ETV Bharat / state

ಸಾರ್ವಜನಿಕ ಕುಂದು-ಕೊರತೆಗಳಿಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕು: ಎಂಟಿಬಿ ನಾಗರಾಜ್

ನಗರಸಭೆ ವ್ಯಾಪ್ತಿಯಲ್ಲಿ ಮೂಲ ಸೌಲಭ್ಯ ಸಮಸ್ಯೆಗಳ ಪರಿಹಾರಕ್ಕೆ ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕು ಎಂದು ಎಂಎಲ್​ಸಿ ಎಂಟಿಬಿ ನಾಗರಾಜ್ ಸೂಚಿಸಿದ್ದಾರೆ.

MTB Nagaraj
ಸಾರ್ವಜನಿಕ ಕುಂದು-ಕೊರತೆಗಳಿಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಿ: ಎಂ.ಟಿ.ಬಿ ನಾಗರಾಜ್
author img

By

Published : Sep 26, 2020, 8:30 AM IST

ಹೊಸಕೋಟೆ: ಸಾರ್ವಜನಿಕ ಕುಂದು-ಕೊರತೆಗಳಿಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕು ಎಂದು ಎಂಎಲ್​ಸಿ ಎಂಟಿಬಿ ನಾಗರಾಜ್ ಸೂಚನೆ ನೀಡಿದರು.

ಸಾರ್ವಜನಿಕ ಕುಂದು-ಕೊರತೆಗಳಿಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕು: ಎಂಟಿಬಿ ನಾಗರಾಜ್

ಹೊಸಕೋಟೆ ನಗರಸಭೆ ಕಚೇರಿಯಲ್ಲಿ ನಗರಸಭಾ ಸದಸ್ಯರೊಂದಿಗೆ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ನಗರಸಭೆ ವ್ಯಾಪ್ತಿಯಲ್ಲಿ ಮೂಲ ಸೌಲಭ್ಯ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಸ್ಪಂದಿಸಬೇಕು. ಅಧಿಕಾರಿಗಳೊಂದಿಗೆ ಸಮನ್ವಯತೆ ಸಾಧಿಸಿ ಸಮಸ್ಯೆಗಳ ಪರಿಹಾರಕ್ಕೆ ಶ್ರಮಿಸಬೇಕು ಎಂದರು. ನಗರಸಭೆಯಲ್ಲಿ ಯಾವುದಾದರೂ ಪ್ರಮುಖ ಸಮಸ್ಯೆಗಳಿದ್ದರೆ ಗಮನಕ್ಕೆ ತನ್ನಿ. ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ನೆರವು ಕೊಡಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಸಮಸ್ಯೆಗಳ ಪರಿಹಾರ ವಿಷಯದಲ್ಲಿ ಪಕ್ಷ ಭೇದ ಮರೆತು ಕಾರ್ಯನಿರ್ವಹಿಸಬೇಕು. ಚುನಾವಣೆ ಸಂದರ್ಭದಲ್ಲಿ ಪಕ್ಷಾಧಾರಿತವಾಗಿ ಹೋರಾಟ ಸೂಕ್ತ. ಅಭಿವೃದ್ಧಿ ವಿಚಾರದಲ್ಲಿ ಸಹಮತವಿರಲಿ. ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ದೂರವಿರಲಿ ಎಂದರು.

ಸಾರ್ವಜನಿಕರು ಮತ್ತು ನಗರಸಭೆ ಸದಸ್ಯರು ತಮ್ಮ‌‌ ವಾರ್ಡ್​ಗಳಲ್ಲಿ ಸರಿಯಾಗಿ ಕೆಲಸಗಳು ನಡೆಯುತ್ತಿಲ್ಲ ಎಂದು ಅಧಿಕಾರಿಗಳಿಗೆ ತಿಳಿಸಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ ಎಂದು ಎಂಎಲ್‌ಸಿ ಮುಂದೆ ಸಮಸ್ಯೆಗಳನ್ನು ಹೇಳಿದರು. ಇದಕ್ಕೆ ಅಧಿಕಾರಿಗಳ ವಿರುದ್ಧ ಗುಡುಗಿದ ಅವರು, ಅಭಿವೃದ್ಧಿ ಕೆಲಸಗಳಿಗೆ ಯಾವುದೇ ತೊಡಕು ಆಗಬಾರದು. ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸಲು ಅಧಿಕಾರಿಗಳು ಮುಂದಾಗಬೇಕು. ಸ್ಥಳಕ್ಕೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸಿ ತಾಲೂಕಿನಲ್ಲಿ ಯಾವುದೇ ಸಮಸ್ಯೆಗಳು ಬಾರದಂತೆ ಎಚ್ಚರ ವಹಿಸಬೇಕು ಎಂದು ಸೂಚನೆ ನೀಡಿದರು.

ತಾಂತ್ರಿಕ ಕಾರಣಗಳಿಂದ ಅಧ್ಯಕ್ಷ, ಉಪಾಧ್ಯಕ್ಷರ ನೇಮಕಾತಿ ನನೆಗುದಿಯಲ್ಲಿದೆ. ಅಲ್ಲಿಯವರೆಗೆ ನಿಯೋಜನೆಗೊಂಡಿರುವ ಆಡಳಿತಾಧಿಕಾರಿಯೊಂದಿಗೆ ಚರ್ಚಿಸಿ ಅಭಿವೃದ್ಧಿಗೆ ಪೂರಕವಾಗಿ ಕಾರ್ಯನಿರ್ವಸಹಿಸಬೇಕು. ಈ ಸಂಬಂಧ ಆಡಳಿತ ಅಧಿಕಾರಿಗೆ ಅಗತ್ಯ ಸೂಚನೆ ನೀಡಲಾಗುವುದು. ಕಳೆದ ವಿಧಾನಸಭಾ ಅವಧಿಯಲ್ಲಿ ಕ್ಷೇತ್ರಕ್ಕೆ ಅಭಿವೃದ್ಧಿಗಾಗಿ ಸಾಕಷ್ಟು ಅನುದಾನ ಬಿಡುಗಡೆಗೊಳಿಸಲಾಗಿತ್ತು. ಈ ಬಾರಿ ಮತ್ತಷ್ಟು ಅನುದಾನ ಬಿಡುಗಡೆಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಕ್ರಮ ವಹಿಸಲಾಗುವುದು. ಕ್ಷೇತ್ರದ ಅಭಿವೃದ್ಧಿಗೆ ಅವಿರತ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.