ಬೆಂಗಳೂರು: ನಗರದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಕೋವಿಡ್-19 ಸೋಂಕಿನ ಹೊಸ ರೂಪಾಂತರಿ ಒಮಿಕ್ರಾನ್ ತಳಿ ಸಹ ಹೆಚ್ಚಾಗಿ ಪತ್ತೆಯಾಗುತ್ತಿದೆ.
ಪಾಲಿಕೆಯ ವ್ಯಾಪ್ತಿಯಲ್ಲಿರುವ ನರ್ಸಿಂಗ್ ಕಾಲೇಜ್, ಇನ್ನಿತರ ಸಂಬಂಧಪಟ್ಟ ಹಾಸ್ಟೆಲ್ ಹಾಗು ಪಿ. ಜಿ ಗಳಲ್ಲಿರುವ ವಿದ್ಯಾರ್ಥಿಗಳು, ಸಿಬ್ಬಂದಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್-19 ಪ್ರಕರಣಗಳು ವರದಿಯಾಗುತ್ತಿರುವುದು ಕೂಡಾ ಕಂಡು ಬರುತ್ತಿದೆ.
ಹೀಗಾಗಿ, ವಿದ್ಯಾರ್ಥಿಗಳಲ್ಲಿ ಸೋಂಕು ದೃಢಪಟ್ಟರೆ, ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮತ್ತು ಎರಡು ಡೋಸ್ ಲಸಿಕೆ ತೆಗೆದುಕೊಂಡಿರುವ ಬಗ್ಗೆ ಆಯಾ ಕಾಲೇಜಿನ ಆಡಳಿತ ಮಂಡಳಿಯಿಂದ ನಿರಂತರ ನಿಗಾವಹಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು.
ಒಂದು ವೇಳೆ ಸದರಿ ಕಾಲೇಜು, ಹಾಸ್ಟೆಲ್ ಹಾಗು ಪಿ.ಜಿ ಗಳಲ್ಲಿ ಹೆಚ್ಚಿನ ಪಕರಣಗಳು ವರದಿಯಾದಲ್ಲಿ, ಮುಚ್ಚುವ ಬಗ್ಗೆ ನಿರ್ಧಾರ ಕೈಗೊಳ್ಳಬೇಕು ಎಂದು ಪಾಲಿಕೆಯ ಎಲ್ಲಾ ವಲಯ ಆಯುಕ್ತರಿಗೆ ಮುಖ್ಯ ಆಯುಕ್ತರು ಆದೇಶಿಸಿದ್ದಾರೆ.
ಓದಿ: ಮಂತ್ರಿ ಮಾಲ್ ತೆರಿಗೆ ವಿವಾದ: ಸಿವಿಲ್ ದಾವೆ ದಾಖಲಿಸಲು ಬಿಬಿಎಂಪಿಗೆ ಹೈಕೋರ್ಟ್ ಸಲಹೆ