ಬೆಂಗಳೂರು: ಇಂದು ರಾಜ್ಯದಲ್ಲಿ ಮತ್ತೊಂದು ಕೊರೊನಾ ಪ್ರಕರಣ ದಾಖಲಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 501ಕ್ಕೆ ಏರಿಕೆಯಾಗಿದೆ.
ನಿನ್ನೆ ಒಂದೇ ದಿನ 26 ಪ್ರಕರಣಗಳು ಪತ್ತೆಯಾಗಿ 500 ರ ಗಾಡಿ ದಾಟಿತ್ತು. ಆದರೆ ಒಂದು ಪ್ರಕರಣ ಪತ್ತೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ 47 ವರ್ಷದ ಮಹಿಳೆಗೆ ಕೊರೊನಾ ಪಾಸಿಟಿವ್ ಬಂದಿದೆ. ರೋಗಿ ನಂ-432 ಸಂಪರ್ಕದಿಂದ ಮಹಿಳೆಗೆ ಸೋಂಕು ತಲುಪಿದೆ ಎನ್ನಲಾಗುತ್ತಿದೆ.
ಈ ಮೂಲಕ ರಾಜ್ಯದಲ್ಲಿ ಸೋಂಕಿತ ಪ್ರಕರಣಗಳ ಸಂಖ್ಯೆ 501ಕ್ಕೆ ತಲುಪಿದ್ದು, 18 ಜನರು ಸಾವನ್ನಪ್ಪಿದ್ದಾರೆ. 177 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.