ETV Bharat / state

ಬರಹಗಾರ್ತಿ ವೈದೇಹಿಗೆ 2022ನೇ ಸಾಲಿನ 'ನೃಪತುಂಗ ಸಾಹಿತ್ಯ ಪ್ರಶಸ್ತಿ'

ನೃಪತುಂಗ ಸಾಹಿತ್ಯ ಪ್ರಶಸ್ತಿಯು 7 ಲಕ್ಷ ರೂ ನಗದು ಹಾಗೂ ಪ್ರಮಾಣಪತ್ರ ಹೊಂದಿದೆ.

ಹಿರಿಯ ಬರಹಗಾರ್ತಿ ವೈದೇಹಿ
ಹಿರಿಯ ಬರಹಗಾರ್ತಿ ವೈದೇಹಿ
author img

By

Published : Feb 23, 2023, 9:29 PM IST

ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಸಹಯೋಗದಲ್ಲಿ ನೀಡಲಾಗುತ್ತಿರುವ 2022ನೇ ಸಾಲಿನ ಪ್ರತಿಷ್ಟಿತ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನೃಪತುಂಗ ಸಾಹಿತ್ಯ ಪ್ರಶಸ್ತಿಯನ್ನು 7 ಗಣ್ಯರಿಗೆ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನೀಡುವ ಮಯೂರ ವರ್ಮ ಸಾಹಿತ್ಯ ಪ್ರಶಸ್ತಿಯನ್ನು ಹಿರಿಯ ಬರಹಗಾರ್ತಿ ವೈದೇಹಿ ಅವರಿಗೆ ಪ್ರಕಟಿಸಿದೆ.

ಇಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿಯ ಸಭೆಯಲ್ಲಿ ನೃಪತುಂಗ ಹಾಗೂ ಮಯೂರ ವರ್ಮ ಸಾಹಿತ್ಯ ಪ್ರಶಸ್ತಿಗಾಗಿ ಆಯ್ಕೆ ಮಾಡಲಾಯಿತು. 2022ನೆಯ ಸಾಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಮಯೂರ ವರ್ಮ ಸಾಹಿತ್ಯ ಪ್ರಶಸ್ತಿಗೆ ಐವರನ್ನು ಆಯ್ಕೆ ಮಾಡಲಾಗಿದೆ.

ಗದಗ ಜಿಲ್ಲೆಯ ಗಜೇಂದ್ರಗಡದ ಹನುಮಂತ ಸೋಮನಕಟ್ಟಿ, ವಿಜಯನಗರ ಜಿಲ್ಲೆಯ ಕೊಟ್ಟೂರಿನ ಗುಡ್ಡಪ್ಪ ಬೆಟಗೇರಿ, ತುಮಕೂರು ಜಿಲ್ಲೆಯ ಡಾ. ಸತ್ಯಮಂಗಲ ಮಹಾದೇವ, ಗಡಿಭಾಗ ಕಾಸರಗೋಡಿನ ವಿದ್ಯಾರಶ್ಮಿ ಪೆಲ್ಲತಡ್ಕ ಹಾಗೂ ಹಾಸನದ ಬೇಲೂರು ರಘುನಂದನರಿಗೆ ಪ್ರಶಸ್ತಿ ಕೊಡಮಾಡಲಾಗುತ್ತಿದೆ.

ನಿಕಟಪೂರ್ವ ನೃಪತುಂಗ ಪ್ರಶಸ್ತಿ ಪುರಸ್ಕೃತ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ್, ಹಿರಿಯ ಸಾಹಿತಿ ಡಾ. ಎಸ್.ಆರ್.ಲೀಲಾ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಮುಖ್ಯ ಕಾರ್ಮಿಕ ಕಲ್ಯಾಣಾಧಿಕಾರಿ ಸತೀಶ್, ಕ.ರಾ.ರ.ಸಾ ಸಂಸ್ಥೆಯ ಕನ್ನಡ ಕ್ರಿಯಾ ಸಂಸ್ಥೆಯ ರಾಜ್ಯಾಧ್ಯಕ್ಷ ವ. ಚ ಚನ್ನೇಗೌಡ ಆಯ್ಕೆ ಸಮಿತಿ ಸಭೆಯಲ್ಲಿ ಉಪಸ್ಥಿತರಿದ್ದರು.

ಹಿರಿಯ ಬರಹಗಾರರಾದ ಉಡುಪಿಯ ವೈದೇಹಿಯವರನ್ನು ನೃಪತುಂಗ ಪ್ರಶಸ್ತಿಗೆ ಏಕಧ್ವನಿಯಲ್ಲಿ ಹಾಗೂ ಸರ್ವಾನುಮತದಲ್ಲಿ ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನೃಪತುಂಗ ಸಾಹಿತ್ಯ ಪ್ರಶಸ್ತಿಯು 7 ಲಕ್ಷ ರೂ ನಗದು ಹಾಗೂ ಪ್ರಮಾಣಪತ್ರದ ಜೊತೆ ಫಲ ತಾಂಬೂಲ ಒಳಗೊಂಡಿದೆ. ಈ ಪ್ರಶಸ್ತಿಯು ಜ್ಞಾನಪೀಠ ಪ್ರಶಸ್ತಿಗೆ ಸರಿಸಮಾನವಾದ ಕನ್ನಡ ನಾಡಿನ ಪ್ರಶಸ್ತಿಯೆಂದು ಪ್ರಖ್ಯಾತವಾಗಿದೆ. ಈ ಬಾರಿ ಹಿರಿಯ ಬರಹಗಾರ್ತಿ ವೈದೇಹಿ ಅವರನ್ನು ಈ ಮೌಲಿಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ವೈದೇಹಿ ಎಂಬ ಕಾವ್ಯನಾಮದಿಂದ ಪ್ರಸಿದ್ಧರಾಗಿರುವ ಜಾನಕಿ ಶ್ರೀನಿವಾಸಮೂರ್ತಿ ಕನ್ನಡದ ಪ್ರಮುಖ ಲೇಖಕಿಯರಲ್ಲಿ ಒಬ್ಬರಾಗಿದ್ದು ಸಣ್ಣಕತೆ, ಕಾವ್ಯ, ಕಾದಂಬರಿ, ನಾಟಕ, ಮಕ್ಕಳ ಸಾಹಿತ್ಯ, ಅನುವಾದ ಸಾಹಿತ್ಯ, ಪ್ರಬಂಧ ಹೀಗೆ ಸಾಹಿತ್ಯದ ಎಲ್ಲಾ ಪ್ರಕಾರಗಳಲ್ಲಿ ಹುಲುಸಾದ ಕೃಷಿ ಮಾಡಿದ್ದಾರೆ. ಇವರ ಜೀವಮಾನದ ಸಾಧನೆಯನ್ನು ಪರಿಗಣಿಸಿ ಈ ಮೌಲಿಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ನೃಪತುಂಗ ಪ್ರಶಸ್ತಿಯನ್ನು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಮೃದ್ಧವಾದ ಹಾಗೂ ಮೌಲಿಕವಾದ ಕೊಡುಗೆ ನೀಡಿದ ಬರಹಗಾರರೊಬ್ಬರನ್ನು ಈ ಪ್ರಶಸ್ತಿಗೆ ಪರಿಗಣಿಸಬೇಕು ಎನ್ನುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಭಾಗದ ಸಾಹಿತಿಗಳ ಸಾಧನೆಯನ್ನು ಪರಿಗಣನೆಗೆ ತೆಗೆದುಕೊಂಡು ಒಬ್ಬರನ್ನು ಆಯ್ಕೆ ಮಾಡಲಾಗುತ್ತದೆ. ಈ ಪ್ರಶಸ್ತಿಯನ್ನು ಯಾವುದೇ ಒಂದು ಕೃತಿಗೆ ನೀಡದೆ ಬರಹಗಾರರು ಕನ್ನಡ ಸಾಹಿತ್ಯಕ್ಕೆ ಕೊಟ್ಟಿರುವ ಸಮಗ್ರ ಕೊಡುಗೆಯನ್ನು ಪರಿಗಣಿಸುವ ಮೂಲಕ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

2ನೇ ಮಹಿಳಾ ಸಾಹಿತಿ: ನೃಪತುಂಗ ಪ್ರಶಸ್ತಿಯ ಇತಿಹಾಸದಲ್ಲಿ ಈ ಬಾರಿ ಆಯ್ಕೆಗೊಂಡ ಶ್ರೀಮತಿ ವೈದೇಹಿ ಎರಡನೆಯ ಮಹಿಳಾ ಸಾಹಿತಿಯಾಗಿದ್ದಾರೆ. 2012 ರಲ್ಲಿ ಹಿರಿಯ ಬರಹಗಾರ್ತಿ ಸಾರಾ ಅಬೂಬಕರ್​ ಅವರನ್ನು ಸಾಹಿತ್ಯ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿರುವ ಸಾಹಿತಿಯ ಸಮಗ್ರ ಸೇವೆಯನ್ನು ಪರಿಗಣಿಸಿ ನೃಪತುಂಗ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ. ಈ ಪ್ರಶಸ್ತಿಯು ಕರ್ನಾಟಕದಲ್ಲಿಯೇ ಅತೀ ಹೆಚ್ಚು ನಗದು ಮೊತ್ತವನ್ನು ಒಳಗೊಂಡಿರುತ್ತದೆ ಎಂದು ತಿಳಿಸಿದ್ದಾರೆ.

ಮಯೂರ ವರ್ಮ ಸಾಹಿತ್ಯ ಪ್ರಶಸ್ತಿಯು 25,001 (ಇಪ್ಪತ್ತೈದು ಸಾವಿರದ ಒಂದು) ರೂ ಹಾಗೂ ಪ್ರಮಾಣಪತ್ರದ ಜೊತೆ ಫಲತಾಂಬೂಲ ಒಳಗೊಂಡಿರುತ್ತದೆ. ಈ ಮಯೂರ ವರ್ಮ ಪ್ರಶಸ್ತಿಯು 45 ವರ್ಷದೊಳಗೆ 5 ಜನ ಪ್ರತಿಭಾವಂತ ಸಾಧಕರಿಗೆ ಪ್ರಧಾನ ಮಾಡಲಾಗುತ್ತದೆ. ಪ್ರತಿವರ್ಷ ಪುರಸ್ಕೃತರ ಆಯ್ಕೆಗಾಗಿ ಕನ್ನಡ ಸಾಹಿತ್ಯ ಪರಿಷತ್ತು, ಪರಿಷತ್ತಿನ ಅಧ್ಯಕ್ಷರ ನೇತೃತ್ವದಲ್ಲಿ 7 (ಏಳು) ಮಂದಿಯ ಆಯ್ಕೆ ಸಮಿತಿಯನ್ನು ರಚಿಸಿ ಕೂಲಂಕಶವಾಗಿ ಚರ್ಚಿಸಿ ಆಯ್ಕೆ ಮಾಡಲಾಗಿದೆ ಎಂದು ನಾಡೋಜ ಡಾ. ಮಹೇಶ ಜೋಶಿ ತಿಳಿಸಿದ್ದಾರೆ.

ಇದನ್ನೂ ಓದಿ: ಉಪ ಲೋಕಾಯುಕ್ತ-2 ಭರ್ತಿ ಮಾಡದ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.