ನೆಲಮಂಗಲ: ಓಮಿನಿ ಕಾರಿನ ಇಂಜಿನ್ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಹೆದ್ದಾರಿಯಲ್ಲೇ ಧಗಧಗನೆ ಉರಿದಿರುವ ಘಟನೆ ಕುಣಿಗಲ್ ವೃತ್ತದಲ್ಲಿ ನಡೆದಿದೆ.
ಅದೃಷ್ಟವಶಾತ್ ಕಾರಿನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದರು. ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.