ETV Bharat / state

ಸೆ.25ರಂದು ಎಲ್ಲ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಉಸ್ತುವಾರಿ ಸಚಿವರ ನೇತೃತ್ವದಲ್ಲಿ 'ಜನತಾ ದರ್ಶನ'ಕ್ಕೆ ಸೂಚನೆ - public grievances

ಸಾರ್ವಜನಿಕರ ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಆಲಿಸಿ ಸೂಕ್ತ ಪರಿಹಾರವನ್ನು ಒದಗಿಸುವ ನಿಟ್ಟಿನಲ್ಲಿ ಜಿಲ್ಲಾ ಸಚಿವರ ನೇತೃತ್ವದಲ್ಲಿ ಪ್ರತಿ ತಿಂಗಳು 'ಜನತಾ ದರ್ಶನ' ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ.

Etv Bharat
Etv Bharat
author img

By ETV Bharat Karnataka Team

Published : Sep 16, 2023, 10:49 PM IST

ಬೆಂಗಳೂರು: ಎಲ್ಲ ಜಿಲ್ಲೆಗಳಲ್ಲಿ ಸೆ.25 ರಂದು ಏಕಕಾಲದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಜನತಾ ದರ್ಶನ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಸಚಿವರ ನೇತೃತ್ವದಲ್ಲಿ ಸಂಬಂಧಿಸಿದ ಚುನಾಯಿತ ಪ್ರತಿನಿಧಿಗಳನ್ನು ಒಳಗೊಂಡಂತೆ ಶಿಷ್ಠಾಚಾರಕ್ಕೆ, ಅನುಗುಣವಾಗಿ ಜನತಾ ದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವಂತೆ ನಿರ್ದೇಶನ ನೀಡಲಾಗಿದೆ.

ಈ ಸಂಬಂಧ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಲ್ಲಾ, ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಿಕೊಂಡು, ವ್ಯವಸ್ಥಿತವಾಗಿ ಹಾಗೂ ಜವಾಬ್ದಾರಿಯುತವಾಗಿ ನಡೆಸುವ ಕುರಿತು ಸೂಕ್ತ ಕ್ರಮವಹಿಸಲು ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್ ಸೂಚಿಸಿದ್ದಾರೆ.

ಜಿಲ್ಲೆಯಲ್ಲೂ ಪ್ರತಿ ತಿಂಗಳು 'ಜನತಾ ದರ್ಶನ': ರಾಜ್ಯದ ವಿವಿಧ ಭಾಗಗಳಿಂದ ನಾಗರಿಕರು ಬೆಂಗಳೂರಿಗೆ ಆಗಮಿಸಿ ಹಲವಾರು ರೀತಿಯ ಸಮಸ್ಯೆಗಳನ್ನು ಕುರಿತು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಅಹವಾಲುಗಳನ್ನು ಸಲ್ಲಿಸುತ್ತಿದ್ದಾರೆ. ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಆಲಿಸಿ ಸೂಕ್ತ ಪರಿಹಾರವನ್ನು ಒದಗಿಸುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲಿಯೂ, ಜಿಲ್ಲಾ ಸಚಿವರ ನೇತೃತ್ವದಲ್ಲಿ ಪ್ರತಿ ತಿಂಗಳು 'ಜನತಾ ದರ್ಶನ' ಕಾರ್ಯಕ್ರಮ ಹಮ್ಮಿಕೊಂಡು ಜನರ ಅಹವಾಲುಗಳನ್ನು ಆಲಿಸಿ ಸಮಸ್ಯೆಗಳಿಗೆ ಪರಿಹಾರೋಪಾಯಗಳನ್ನು ಒದಗಿಸಲು ನಿರ್ಧರಿಸಲಾಗಿದೆ.

ಜಿಲ್ಲಾ ಕಾಸ್ತುವಾರಿ ಕಾರ್ಯದರ್ಶಿಗಳು ಆಯಾ ಜಿಲ್ಲಾಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿಕೊಂಡು ಅಂದು ದಿನದಂದು ನಡೆಯಲಿರುವ ಜನತಾ ದರ್ಶನ ಕಾರ್ಯಕ್ರಮಕ್ಕೆ ರೂಪುರೇಷೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಜಿಲ್ಲಾಡಳಿತ ಆಯಾ ಜಿಲ್ಲೆಯ ಜನರಿಗೆ ಜನತಾ ದರ್ಶನ ನಡೆಯುವ ಸ್ಥಳ, ವೇಳೆ ಇತ್ಯಾದಿಗಳನ್ನು ಜಾಹೀರಾತು ಮುಖಾಂತರ ಮುಂಚಿತವಾಗಿಯೇ ತಿಳಿಸಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಲಾಗಿದೆ.

ಆ ದಿನದಂದು ಎಲ್ಲ ಜಿಲ್ಲಾ ಮಟ್ಟದ ಹಾಗೂ ಪ್ರತಿ ಇಲಾಖೆಯ ಸಂಬಂಧಿಸಿದ ಅಧಿಕಾರಿಗಳು ಹಾಜರಿದ್ದು, ಸಾರ್ವಜನಿಕರಿಂದ ಸ್ವೀಕೃತವಾದ ಎಲ್ಲ ಅರ್ಜಿಗಳು/ಮನವಿಗಳನ್ನು ಈಗಾಗಲೇ ಚಾಲ್ತಿಯಲ್ಲಿರುವ (Integrated Public Grievance Redressal System) ತಂತ್ರಾಂಶದಲ್ಲಿ ದಾಖಲಿಸಬೇಕು ಹಾಗೂ ಅರ್ಜಿಗಳ ವಿಲೇವಾರಿಯನ್ನು ನಿರ್ವಹಿಸಬೇಕು. ಸಂಬಂಧಿಸಿದ ಅರ್ಜಿಗಳನ್ನು ಬಹಳ ಜಾಗೃತೆಯಿಂದ ಹಾಗೂ ಸಹಾನುಭೂತಿಯಿಂದ ಪರಿಶೀಲಿಸಿ ನಿಗದಿತ ಕಾಲಾವಧಿಯೊಳಗೆ ನಿಯಮಾನುಸಾರ ಪರಿಹಾರೋಪಾಯಗಳನ್ನು ಒದಗಿಸುವ ಕುರಿತು ಅಗತ್ಯ ಕ್ರಮ ವಹಿಸಬೇಕು ಎಂದು ತಿಳಿಸಲಾಗಿದೆ.

ಪ್ರತಿ ಮಾಹೆಯಲ್ಲಿಯೂ ಜಿಲ್ಲಾ ಮಟ್ಟದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕು. ಜಿಲ್ಲಾಧಿಕಾರಿಗಳು ಪ್ರತಿ 15 ದಿನಗಳಿಗೊಮ್ಮೆ ತಮ್ಮ ಜಿಲ್ಲಾ ವ್ಯಾಪ್ತಿಯ ಒಂದು ತಾಲ್ಲೂಕನ್ನು ಆಯ್ಕೆ ಮಾಡಿಕೊಂಡು ತಾಲ್ಲೂಕು ಮಟ್ಟದಲ್ಲಿ ಜನತಾದರ್ಶನ ಕಾರ್ಯಕ್ರಮವನ್ನು ನಡೆಸಬೇಕು ಎಂದು ಸೂಚಿಸಿದೆ.

ಇದನ್ನೂ ಓದಿ: ನೀವು ಕಟ್ಟುವ ಸಂಚಾರಿ ನಿಯಮ ಉಲ್ಲಂಘನೆಯ ದಂಡದ ಹಣ ನೇರ ಸರ್ಕಾರದ ಖಜಾನೆಗೆ.. ಕನ್ನಡ ರಾಜ್ಯೋತ್ಸವ ದಿನದಿಂದ ಅನುಷ್ಠಾನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.