ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಒಂದೇ ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿದೆ. 27 ವರ್ಷದ ಮಹಿಳೆಗೆ ಸೋಂಕು ತಗುಲಿದ್ದು ಅಂತಾರಾಷ್ಟ್ರೀಯ ಪ್ರಯಾಣದ (ಯುಕೆ) ಹಿನ್ನೆಲೆ ಹೊಂದಿದ್ದಾರೆ.
ಇನ್ನು ರಾಜ್ಯದಲ್ಲಿ ಇಂದು 130 ಕೊರೊನಾ ಪಾಸಿಟಿವ್ ಕೇಸ್ಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 2,089ಕ್ಕೆ ಏರಿಕೆಯಾಗಿದೆ. ಈವರೆಗೆ 654 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, 17 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು ಅಂತಾರಾಷ್ಟ್ರೀಯ ಪ್ರಯಾಣಿಕರಿಬ್ಬರು, ಅಂತಾರಾಜ್ಯ 105 ಮಂದಿ ಪ್ರಯಾಣಿಕರುಗಳಿಗೆ ಪಾಸಿಟಿವ್ ಬಂದಿದೆ. 1,391 ಜನರು ನಿಗಧಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ರಾಜ್ಯದಲ್ಲಿ ಈವರೆಗೆ 2,06,313 ಮಂದಿಯ ಸ್ಯಾಂಪಲ್ ಟೆಸ್ಟ್ ಮಾಡಲಾಗಿದೆ. 12,802 ಮಂದಿ ಪ್ರಾಥಮಿಕ ಹಾಗೂ 13,341 ಮಂದಿ ದ್ವಿತೀಯ ಸಂಪರ್ಕದಲ್ಲಿದ್ದಾರೆ.