ಬೆಂಗಳೂರು: ಎಂಎಸ್ಐಎಲ್ನಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಒಂದು ಕೋಟಿ ರೂ.ಗಳ ದೇಣಿಗೆಯ ಚೆಕ್ನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಸಂಸ್ಥೆಯ ಅಧ್ಯಕ್ಷ ಹರತಾಳು ಹಾಲಪ್ಪ ಹಸ್ತಾಂತರಿಸಿದರು.
ಶಕ್ತಿ ಭವನದಲ್ಲಿ ಹಾಲಪ್ಪ ಭೇಟಿಯಾದ ವೇಳೆ ಸಿಎಂ ಎಂಎಸ್ಐಎಲ್ ಕ್ಯಾಲೆಂಡರ್ ಬಿಡುಗಡೆ ಮಾಡಿದರು.
ಈ ವೇಳೆ, ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಹೆಚ್.ಪಿ.ಪ್ರಕಾಶ್, ಹಿರಿಯ ಸಾಹಿತಿ ಚಂದ್ರಶೇಖರ್ ಕಂಬಾರ ಉಪಸ್ಥಿತರಿದ್ದರು.