ETV Bharat / state

Nursing Jobs in NIMHANS:ನಿಮ್ಹಾನ್ಸ್​ನಲ್ಲಿ ನೇಮಕಾತಿ; 161 ನರ್ಸಿಂಗ್​ ಹುದ್ದೆಗೆ ಅರ್ಜಿ ಆಹ್ವಾನ - ನರ್ಸಿಂಗ್​ ಹುದ್ದೆಗಳ ಭರ್ತಿಗೆ ಅಧಿಸೂಚನೆ

ಈ ಹುದ್ದೆ ಕುರಿತಾದ ಸಂಪೂರ್ಣ ಮಾಹಿತಿ ಮತ್ತು ಅರ್ಜಿ ಸಲ್ಲಿಕೆ, ವೇತನ ಸೇರಿದಂತೆ ಸಂಪೂರ್ಣ ಮಾಹಿತಿ ಇಲ್ಲಿದೆ

Nursing job Recruitment Notification From Nimhans bangalore

author img

By ETV Bharat Karnataka Team

Published : Oct 19, 2023, 5:16 PM IST

ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ನಿಮ್ಹಾನ್ಸ್​ (NIMHANS)ನಲ್ಲಿ ಖಾಲಿ ಇರುವ ನರ್ಸಿಂಗ್​ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು 161 ಹುದ್ದೆಗಳ ನೇಮಕಾತಿ ನಡೆಸಲಾಗುವುದು. ಬಿಎಸ್ಸಿ ಮತ್ತು ಮಿಡ್​ವೈಫ್​ ನರ್ಸ್​​ಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅಧಿಸೂಚನೆ
ಅಧಿಸೂಚನೆ

ಹುದ್ದೆ ವಿವರ: ನಿಮ್ಹಾನ್ಸ್​​ನಲ್ಲಿ ಖಾಲಿ ಇರುವ ಒಟ್ಟು 161 ನರ್ಸಿಂಗ್​ ಆಫೀಸರ್​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ನರ್ಸಿಂಗ್​ ಮಂಡಳಿಗಳಿಂದ ಬಿಎಸ್ಸಿ ನರ್ಸಿಂಗ್​ ಪದವಿ ಹೊಂದಿರಬೇಕು. ರಾಜ್ಯ ಅಥವಾ ಭಾರತ ನರ್ಸಿಂಗ್​ ಮಂಡಳಿಯಿಂದ ನರ್ಸ್​ ಅಥವಾ ಮಿಡ್​ವೈಫ್​ ನೋಂದಣಿ ಹೊಂದಿರಬೇಕು.

ಅನುಭವ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 50 ಹಾಸಿಗೆಯುಳ್ಳ ಆಸ್ಪತ್ರೆಗಳಲ್ಲಿ ಎರಡು ವರ್ಷ ನರ್ಸಿಂಗ್​ ಹುದ್ದೆ ನಿರ್ವಹಣೆ ಮಾಡಿದ ಅನುಭವ ಹೊಂದಿರಬೇಕು.

ವೇತನ: ಈ ಹುದ್ದೆಗಳಿಗೆ 9,300 ದಿಂದ 34,800ರೂ ವರೆಗೆ ಮಾಸಿಕ ವೇತನ ನಿಗದಿ ಮಾಡಲಾಗಿದೆ.

ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ಮತ್ತು ಗರಿಷ್ಠ 35 ವರ್ಷ ತುಂಬಿರಬೇಕು. ಕೇಂದ್ರ ಸರ್ಕಾರದ ನಿಯಮದ ಅನುಸಾರ ಮೀಸಲು ಹೊಂದಿರುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುವುದು.

ಅರ್ಜಿ ಸಲ್ಲಿಕೆ: ಈ ಹುದ್ದೆಗೆ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಪರಿಶೀಲಿಸಿ ಮುಂದುವರೆಯಬೇಕು. ಅಗತ್ಯ ದಾಖಲಾತಿ ಮತ್ತು ಪ್ರಮಾಣ ಪತ್ರ ಸೇರಿದಂತೆ ಮತ್ತಿತ್ತರ ವಿವರದೊಂದಿಗೆ ಅರ್ಜಿ ಶುಲ್ಕದ ಮಾಹಿತಿಯನ್ನು ಭರಿಸಬೇಕಿದೆ.

ಈ ಹುದ್ದೆಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 885 ರೂ. ಅರ್ಜಿ ಶುಲ್ಕ ಮತ್ತು ಸಾಮಾನ್ಯ ಅಭ್ಯರ್ಥಿಗಳಿಗೆ 1,180 ರೂ ಅರ್ಜಿ ಶುಲ್ಕ ಭರಿಸಬೇಕಿದೆ. ವಿಕಲಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

ಈ ಹುದ್ದೆಗೆ ಅಕ್ಟೋಬರ್​ 18 ರಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ನವೆಂಬರ್​ 18 ಆಗಿದೆ.

ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಕೆಗೆ ಅಭ್ಯರ್ಥಿಗಳು nimhans.ac.in ಈ ಜಾಲತಾಣಕ್ಕೆ ಭೇಟಿ ನೀಡಬಹುದಾಗಿದೆ.

ಇದನ್ನೂ ಓದಿ: Job Alert: ವಿಜಯಪುರ ಜಿಲ್ಲಾ ಪಂಚಾಯತ್​ನಿಂದ​ ನೇಮಕಾತಿ; ಪಿಯುಸಿ ಆಗಿದ್ರೆ ಅರ್ಜಿ ಸಲ್ಲಿಸಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.