ETV Bharat / state

ಒಕ್ಕಲಿಗರ ಅಭಿವೃದ್ಧಿ ನಿಗಮ ಸ್ಥಾಪನೆ: ಮುಖ್ಯಮಂತ್ರಿಗೆ ಸಚಿವರು, ಶಾಸಕರಿಂದ ಅಭಿನಂದನೆ

ಒಕ್ಕಲಿಗರ ಅಭಿವೃದ್ಧಿ ನಿಗಮ ಸ್ಥಾಪನೆ ಘೋಷಣೆ ಮಾಡಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಸಂಪುಟದಲ್ಲಿರುವ ಒಕ್ಕಲಿಗ ಸಮುದಾಯದ ಸಚಿವರು ಶಾಸಕರು ಅಭಿನಂದಿಸಿದ್ದಾರೆ.

Okkaliga Development Corporation
ಮುಖ್ಯಮಂತ್ರಿಗೆ ಸಚಿವರಿಂದ ಅಭಿನಂದನೆ
author img

By

Published : Mar 9, 2021, 1:06 PM IST

ಬೆಂಗಳೂರು: 2021ನೇ ಸಾಲಿನ ಆಯವ್ಯಯದಲ್ಲಿ ಒಕ್ಕಲಿಗರ ಅಭಿವೃದ್ಧಿ ನಿಗಮ ಸ್ಥಾಪನೆ ಘೋಷಣೆ ಮಾಡಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಸಂಪುಟದಲ್ಲಿರುವ ಒಕ್ಕಲಿಗ ಸಮುದಾಯದ ಎಲ್ಲ ಸಚಿವರು, ಶಾಸಕರು ಹಾಗೂ ಮುಖಂಡರು ಅಭಿನಂದಿಸಿದರು.

ವಿಧಾನಸೌಧದಲ್ಲಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ಕಂದಾಯ ಸಚಿವ ಆರ್.ಅಶೋಕ್ ನೇತೃತ್ವದಲ್ಲಿ ಮುಖ್ಯಮಂತ್ರಿಗಳನ್ನು ಸನ್ಮಾನಿಸಿದ ಸಚಿವರು, ನಿಗಮ ಸ್ಥಾಪನೆಗಾಗಿ ಅಭಿನಂದಿಸಿದರಲ್ಲದೆ ಆದಷ್ಟು ಶೀಘ್ರವೇ ನಿಗಮಕ್ಕೆ ಅಧ್ಯಕ್ಷರನ್ನು ನೇಮಕ ಮಾಡುವಂತೆ ಮನವಿ ಮಾಡಿದರು.

ಮುಂಗಡ ಪತ್ರದಲ್ಲಿಯೇ ಒಕ್ಕಲಿಗ ಅಭಿವೃದ್ಧಿ ನಿಗಮವನ್ನು ಘೋಷಣೆ ಮಾಡಿದ ಬಗ್ಗೆ ಸಮುದಾಯದ ಎಲ್ಲ ಸ್ವಾಮೀಜಿಗಳಿಗೆ, ಹಿರಿಯರಿಗೆ, ಮುಖಂಡರಿಗೆ ಸಂತೋಷವಾಗಿದೆ ಎಂಬ ಸಂಗತಿಯನ್ನು ಡಿಸಿಎಂ ಅಶ್ವತ್ಥನಾರಾಯಣ ಅವರು ಮುಖ್ಯಮಂತ್ರಿಗಳ ಗಮನಕ್ಕೆ ತಂದರು.

ಅಭಿನಂದನೆ ಸ್ವೀಕರಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರೂ ಸಂತೋಷ ವ್ಯಕ್ತಪಡಿಸಿದರಲ್ಲದೆ, ಆದಷ್ಟು ಬೇಗ ನೂತನ ನಿಗಮಕ್ಕೆ ಸಮರ್ಥ ಅಧ್ಯಕ್ಷರನ್ನು ನೇಮಕ ಮಾಡುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಸಚಿವರಾದ ಡಾ.ಕೆ.ಸುಧಾಕರ್, ಕೆ.ಗೋಪಾಲಯ್ಯ, ನಾರಾಯಣಗೌಡ, ಮುಖ್ಯಮಂತ್ರಿ ಗಳ ರಾಜಕೀಯ ಕಾರ್ಯದರ್ಶಿ ಜೀವರಾಜ್, ಶಾಸಕರಾದ ಕೆ.ಜೆ.ಬೋಪಯ್ಯ, ಅರಗ ಜ್ಞಾನೇಂದ್ರ, ಡಾ.ರಾಜೇಶ್ ಗೌಡ, ಮಸಾಲೆ ಜಯರಾಂ, ಪರಿಷತ್ ಸದಸ್ಯ ಪುಟ್ಟಣ್ಣ ಮುಂತಾದವರು ಇದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.