ಬೆಂಗಳೂರು : ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್ಗೆ ಸ್ಪರ್ಧಿಸಲು ಸ್ವೀಕೃತವಾಗಿರುವ ಎಲ್ಲಾ ಏಳು ನಾಮಪತ್ರಗಳು ಕ್ರಮಬದ್ಧವಾಗಿವೆ ಹಾಗೂ ಅಂಗೀಕೃತವಾಗಿವೆ. ಹಾಗಾಗಿ, ಮೂರು ಪಕ್ಷಗಳ ಏಳು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗುವುದು ನಿಚ್ಚಳವಾಗಿದೆ.
ಚುನಾವಣಾಧಿಕಾರಿಗಳೂ ಆದ ವಿಧಾನಸಭೆಯ ಕಾರ್ಯದರ್ಶಿ ಎಂ ಕೆ ವಿಶಾಲಾಕ್ಷಿ ಅವರು, ಇಂದು ನಾಮಪತ್ರಗಳ ಪರಿಶೀಲನೆ ನಡೆಸಿದ್ದಾರೆ. ಎಲ್ಲಾ ಏಳು ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ ಮತ್ತು ಅಂಗೀಕೃತಗೊಂಡಿವೆ ಎಂದು ಅವರು ತಿಳಿಸಿದ್ದಾರೆ. ನಾಮಪತ್ರ ವಾಪಸ್ ಪಡೆಯಲು ಮೇ 27ರ ಮಧ್ಯಾಹ್ನ 3 ಗಂಟೆವರೆಗೂ ಅವಕಾಶವಿದೆ. ನಂತರ ಆಯ್ಕೆಯಾಗಿರುವ ಬಗ್ಗೆ ಅಧಿಕೃತವಾಗಿ ಪ್ರಕಟಿಸಲಾಗುತ್ತದೆ.
ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಡಿಸಿಎಂ, ಹಾಲಿ ಮೇಲ್ಮನೆ ಸದಸ್ಯ ಲಕ್ಷ್ಮಣ ಸವದಿ, ಛಲವಾದಿ ನಾರಾಯಣಸ್ವಾಮಿ, ಕೇಶವಪ್ರಸಾದ್, ಹೇಮಲತಾ ನಾಯಕ್, ಕಾಂಗ್ರೆಸ್ ಅಭ್ಯರ್ಥಿಗಳಾದ ನಾಗರಾಜ್ ಯಾದವ್, ಅಬ್ದುಲ್ ಜಬ್ಬರ್ ಹಾಗೂ ಜೆಡಿಎಸ್ ಅಭ್ಯರ್ಥಿ ಟಿ ಎ ಶರವಣ ಅವರು ನಿನ್ನೆ ನಾಮಪತ್ರ ಸಲ್ಲಿಸಿದ್ದಾರೆ. ಕ್ರಮಬದ್ಧವಾಗಿರುವ ಎಲ್ಲಾ ನಾಮಪತ್ರಗಳು ಸ್ವೀಕೃತಗೊಂಡಿವೆ. ಹಾಗಾಗಿ, ಅಧಿಕೃತ ಘೋಷಣೆಯಷ್ಟೇ ಬಾಕಿ ಉಳಿದಿದೆ.
ಓದಿ: ವಿಜಯೇಂದ್ರಗೆ ಟಿಕೆಟ್ ತಪ್ಪಿದರ ಬಗ್ಗೆ ವಿಶೇಷ ಅರ್ಥ ಬೇಡ: ಮುಂದೆ ಬೇರೆ ಅವಕಾಶಗಳಿವೆ- ಬಿಎಸ್ವೈ