ಬೆಂಗಳೂರು : ಕೊಡಗು ಜಿಲ್ಲೆಯ ಕರ್ಣಂಗೇರಿ ಮೀಸಲು ಅರಣ್ಯ ಪ್ರದೇಶದಲ್ಲಿ ಖಾಸಗಿ ವ್ಯಕ್ತಿಗಳು ಮಾಡಿದ್ದ ಒತ್ತುವರಿ ತೆರವುಗೊಳಿಸಿದ್ದೇವೆ (clearance of Karnangeri forest area) ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ಸ್ಪಷ್ಟಪಡಿಸಿದೆ (Government clarification to High court).
ಮೀಸಲು ಅರಣ್ಯ ಪ್ರದೇಶದಲ್ಲಿ ಕೆಲ ಪ್ರಭಾವಿಗಳು ಮಾಡಿದ್ದ ಒತ್ತುವರಿ ತೆರವುಗೊಳಿಸಲು ಸರ್ಕಾರ ಮತ್ತು ಅರಣ್ಯ ಇಲಾಖೆಗೆ ನಿರ್ದೇಶಿಸಬೇಕು ಎಂದು ಕೋರಿ ಸ್ಥಳೀಯ ನಿವಾಸಿ ಕೆ.ಎ ರವಿಚೆಂಗಪ್ಪ ಎಂಬುವರು ಪಿಐಎಲ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಕೈಗೆತ್ತಿಕೊಂಡ ಸಿಜೆ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ, ಸರ್ಕಾರಿ ವಕೀಲರು ವಾದ ಮಂಡಿಸಿ, ಹೈಕೋರ್ಟ್ ನಿರ್ದೇಶನದಂತೆ ಕರ್ಣಂಗೇರಿ ಮೀಸಲು ಅರಣ್ಯ ಪ್ರದೇಶವನ್ನು (Karnangeri forest area) ಸಮೀಕ್ಷೆ ನಡೆಸಲಾಗಿದೆ. ಸರ್ವೇ ವೇಳೆ ಅರಣ್ಯ ಪ್ರದೇಶದ ಕೆಲವೆಡೆ ಒತ್ತುವರಿ ನಡೆದಿದ್ದು ಕಂಡು ಬಂದಿತ್ತು. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಅಗತ್ಯ ಕ್ರಮಗಳನ್ನು ಕೈಗೊಂಡು ಅರಣ್ಯ ಪ್ರದೇಶದ ಎಲ್ಲ ಒತ್ತುವರಿಗಳನ್ನು ತೆರವು ಮಾಡಲಾಗಿದೆ. ಹಾಗೆಯೇ, ಮುಂದಿನ ದಿನಗಳಲ್ಲಿ ಒತ್ತುವರಿಗೆ ಅವಕಾಶ ಸಿಗದಂತೆ ಸುತ್ತಲೂ ಬೇಲಿ ಅಳವಡಿಸಲಾಗಿದೆ ಎಂದು ವಿವರಿಸಿದರು.
ಹೇಳಿಕೆ ಪರಿಗಣಿಸಿದ ಪೀಠ, ಕರ್ಣಂಗೇರಿ ಮೀಸಲು ಅರಣ್ಯ ಪ್ರದೇಶದಲ್ಲಿ ಒತ್ತುವರಿ ತೆರವುಗೊಳಿಸಲಾಗಿದೆ (Government clarification to High court) ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಇದರಿಂದಾಗಿ ಹೆಚ್ಚಿನ ವಿಚಾರಣೆ ನಡೆಸುವ ಅಗತ್ಯತೆ ಕಂಡುಬರುತ್ತಿಲ್ಲ ಎಂದು ಅಭಿಪ್ರಾಯಪಟ್ಟು ಅರ್ಜಿ ಇತ್ಯರ್ಥಪಡಿಸಿ ಆದೇಶಿಸಿತು.