ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬಂಧನಕ್ಕೆ ಆಗ್ರಹಿಸಿ ಎನ್ಎಸ್‌ಯುಐ ಕಾರ್ಯಕರ್ತರು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾಗೆ ಮುತ್ತಿಗೆ ಹಾಕುವ ಯತ್ನ ನಡೆಸಿದರು. ಕೂಡಲೇ ಪ್ರತಿಭಟನಾ ನಿರತರನ್ನ ಪೊಲೀಸರು ವಶಕ್ಕೆ ಪಡೆದು ಪರಿಸ್ಥಿತಿ ನಿಯಂತ್ರಿಸಿದರು.
ಸಿಎಂ ಗೃಹ ಕಚೇರಿ ಕೃಷ್ಣಾ ಎದುರು 15-20 ಮಂದಿ ಎನ್ಎಸ್‌ಯುಐ ಕಾರ್ಯಕರ್ತರು ಏಕಾಏಕಿ ಆಗಮಿಸಿ ಮುತ್ತಿಗೆ ಹಾಕುವ ಪ್ರಯತ್ನ ನಡೆಸಿದರು. ಕೃಷ್ಣಾ ಎದುರು ರಸ್ತೆ ತಡೆ ನಡೆಸಿ ಸಿಡಿ ಪ್ರದರ್ಶನ ಮಾಡಿದರು.
ಯುವಕನೊಬ್ಬನಿಗೆ ಸೀರೆ ಉಡಿಸಿ ಕರೆತಂದು ವಿನೂತನ ಪ್ರತಿಭಟನೆ ನಡೆಸಿದರು. ಕೂಡಲೇ ಮಾಜಿ ಸಚಿವ ರಮೇಶ್ ಜಾರಕಿಹೊಳಿಯನ್ನು ಬಂಧಿಸುವಂತೆ ಒತ್ತಾಯಿಸಿದರು.
ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು ತಮ್ಮ ವಾಹನಗಳಲ್ಲೇ ಕರೆದೊಯ್ದು ಗೊಂದಲದ ಪರಿಸ್ಥಿತಿಯನ್ನು ನಿಯಂತ್ರಿಸಿದರು.