ಬೆಂಗಳೂರು: ಕನ್ನಡಪರ ಸಂಘಟನೆಗಳ ವಿರೋಧದ ನಡುವೆಯೂ ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆಗೆ ಅಧಿಕೃತ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರ, 50 ಕೋಟಿ ರೂ. ಅನುದಾನ ಮೀಸಲಿಡಲು ಆದೇಶಿಸಿದೆ. ಇದರ ಜೊತೆಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 2ಎ ಮೀಸಲಾತಿ ಕಲ್ಪಿಸಲಾಗಿದೆ.
ಮರಾಠ ಜನಾಂಗದವರು ಹೆಚ್ಚಿನ ಸಂಖ್ಯೆಯಲ್ಲಿ ಇರುವುದರಿಂದ ಈ ಸಮಾಜದ ಅಭಿವೃದ್ಧಿಗಾಗಿ ಮರಾಠ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು. ಈ ನಿಗಮಕ್ಕೆ 50 ಕೋಟಿ ರೂ. ಅನುದಾನವನ್ನು ಆರ್ಥಿಕ ಇಲಾಖೆ ಸಹಮತಿಯೊಂದಿಗೆ ಮೀಸಲಿಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಹಾಗಾಗಿ ಆರ್ಥಿಕ ಇಲಾಖೆಯ ಸಹಮತಿಯೊಂದಿಗೆ ಅನುದಾನ ಮೀಸಲಿಡುವಂತೆ ಆದೇಶಿಸಿದೆ.
ಮರಾಠ ಸಮಾಜದ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ಧಾರ್ಮಿಕ ಅಭಿವೃದ್ಧಿಗಾಗಿ ಮರಾಠ ಅಭಿವೃದ್ಧಿ ನಿಗಮ ಸ್ಥಾಪಿಸಿ ಆದೇಶಿಸಲಾಗಿದೆ. ಇದುವರೆಗೂ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮರಾಠ ಸಮುದಾಯಕ್ಕೆ ಮೀಸಲಾತಿ ಅವಕಾಶ ಇರಲಿಲ್ಲ. ಈ ಆದೇಶದಲ್ಲಿ ಅದನ್ನು ಉಲ್ಲೇಖ ಮಾಡಿದ್ದು, ಇದು ಗೆಜೆಟ್ ಆದರೆ 2ಎ ಮೀಸಲಾತಿ ಅನ್ವಯ ಆಗುತ್ತದೆ.