ಬೆಂಗಳೂರು: ರಾಜಧಾನಿಯಲ್ಲಿ ಹಲವು ದಿನಗಳ ಬಳಿಕ ಕೋವಿಡ್ ಸೋಂಕಿತ ಪ್ರಕರಣಗಳ ಸಂಖ್ಯೆ ಒಂದು ಸಾವಿರಕ್ಕೂ ಅಧಿಕವಾಗಿದೆ. ಕಳೆದ 24 ಗಂಟೆಗಳಲ್ಲಿ ಸಿಲಿಕಾನ್ ಸಿಟಿಯಲ್ಲಿ ಒಟ್ಟು 1,154 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.
ಈ ಮೂಲಕ ನಗರದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 18,36,068 ಕ್ಕೆ ಏರಿಕೆಯಾಗಿದೆ. ಈವರೆಗೆ 16,974 ಮಂದಿ ಕೋವಿಡ್‌ನಿಂದ ಸಾವಿಗೀಡಾಗಿದ್ದಾರೆ. ಒಟ್ಟು 8,595 ಸಕ್ರಿಯ ಪ್ರಕರಣಗಳಿವೆ. ನಿನ್ನೆ 861 ಮಂದಿ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.
ನಿನ್ನೆ 1,094 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ ಒಟ್ಟು 11,105 ಕೋವಿಡ್ ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: 2023ರ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪ್ರಣಾಳಿಕೆ ಸಮಿತಿ ರಚನೆ.. ಜಿ. ಪರಮೇಶ್ವರ್ ಅಧ್ಯಕ್ಷ