದ ಬೇಲೂರು ರಘುನಂದನರಿಗೆ ಪ್ರದಾನ ಮಾಡಲಾಯಿತು.

ಕನ್ನಡ ಸಾರಸ್ವತ ಲೋಕಕ್ಕೆ ಮಹತ್ವದ ಕೃತಿಗಳನ್ನು ನೀಡಿರುವ ಹೆಮ್ಮೆ ವೈದೇಹಿಯವರದ್ದು- ಮಹೇಶ ಜೋಶಿ: ಬುಧವಾರ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ಹಮ್ಮಿಕೊಂಡ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನೃಪತುಂಗ ಸಾಹಿತ್ಯ ಪ್ರಶಸ್ತಿಯನ್ನು ಹಾಗೂ 2022ನೆಯ ಸಾಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಮಯೂರ ವರ್ಮ ಸಾಹಿತ್ಯ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಡಾ.ಮಹೇಶ ಜೋಶಿ, ಕನ್ನಡ ಸಾರಸ್ವತ ಲೋಕದಲ್ಲಿ ಸದ್ದಿಲ್ಲದೇ ಮಹತ್ವದ ಕೃತಿಗಳನ್ನು ನೀಡಿರುವ ಹೆಮ್ಮೆ ವೈದೇಹಿಯವರದ್ದು, ಸಾಹಿತ್ಯದ ಎಲ್ಲಾ ಪ್ರಕಾರಗಳಲ್ಲಿಯೂ ಮೌಲಿಕವಾದ ಬರವಣಿಗೆಯನ್ನು ಮಾಡಿದವರು. ಕನ್ನಡ ಸಾಹಿತ್ಯ ಪರಂಪರೆಯಲ್ಲಿ ಅವರ ಸ್ಥಾನ ಮಹತ್ವವಾದದ್ದು. ನಿರಂತರ ಬರವಣಿಗೆಯ ಮೂಲಕ ಕನ್ನಡದ ಜೀವಂತಿಕೆಯನ್ನು ಕಾಪಾಡಿ ವಾದ ವಿವಾದಗಳಿಗೆ ಒಳಗಾಗದಂತೆ ಧ್ಯಾನಸ್ಥ ಸ್ಥಿತಿಯಲ್ಲಿ ಸಾಹಿತ್ಯ ಕೃಷಿ ಮಾಡಿಕೊಂಡು ಬಂದಿರುವುದು ಮಹತ್ವದ ಸಂಗತಿ ಎಂದು ಡಾ.ಮಹೇಶ ಜೋಶಿ ಬಣ್ಣಿಸಿದರು.

ಈ ಕನ್ನಡ ನೆಲವೇ ನನಗೆ ಬರಹಗಾರ್ತಿಯನ್ನಾಗಿ ಮಾಡಿತು - ವೈದೇಹಿ: ನೃಪತುಂಗ ಸಾಹಿತ್ಯ ಪ್ರಶಸ್ತಿಯನ್ನು ಸ್ವೀಕರಿಸಿ ಮಾತನಾಡಿದ ಬರಹಗಾರ್ತಿ ವೈದೇಹಿ, ನಮ್ಮ ಕಾಲದಲ್ಲಿ ಮಾತ್ರ ಭಾಷೆಗೆ ಮಹತ್ವವಿತ್ತು ಅದರಲ್ಲಿ ಮಿಂದು ಎದ್ದವರಿಗೆ ಆಡಿ ಬೆಳೆದವರಿಗಷ್ಟೇ ಕನ್ನಡದ ಚೆಲವು ಅರಿಯಲು ಸಾಧ್ಯ. ಕನ್ನಡ ನಮ್ಮಲ್ಲಿ ನಿಗಿ ನಿಗಿಯಾಗಿ ಸೇರಿಕೊಂಡಿದ್ದು, ಅದು ಮಾತಿಗೆ, ಬರವಣಿಗೆಗೆ, ಜಗಳಕ್ಕೆ ಜೀವನಕ್ಕೆ ಹೀಗೆ ಎಲ್ಲದಕ್ಕೂ ನಮ್ಮ ಮಧ್ಯದಲ್ಲಿ ಅದು ಹಾಸು ಹೊಕ್ಕಾಗಿ ಹೋಗಿದೆ. ನಾನು ನಾನಾಗಿಯೇ ಬರಹಗಾರ್ತಿ ಆಗಲಿಲ್ಲ, ಕನ್ನಡವನ್ನೇ ನಂಬಿದ ನನಗೆ ಯಕ್ಷಗಾನದ ಕನ್ನಡದ ಜ್ಞಾನ ಶಬ್ಧ ಭಂಡಾರ, ಕುಂದಾಪುರದ ಕುಂದ ಕನ್ನಡ ನನ್ನೊಳಗಿದ್ದ ಬರಹಗಾರ್ತಿಯನ್ನು ಜಾಗೃತಗೊಳಿಸಿತು. ಈ ಕನ್ನಡ ನೆಲವೇ ನನಗೆ ಬರಹಗಾರ್ತಿಯನ್ನಾಗಿ ಮಾಡಿತು. ಆದರೆ ಈಗ ಭಾಷೆ ಎನ್ನುವುದು ಸೌಹಾರ್ದದ ಸೇತುವೆಯಾಗುವ ಬದಲು ದಹನದ ಉರುವಲಾಗುತ್ತಿದೆ. ಅದನ್ನು ತಡೆಯವುದು ಹೊಣೆ ನಮ್ಮೆಲರದ್ದು ಎಂಬ ಜವಾಬ್ದಾರಿಯುತ ಮಾತನ್ನು ಹಂಚಿಕೊಂಡರು.

ಮಯೂರ ವರ್ಮ ಪ್ರಶಸ್ತಿ ಪುರಸ್ಕೃತರಾದ ಹಾಸನದ ಬೇಲೂರು ರಘುನಂದನ ಮಾತನಾಡಿ, ಧಾರಣಾ ಶಕ್ತಿ ಇರುವ ಬೀಜ ಬಿತ್ತಿದಾಗ ಮಾತ್ರ ಅದು ಸಸಿಯಾಗುವಂತೆ ಹಿರಿಯ ಸಾಹಿತಿಗಳು ಬಿತ್ತಿದ ಸಾಹಿತ್ಯ ಬೀಜವೇ ಇಂದು ಯುವ ಸಾಹಿತಿಗಳು ಹುಟ್ಟುವುದಕ್ಕೆ ಕಾರಣವಾಗಿದೆ. ಕನ್ನಡದ ಪ್ರಜ್ಞೆ ಮೂಡಿಸುವ ಮೂಲಕ ಕನ್ನಡ ಉಳಿಸಿ ಬೆಳೆಸುವ ಕೆಲಸ ಎಲ್ಲರೂ ಸೇರಿ ಮಾಡಬೇಕಿದೆ ಎಂದು ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ನೆ.ಭ ರಾಮಲಿಂಗ ಶೆಟ್ಟಿ ಸ್ವಾಗತಿಸಿದರು. ಗೌರವ ಕೋಶಾಧ್ಯಕ್ಷ ಡಾ. ಬಿ.ಎಮ್. ಪಟೇಲ್ ಪಾಂಡು ಕಾರ್ಯಕ್ರಮ ನಿರೂಪಣೆ ಮಾಡಿದರು. ಪ್ರಶಸ್ತಿ ವಿಜೇತರ ಪರಿಚಯವನ್ನು ಪರಿಷತ್ತಿನ ಪ್ರಕಟಣಾ ಸಮಿತಿ ಸಂಚಾಲಕ ಎನ್.ಎಸ್. ಶ್ರೀಧರ ಮೂರ್ತಿ ಮಾಡಿಕೊಟ್ಟರು. ಪರಿಷತ್ತಿನ ಗೌರವ ಕಾರ್ಯದರ್ಶಿ ಡಾ. ಪದ್ಮಿನಿ ನಾಗರಾಜು ವಂದಿಸಿದರು.

ಇದನ್ನೂ ಓದಿ: ನಾಳೆ ರಾಮನವಮಿ.. ದೇಶಾದ್ಯಂತ ಹೀಗಿರಲಿದೆ ಆಚರಣೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.