ಬೆಂಗಳೂರು: ನಗರದ ಮೆಡಿಕಲ್ ಕಾಲೇಜ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ವಿವಿ ಪುರಂ ಪೊಲೀಸರು ಯಶಸ್ವಿಯಾಗಿದ್ದಾರೆ.
ಆಂಧ್ರಪ್ರದೇಶದ ಕಡಪ ತಾಲೂಕಿನ ಗೊಂಡಿಪಲ್ಲಿ ನಿವಾಸಿ ವಂಶಿ ಬಂಧಿತ ಆರೋಪಿ. ಈತ ವಿವಿ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಮೆಡಿಕಲ್ ಕಾಲೇಜು ಬಳಿ ವಿದ್ಯಾರ್ಥಿಗಳಿಗೆ ಹಾಗೂ ಇತರೆ ಗಿರಾಕಿಗಳಿಗೆ ಗಾಂಜಾ ಮಾರಾಟ ಮಾಡಲು 8 ಲಕ್ಷ ರೂ. ಮೌಲ್ಯದ ಗಾಂಜಾವನ್ನು ಬಸ್ ಮೂಲಕ ತಂದಿದ್ದನು.
ಈ ಕುರಿತು ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, ಆರೋಪಿ ಹಾಗೂ ಆತನ ಬಳಿ ಇದ್ದ 10 ಕೆ.ಜಿ ಗಾಂಜಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ವಿವಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
ಇನ್ನು ಆರೋಪಿ ಅಧಿಕ ಹಣ ಗಳಿಸುವ ಉದ್ದೇಶದಿಂದ ಗಾಂಜಾ ಮಾರಾಟ ಮಾಡುತ್ತಿರುವುದಾಗಿ ಜೊತೆಗೆ ತಾನು ಗಾಂಜಾ ವ್ಯಸನಿಯಾಗಿರುವ ಬಗ್ಗೆ ಬಾಯಿಬಿಟ್ಟಿದ್ದಾನೆ.