ಬೆಂಗಳೂರು: ವಾಯು ಪಡೆ ಕೇಂದ್ರದ ಕಾಂಪೌಂಡ್ ಗೋಡೆ ಕುಸಿದು ಬಿದ್ದು ಓರ್ವ ಸಾವನ್ನಪ್ಪಿದ್ದು, ಮತ್ತಿಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ಬೆಂಗಳೂರಿನ ಜಾಲಹಳ್ಳಿಯ ಅಯ್ಯಪ್ಪ ದೇವಸ್ಥಾನದ ಬಳಿ ನಡೆದಿದೆ.
ಈ ದುರ್ಘಟನೆಯಲ್ಲಿ ಪರಮೇಶ್ ಎಂಬುವವರು ಸಾವನ್ನಪ್ಪಿದ್ದು, ವರುಣ್ ಮತ್ತು ಕಲ್ಯಾಣಿ ಎಂಬುವವರಿಗೆ ಗಂಭೀರ ಗಾಯಗಳಾಗಿವೆ. ಇಂದು ಮಧ್ಯಾಹ್ನ ಏಕಾಏಕಿ ವಾಯು ಪಡೆ ಕೇಂದ್ರದ ಕಾಂಪೌಂಡ್ ಗೋಡೆ ಕುಸಿದಿರುವ ಕಾರಣ ಅಲ್ಲೇ ನಿಂತಿದ್ದ ಮೂವರ ಮೇಲೆ ಕಲ್ಲುಗಳು ಬಿದ್ದಿವೆ. ಸ್ಥಳಕ್ಕೆ ಸ್ಥಳೀಯ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಬಂದು ರಕ್ಷಣಾ ಕಾರ್ಯ ಮಾಡಿದ್ದು, ಏರ್ಫೋರ್ಸ್ ಅಧಿಕಾರಿಗಳ ವಿರುದ್ಧ ಸ್ಥಳೀಯರು ತೀವ್ರ ಅಕ್ರೋಶ ಹೊರ ಹಾಕಿದ್ದಾರೆ. ಜಾಲಹಳ್ಳಿಯಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.