ETV Bharat / state

ಒಡಿಶಾ ವಲಸೆ ಕಾರ್ಮಿಕರ ಸಮಸ್ಯೆ:  ಸಿಎಂ ಪಟ್ನಾಯಕ್ ಬಿಎಸ್‌ವೈ ಚರ್ಚೆ - ಕೇಂದ್ರ ಸರ್ಕಾರದ ಮಾರ್ಗಸೂಚಿ

ಪ್ರಸ್ತುತ ಕೇಂದ್ರ ಸರ್ಕಾರದ ಮಾರ್ಗಸೂಚಿಗಳಂತೆ ವಿವಿಧ ವಲಯಗಳಲ್ಲಿ ಆರ್ಥಿಕ ಚಟುವಟಿಕೆಗಳನ್ನು ಮರು ಪ್ರಾರಂಭ ಮಾಡಲಾಗುತ್ತಿದೆ. ಇದರಿಂದ ಬಹುತೇಕ ಕಾರ್ಮಿಕರಿಗೆ ಮತ್ತೆ ಉದ್ಯೋಗ ದೊರೆಯಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

Odisha CM Patnaik BSY Debate
ಒಡಿಶಾ ವಲಸೆ ಕಾರ್ಮಿಕರ ಕುರಿತು ಒಡಿಶಾ ಸಿಎಂ ಪಟ್ನಾಯಕ್ ಬಿಎಸ್ ವೈ ಚರ್ಚೆ
author img

By

Published : May 2, 2020, 7:43 PM IST

Updated : May 2, 2020, 10:23 PM IST

ಬೆಂಗಳೂರು: ಕರ್ನಾಟಕದಲ್ಲಿ ನೆಲೆಸಿರುವ ಒಡಿಶಾ ವಲಸೆ ಕಾರ್ಮಿಕರನ್ನು ಅವರ ತವರಿಗೆ ವಾಪಸ್‌ ಕಳುಹಿಸುವ ಬಗ್ಗೆ ಸಿಎಂ ಬಿ ಎಸ್ ಯಡಿಯೂರಪ್ಪ ಅವರೊಂದಿಗೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಸಮಾಲೋಚನೆ ನಡೆಸಿದರು.

ಒಡಿಶಾ ವಲಸೆ ಕಾರ್ಮಿಕರ ಕುರಿತು ಒಡಿಶಾ ಸಿಎಂ ಪಟ್ನಾಯಕ್ ಬಿಎಸ್‌ವೈ ಚರ್ಚೆ..

ರಾಜ್ಯದಲ್ಲಿ ಲಾಕ್‌ಡೌನ್ ಸಂದರ್ಭದಲ್ಲಿ ವಲಸೆ ಕಾರ್ಮಿಕರಿಗೆ ಎಲ್ಲಾ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗಿದೆ. ಕಾರ್ಮಿಕರು ಹಸಿವಿನಿಂದ ಬಳಲದಂತೆ ಎಚ್ಚರವಹಿಸಲಾಗಿದೆ ಎಂದು ಒಡಿಶಾ ಸಿಎಂಗೆ ಹಾಗೂ ಕೇಂದ್ರದ ಮಂತ್ರಿಗಳಿಗೆ ಬಿಎಸ್‌ವೈ ಮನವರಿಕೆ ಮಾಡಿಕೊಟ್ಟಿದ್ದಾರೆ.

ಪ್ರಸ್ತುತ ಕೇಂದ್ರ ಸರ್ಕಾರದ ಮಾರ್ಗಸೂಚಿಗಳಂತೆ ವಿವಿಧ ವಲಯಗಳಲ್ಲಿ ಆರ್ಥಿಕ ಚಟುವಟಿಕೆಗಳನ್ನು ಮರು ಪ್ರಾರಂಭ ಮಾಡಲಾಗುತ್ತಿದೆ. ಇದರಿಂದ ಬಹುತೇಕ ಕಾರ್ಮಿಕರಿಗೆ ಮತ್ತೆ ಉದ್ಯೋಗ ದೊರೆಯಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಹೊರ ರಾಜ್ಯಗಳಿಗೆ ಕಾರ್ಮಿಕರನ್ನು ಕಳುಹಿಸುವ ಸಂಬಂಧ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಅವರು ಒಡಿಶಾದ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದು, ಸಮನ್ವಯ ನಿರ್ವಹಿಸುವರು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಒಡಿಶಾ ರಾಜ್ಯಕ್ಕೆ ಹಿಂತಿರುಗುವ ಕಾರ್ಮಿಕರ ವಿವರ, ಅವರ ಆರೋಗ್ಯ ತಪಾಸಣೆ ಹಾಗೂ ಅವರ ಕ್ವಾರಂಟೈನ್ ವ್ಯವಸ್ಥೆ ಮತ್ತಿತರ ವಿಷಯಗಳ ಕುರಿತು ಚರ್ಚಿಸಲಾಯಿತು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯಭಾಸ್ಕರ್, ಒಡಿಶಾ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಸಭೆಯಲ್ಲಿದ್ದರು.

Last Updated : May 2, 2020, 10:23 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.