ETV Bharat / state

ವಿಧಾನಪರಿಷತ್​ನ ನಾಲ್ಕು ಕ್ಷೇತ್ರಗಳಿಗೆ ಅ.28 ಚುನಾವಣೆ.. ಆಯೋಗದಿಂದ ಸಕಲ ಸಿದ್ಧತೆ - ಬೆಂಗಳೂರು ಶಿಕ್ಷಕರ ಕ್ಷೇತ್ರ

ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ 69 ಮತ ಕೇಂದ್ರ, ಆಗ್ನೇಯ ಪದವೀಧರ ಕ್ಷೇತ್ರದಲ್ಲಿ 187 ಮತಕೇಂದ್ರ, ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ 147 ಮತಕೇಂದ್ರ ಮತ್ತು ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ 146 ಮತಕೇಂದ್ರಗಳನ್ನು ಸ್ಥಾಪನೆ ಮಾಡಲಾಗಿದೆ..

Vidhan Parishad
ವಿಧಾನಪರಿಷತ್​ನ ನಾಲ್ಕು ಕ್ಷೇತ್ರಗಳಿಗೆ ಅಕ್ಟೋಬರ್ 28 ಚುನಾವಣೆ
author img

By

Published : Oct 24, 2020, 10:34 PM IST

ಬೆಂಗಳೂರು : ವಿಧಾನ ಪರಿಷತ್​ನ ಎರಡು ಶಿಕ್ಷಕರ ಹಾಗೂ ಎರಡು ಪದವೀಧರ ಕ್ಷೇತ್ರಗಳಿಗೆ ಅಕ್ಟೋಬರ್ 28ರಂದು ಚುನಾವಣೆ ನಡೆಸಲು ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದೆ.

ವಿಧಾನಪರಿಷತ್‌ನ ನಾಲ್ಕು ಸ್ಥಾನಗಳಿಗೆ ನಡೆಯುವ ಚುನಾವಣೆಗಾಗಿ 549 ಮತಕೇಂದ್ರಗಳು ಹಾಗೂ 4 ಮತ ಎಣಿಕೆ ಕೇಂದ್ರಗನ್ನು ಸ್ಥಾಪನೆ ಮಾಡಲಾಗಿದೆ. ಮತದಾನ ನಡೆಯುವ ದಿನದ 48 ಗಂಟೆಗಳ ಮುನ್ನ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದೆ. ಅಭ್ಯರ್ಥಿಗಳನ್ನು ಹೊರತುಪಡಿಸಿ ಉಳಿದವರು ಕ್ಷೇತ್ರದಿಂದ ಹೊರಹೋಗಬೇಕು. ಯಾವುದೇ ಪಕ್ಷದ ಕಾರ್ಯಕ್ರಮಗಳನ್ನು ಸಹ ನಿರ್ಬಂಧಿಸಲಾಗಿದೆ. ಪಕ್ಷದ ಮುಖಂಡರು ಸೇರಿದಂತೆ ಕ್ಷೇತ್ರಕ್ಕೆ ಸಂಬಂಧಪಡದವರು ಕ್ಷೇತ್ರದಲ್ಲಿದ್ದರೆ, ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಚುನಾವಣಾ ಆಯೋಗ ತಿಳಿಸಿದೆ.

ಕ್ಷೇತ್ರವಾರು ಕೇಂದ್ರ : ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ 69 ಮತ ಕೇಂದ್ರ, ಆಗ್ನೇಯ ಪದವೀಧರ ಕ್ಷೇತ್ರದಲ್ಲಿ 187 ಮತಕೇಂದ್ರ, ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ 147 ಮತಕೇಂದ್ರ ಮತ್ತು ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ 146 ಮತಕೇಂದ್ರಗಳನ್ನು ಸ್ಥಾಪನೆ ಮಾಡಲಾಗಿದೆ.

ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಒಟ್ಟು 22261 ಮತದಾರರಿದ್ದು, 7992 ಪುರುಷರು, 14266 ಮಹಿಳೆಯರು ಮತ್ತು ಮೂವರು ಇತರೆ ಮತದಾರರು ಇದ್ದಾರೆ. ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಒಟ್ಟು 75781 ಮತದಾರರಿದ್ದು, 48,584 ಪುರುಷರು, 27186 ಮಹಿಳೆಯರು ಮತ್ತು 11 ಇತರೆ ಮತದಾರರಿದ್ದಾರೆ. ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಒಟ್ಟು 1.09 ಲಕ್ಷ ಮತದಾರರಿದ್ದು, 68414 ಪುರುಷರು, 40711 ಮಹಿಳೆಯರು ಮತ್ತು 4 ಇತರೆ ಮತದಾರರಿದ್ದಾರೆ.

ನಾಲ್ಕು ಮತ ಎಣಿಕೆ ಕೇಂದ್ರಗಳು : ಅ.28 ರಂದು ಚುನಾವಣೆ ನಡೆಯಲಿದ್ದು, ನವೆಂಬರ್ 2 ರಂದು ಮತ ಎಣಿಕೆ ನಡೆಯಲಿದೆ. ಮತ ಎಣಿಕೆ ಎಲ್ಲೆಲ್ಲಿ : ಆಗ್ನೇಯ ಪದವೀಧರ ಕ್ಷೇತ್ರ ಮತ್ತು ಬೆಂಗಳೂರು ಶಿಕ್ಷಕರ ಮತ ಕ್ಷೇತ್ರದ ಮತ ಎಣಿಕೆಯು ನಗರದ ಸರ್ಕಾರಿ ಕಲಾ ಕಾಲೇಜಿನಲ್ಲಿ ನಡೆಯಲಿದ್ದು, ಪ್ರತ್ಯೇಕವಾಗಿ ಎರಡು ಹಾಲ್‌ನಲ್ಲಿ ತಲಾ 14 ಟೇಬಲ್‌ಗಳ ವ್ಯವಸ್ಥೆ ಮಾಡಲಾಗಿದೆ.

ಪದವೀಧರ ಕ್ಷೇತ್ರದ ಮತ ಎಣಿಕೆಯು ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ನಡೆಯಲಿದೆ. ಒಂದು ಹಾಲ್‌ನಲ್ಲಿ ಏಳು ಟೇಬಲ್ ವ್ಯವಸ್ಥೆ ಮಾಡಲಾಗಿದೆ. ಈಶಾನ್ಯ ಶಿಕ್ಷಕರ ಕ್ಷೇತ್ರದ ಮತ ಎಣಿಕೆಯು ಕಲಬುರ್ಗಿ ವಿಶ್ವವಿದ್ಯಾಲಯದ ಗಣಿತ ವಿಭಾಗದಲ್ಲಿ ನಡೆಯಲಿದ್ದು, ಒಂದು ಹಾಲ್‌ನಲ್ಲಿ ಏಳು ಟೇಬಲ್ ವ್ಯವಸ್ಥೆ ಮಾಡಲಾಗಿದೆ.

ಕಣದಲ್ಲಿ 40 ಅಭ್ಯರ್ಥಿಗಳು : ವಿಧಾನಪರಿಷತ್‌ನ ಎರಡು ಪದವೀಧರ ಮತ್ತು ಎರಡು ಶಿಕ್ಷಕರ ಕ್ಷೇತ್ರಗಳ ಚುನಾವಣಾ ಕಣದಲ್ಲಿ ಅಂತಿಮವಾಗಿ 40 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ 9 ಅಭ್ಯರ್ಥಿಗಳು, ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ 5 ಅಭ್ಯರ್ಥಿಗಳು, ಆಗ್ನೇಯ ಪದವೀಧರ ಕ್ಷೇತ್ರದಲ್ಲಿ 15 ಅಭ್ಯರ್ಥಿಗಳು ಮತ್ತು ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ 11 ಅಭ್ಯರ್ಥಿಗಳು ಅಖಾಡದಲ್ಲಿದ್ದಾರೆ. ನಾಲ್ಕು ಕ್ಷೇತ್ರದಲ್ಲಿ ಆಡಳಿತರೂಢ ಬಿಜೆಪಿ, ಪ್ರತಿಪಕ್ಷ ಕಾಂಗ್ರೆಸ್ ಮತ್ತು ಜೆಡಿಎಸ್‌ನ ತಲಾ 4 ಅಭ್ಯರ್ಥಿಗಳು, ನೋಂದಾಯಿತ ಪಕ್ಷದಿಂದ 6 ಅಭ್ಯರ್ಥಿಗಳು ಮತ್ತು 22 ಪಕ್ಷೇತರ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ.

ಪರ್ಯಾಯ ದಾಖಲೆಗಳು : ವಿಧಾನಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರ ಮತ್ತು ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಮತದಾರರು ಮತ ಚಲಾಯಿಸಲು ಮತದಾರರ ಭಾವಚಿತ್ರವುಳ್ಳ ಗುರುತಿನ ಚೀಟಿ ಹಾಜರುಪಡಿಸಲು ಸಾಧ್ಯವಾಗದಿದ್ದಲ್ಲಿ ಪರ್ಯಾಯ ದಾಖಲೆ ಸಲ್ಲಿಸಿ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗಿದೆ.

ಮತ ಚಲಾಯಿಸಲು ಪರ್ಯಾಯ ದಾಖಲಾತಿಯಾದ ಆಧಾರ್ ಕಾರ್ಡ್, ವಾಹನ ಚಾಲನಾ ಪರವಾನಗಿ, ಪಾನ್‌ಕಾರ್ಡ್, ಪಾಸ್‌ಪೋರ್ಟ್, ಕೇಂದ್ರ ಅಥವಾ ರಾಜ್ಯ ಸರ್ಕಾರಿ ನೌಕರರಾದರೆ ಸರ್ಕಾರಿ ಸ್ವಾಮ್ಯದ ಸಂಸ್ಥೆಯಲ್ಲಿ ಕೆಲಸ ಮಾಡುವ ಗುರುತಿನ ಚೀಟಿಗಳನ್ನು ತೋರಿಸಿ ಮತದಾನ ಮಾಡಬಹುದಾಗಿದೆ. ಸಂಸದರು, ಶಾಸಕರು ನೀಡಿದ ಅಧಿಕೃತ ಗುರುತಿನ ಚೀಟಿ, ಪದವಿಪ್ರಮಾಣ ಪತ್ರ, ವಿಕಲಚೇತನರ ಪ್ರಮಾಣ ಪತ್ರವನ್ನು ಸಹ ಹಾಜರು ಪಡಿಸಿ ಮತದಾನ ಚಲಾಯಿಸಬಹುದಾಗಿದೆ.

ಎಡಗೈನ ತೋರು ಬೆರಳಿಗೆ ಶಾಹಿ : ಮತದಾನದ ದಿನದಂದು ಮತದಾರರಿಗೆ ಎಡಗೈನ ತೋರು ಬೆರಳಿಗೆ ಶಾಹಿ ಹಚ್ಚಲು ಚುನಾವಣಾ ಆಯೋಗ ಸೂಚನೆ ನೀಡಿದೆ. ಮತ ಕೇಂದ್ರಕ್ಕೆ ಬರುವ ಮತದಾರರಿಗೆ ಮತದಾನ ಮಾಡಿರುವ ಗುರುತಿಗಾಗಿ ಹಾಕಲಾಗುವ ಶಾಹಿಯನ್ನು ಎಡಗೈನ ತೋರು ಬೆರಳಿಗೆ ಹಾಕಬೇಕು ಎಂದು ನಿರ್ದೇಶನ ನೀಡಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.