ಬೆಂಗಳೂರು: ಲಾಕ್ಡೌನ್ ಸಂದರ್ಭದಲ್ಲಿ ಪರಿಹಾರ ಘೋಷಣೆಗೆ ಆಟೋ, ಟ್ಯಾಕ್ಸಿ ಚಾಲಕರು ಪಟ್ಟು ಹಿಡಿದಿದ್ದಾರೆ. ಜನತಾ ಕರ್ಫ್ಯೂ ವೇಳೆ ವಾಹನಗಳು ಹಾಗೆ ನಿಂತಿವೆ. ಇಂದಿನಿಂದ 14 ದಿನಗಳ ಕಾಲ ಲಾಕ್ಡೌನ್ ಜಾರಿಯಾಗುತ್ತದೆ. ನಿತ್ಯ ದುಡಿಮೆ ಇಲ್ಲದೆ ಚಾಲಕರು ಮನೆಯಲ್ಲಿದ್ದು, ವಾಹನ ಸಾಲ ಮರುಪಾವತಿ ಮಾಡೋಕೆ ಆಗದೆ ಸಂಕಷ್ಟದಲ್ಲಿದ್ದಾರೆ ಎಂದು ಓಲಾ, ಉಬರ್ ಚಾಲಕರ ಸಂಘದ ಅಧ್ಯಕ್ಷ ತನ್ವೀರ್ ಹೇಳಿದ್ದಾರೆ.
ಮಾನವೀಯತೆ ದೃಷ್ಟಿಯಿಂದ ಲಾಕ್ಡೌನ್ ಪರಿಹಾರವನ್ನು ಸರ್ಕಾರ ಘೋಷಣೆ ಮಾಡಬೇಕು. ಆಟೋ, ಟ್ಯಾಕ್ಸಿ ಚಾಲಕರ ಬದುಕನ್ನ ಉಳಿಸಿ ಎಂದು ಕೇಳಿಕೊಂಡಿದ್ದಾರೆ.
ದವಸ-ಧಾನ್ಯಗಳನ್ನು ಸರ್ಕಾರ ಸರಬರಾಜು ಮಾಡಬೇಕು. ಎರಡು ತಿಂಗಳ ರೇಷನ್ಅನ್ನು ಸರ್ಕಾರವೇ ವಿತರಣೆ ಮಾಡಬೇಕು ಹಾಗೂ ಪ್ರತಿ ಚಾಲಕರಿಗೆ 10 ಸಾವಿರ ರೂ. ಪರಿಹಾರ ಘೋಷಣೆ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಅವರು ಒತ್ತಾಯಿಸಿದ್ದಾರೆ.
ಸಾಲಗಳ ಮೇಲೆ ಬಡ್ಡಿ ಮನ್ನಾ ಮಾಡಿ, ಬೇರೆ ರಾಜ್ಯಗಳಲ್ಲಿ ಪರಿಹಾರ ಘೋಷಣೆ ಮಾಡಲಾಗಿದೆ. ನಮ್ಮ ರಾಜ್ಯದಲ್ಲಿಯೂ ಈ ಸಂಕಷ್ಟದ ಸಂದರ್ಭದಲ್ಲಿ ಪರಿಹಾರ ಘೋಷಣೆ ಮಾಡಿ ಎಂದು ತನ್ವೀರ್ ಮನವಿ ಮಾಡಿದ್ದಾರೆ.
ಇದನ್ನೂ ಓದಿ: ರಾಜ್ಯದಲ್ಲಿ ಇಂದಿನಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ: ಎಸ್ಎಂಎಸ್ ಬಂದವರಿಗೆ ಮಾತ್ರ ಅವಕಾಶ