ಹೊಸ ಪ್ರತಿಭೆಗಳು ಸಿದ್ಧಪಡಿಸಿರುವ 'ಓಮಿನಿ' ಚಲನಚಿತ್ರದ ಟ್ರೈಲರ್ ಅನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಬಳಿಕ ಮಾತನಾಡಿದ ಅವರು, "ತೀರ್ಥಹಳ್ಳಿ ಸುಂದರವಾದ ಊರು. ಅಲ್ಲಿನ ಗಾಳಿ, ನೀರಿಗೆ ಏನೋ ಅದ್ಭುತ ಶಕ್ತಿ ಇದೆ. ರಾಷ್ಟ್ರಕವಿ ಕುವೆಂಪು, ಮಾಜಿ ಮುಖ್ಯಮಂತ್ರಿ ಕಡಿದಾಳ್ ಮಂಜಪ್ಪ ಸೇರಿದಂತೆ ಅನೇಕ ಗಣ್ಯರು ನಮ್ಮ ತಾಲ್ಲೂಕಿನವರು ಎಂದು ಹೇಳಿಕೊಳ್ಳಲು ಹೆಮ್ಮೆಯಾಗುತ್ತದೆ. ಈ ಓಮಿನಿ ಚಿತ್ರದ ನಿರ್ದೇಶಕ ಮಂಜು ಕೂಡ ನಮ್ಮೂರಿನವರೇ. ಚಿತ್ರಕ್ಕೆ ಒಳ್ಳೆಯದಾಗಲಿ" ಎಂದು ಹಾರೈಸಿದರು.
ನಿರ್ದೇಶಕ ಮಂಜು ಮಾತನಾಡಿ, "ಓಮಿನಿ ಎಂದರೆ ಲ್ಯಾಟಿನ್ ಭಾಷೆಯಲ್ಲಿ ಎಲ್ಲಾ ಎಂದು ಅರ್ಥ. ಆದರೆ ಓಮಿನಿ ಕಾರ್ ಸಹ ನಮ್ಮ ಚಿತ್ರದಲ್ಲಿ ಪ್ರಮುಖ ಪಾತ್ರವಹಿಸಿದೆ. ಇದು ನನ್ನ ಪಾಲಿಗೆ ಅತೀ ದೊಡ್ಡ ಸಮಾರಂಭ. ನಮ್ಮೂರಿನವರೇ ಆದ ಗೃಹ ಸಚಿವರು ಕಾರ್ಯಕ್ರಮಕ್ಕೆ ಬಂದಿರುವುದು ಸಂತಸ ತಂದಿದೆ" ಎಂದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್, ರವಿಸಿಂಗ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು. ಶ್ರೀ ಬೆಳ್ಳುಡಿ ಫಿಲಂಸ್ ಹಾಗೂ ಎಸ್.ಆರ್.ಗ್ರೂಪ್ಸ್ ಅಡಿ ಚಿತ್ರ ನಿರ್ಮಾಣವಾಗಿದೆ. ಮಂಜು ಹೆದ್ದೂರ್ ಕಥೆ ಬರೆದು ನಿರ್ದೇಶಿಸಿದ್ದಾರೆ. ಅರ್ಜುನ್ ರಾಮು ಸಂಗೀತ ನಿರ್ದೇಶನ ಹಾಗೂ ಎಂ.ಬಿ.ಅಳ್ಳಿಕಟ್ಟಿ ಛಾಯಾಗ್ರಹಣ ಚಿತ್ರಕ್ಕಿದೆ. ಗೀತರಚನೆಕಾರ ಪ್ರಮೋದ್ ಮರವಂತೆ ಹಾಡುಗಳನ್ನು ರಚಿಸಿದ್ದಾರೆ. ಆಗಸ್ಟ್ 19 ರಂದು ರಾಜ್ಯಾದ್ಯಂತ ಓಮಿನಿ ಸಂಚಾರ ಆರಂಭಿಸಲಿದೆ.
ಇದನ್ನೂ ಓದಿ: ಕೆಂಪು ಬಟ್ಟೆಯಲ್ಲಿ ರಶ್ಮಿಕಾ... ನೀವು ಸಖತ್ ಹಾಟ್ ಎಂದ ನೆಟಿಜನ್ಸ್!