ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಮದುರೆ ಕೆರೆಯಲ್ಲಿ ಅಪರಿಚಿತ ವೃದ್ಧೆಯ ಶವ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.
ಮೃತ ವೃದ್ಧೆಯ ಕುರಿತಾದ ಯಾವುದೆ ಮಾಹಿತಿ ಲಭ್ಯವಾಗಿಲ್ಲ. ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶನಿ ಮಹಾತ್ಮ ದೇವಸ್ಥಾನದ ಪಕ್ಕದ ಕೆರೆಯಲ್ಲಿ ಮೃತ ದೇಹ ಪತ್ತೆಯಾಗಿದ್ದು, ಯಾರೋ ದುಷ್ಕರ್ಮಿಗಳು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ದೊಡ್ಡಬೆಳವಂಗಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.