ETV Bharat / state

ಇಂದು ಮಧ್ಯಾಹ್ನ 2.15ಕ್ಕೆ ನೂತನ ಸಚಿವರ ಪದಗ್ರಹಣ ಸಮಾರಂಭ - ರಾಜ್ಯ ಸಚಿವ ಸಂಪುಟ ವಿಸ್ತರಣೆ

ಇಂದು 11 ಗಂಟೆಗೆ ಅಥವಾ 11.30 ರ ಒಳಗೆ ಅಧಿಕೃತವಾಗಿ ರಾಜಭವನದಿಂದ ಸಚಿವರ ಪಟ್ಟಿ ಬಿಡುಗಡೆ ಆಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

CM Basavaraja Bommai
ಬಸವರಾಜ ಬೊಮ್ಮಾಯಿ
author img

By

Published : Aug 4, 2021, 10:01 AM IST

Updated : Aug 4, 2021, 10:26 AM IST

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕಡೆಗೂ ಮುಹೂರ್ತ ಫಿಕ್ಸ್​ ಆಗಿದೆ. ಇಂದು ಮಧ್ಯಾಹ್ನ 2.15 ಕ್ಕೆ ನೂತನ ಸಚಿವರ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ವಿಸ್ತರಣೆ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಿಎಂ

ದೆಹಲಿಯಿಂದ ಬಂದಿಳಿದ ಬಳಿಕ ಸಚಿವ ಸಂಪುಟ ವಿಸ್ತರಣೆ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಿಎಂ, ನಿನ್ನೆ ಮತ್ತು ಮೊನ್ನೆ ಸಚಿವ ಸಂಪುಟ ರಚನೆ ಬಗ್ಗೆ ದೆಹಲಿಯಲ್ಲಿ ಚರ್ಚೆ ಆಗಿದೆ. ಇಂದು 11 ಗಂಟೆಗೆ ಅಥವಾ 11.30 ರ ಒಳಗೆ ಅಧಿಕೃತವಾಗಿ ರಾಜಭವನದಿಂದ ಪಟ್ಟಿ ಬಿಡುಗಡೆ ಆಗುತ್ತದೆ. 2.15 ಕ್ಕೆ ಸಚಿವರ ಪ್ರಮಾಣ ವಚನ ಸ್ವೀಕಾರ ನಡೆಯಲಿದೆ ಎಂದರು.

invitation
ಪ್ರಮಾಣ ವಚನದ ಆಮಂತ್ರಣ

ಇನ್ನು ಯಡಿಯೂರಪ್ಪನವರ ಪುತ್ರ ಬಿ.ವೈ ವಿಜಯೇಂದ್ರಗೆ ಸಚಿವ ಸ್ಥಾನ ನೀಡುವ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಯಾವುದೇ ಪ್ರತಿಕ್ರಿಯೆ ನೀಡದೆ ತೆರಳಿದರು.

Last Updated : Aug 4, 2021, 10:26 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.