ETV Bharat / state

ಕಾರಾಗೃಹದ ನಿಯಮಾವಳಿಯಂತೆ ಕ್ರಮ; ಬಸವರಾಜ ಬೊಮ್ಮಾಯಿ ಸ್ಪಷ್ಟನೆ

ದಂಡ ಕಟ್ಟಿ ಅವಧಿಗೂ‌ ಮುನ್ನ ಶಶಿಕಲಾ ಬಿಡುಗಡೆ ವಿಚಾರಕ್ಕೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. ನ್ಯಾಯಾಲಯದ ತೀರ್ಪನ್ನು ಆಧರಿಸಿ ಜೈಲಾಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ ಎಂದು ಸ್ಪಷ್ಟಪಡಿಸಿದರು. ಇನ್ನು ಡ್ರಗ್ಸ್ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು.

Basavaraja Bommai
ಗೃಹ ಸಚಿವ ಬಸವರಾಜ ಬೊಮ್ಮಾಯಿ
author img

By

Published : Nov 20, 2020, 1:39 PM IST

ಬೆಂಗಳೂರು: ಹತ್ತು ಕೋಟಿ ರೂ. ದಂಡ ಕಟ್ಟಿ ಅವಧಿಗೂ‌ ಮುನ್ನ ಶಶಿಕಲಾ ಬಿಡುಗಡೆ ವಿಚಾರಕ್ಕೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ಕಾರಾಗೃಹದ ನಿಯಮಾವಳಿಯಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದರು.

ವಿಧಾನಸೌಧದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ನ್ಯಾಯಾಲಯದ ತೀರ್ಪು ಆಧರಿಸಿ ಜೈಲಾಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ ಎಂದು ತಿಳಿಸಿದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ

ಆನ್ ಲೈನ್ ಗೇಮ್ ನಿಷೇಧಕ್ಕೆ ಹೊಸ ಕಾನೂನು :

ರಾಜ್ಯದಲ್ಲಿ ಕಾನೂನು ಬಾಹಿರವಾಗಿ ಆನ್​​ಲೈನ್ ಗೇಮ್​​ಗಳು ನಡೆಯುತ್ತಿದೆ. ಅದನ್ನು ನಿಷೇಧಿಸುವ ಬಗ್ಗೆ ಹೊಸ ಕಾನೂನು ತರುತ್ತೇವೆ ಎಂದು ತಿಳಿಸಿದರು. ಬೇರೆ ರಾಜ್ಯಗಳಲ್ಲಿ ಈ ಬಗ್ಗೆ ಯಾವ ರೀತಿಯ ಕಾನೂನುಗಳನ್ನು ಮಾಡಿದ್ದಾರೆ ಎಂಬುದರ ಬಗ್ಗೆ ಅಧ್ಯಯನ‌ ನಡೆಸುತ್ತಿದ್ದೇವೆ. ಯುವಕರು ಬಲಿಯಾಗುತ್ತಿರುವ ಬಗ್ಗೆ ಪೋಷಕರು ಸೇರಿದಂತೆ ಸಾರ್ವಜನಿಕ ವಲಯದಿಂದಲೂ ವ್ಯಾಪಕ ದೂರುಗಳು ಬರುತ್ತಿವೆ. ಹಾಗಾಗಿ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ತಿಳಿಸಿದರು. ಈಗಾಗಲೇ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದೇನೆ. ಸರ್ಕಾರದಿಂದ ಅನುಮತಿ ಪಡೆದಿದ್ದರೆ ಸಮಸ್ಯೆ ಇಲ್ಲ. ಕಾನೂನು ಬಾಹಿರವಾಗಿ ಯಾವುದೇ ಆನ್ ಲೈನ್ ಗೇಮ್ ನಡೆಯುತ್ತಿದ್ದರೂ ಕ್ರಮ ನಿಶ್ಚಿತ ಎಂದರು.

ರಕ್ಷಿಸುವ ಪ್ರಶ್ನೆಯೇ ಇಲ್ಲ:

ಡ್ರಗ್ಸ್ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಕ್ರಮ ಕೈಗೊಳ್ಳುತ್ತೇವೆ. ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ಪ್ರತಿದಿನ ಹೊಸ ಎಫ್​​ಐಆರ್ ದಾಖಲಾಗುತ್ತಿವೆ ಎಂದು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.