ಬೆಂಗಳೂರು: ಅತಿವೃಷ್ಟಿಯಿಂದ ತತ್ತರಿಸಿರುವ ಉತ್ತರ ಕರ್ನಾಟಕ ಭಾಗದ ಪರಿಹಾರ ಕಾರ್ಯಕ್ಕಾಗಿ ಜೆಡಿಎಸ್ ಪಕ್ಷದ ಎಲ್ಲಾ ಶಾಸಕರು ನಮ್ಮ ಒಂದು ತಿಂಗಳ ಸಂಬಳವನ್ನು ನೀಡುತ್ತಿದ್ದೇವೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕಷ್ಟದ ಸಂದರ್ಭದಲ್ಲಿ ಉತ್ತರ ಕರ್ನಾಟಕದ ಅಣ್ಣ-ತಮ್ಮಂದಿರೊಂದಿಗೆ ನಿಲ್ಲೋಣ ಎಂದಿದ್ದಾರೆ.
ಕುಮಾರಸ್ವಾಮಿ ಅವರು ಬೆಳಗಾವಿ, ರಾಯಚೂರು, ಹಾಸನ, ಕೊಡಗು ಹಾಗೂ ಬಾಗಲಕೋಟೆ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿ ಪ್ರವಾಹ ಪೀಡಿತ ಪ್ರದೇಶಗಳ ಬಗ್ಗೆ ಮಾಹಿಸಿ ಪಡೆದುಕೊಂಡಿದ್ದಾರೆ.
ಸಂಕಷ್ಟದ ಪರಿಸ್ಥಿತಿಯನ್ನು ನಿಭಾಯಿಸಲು ಹಗಲಿರುಳು ಶ್ರಮಪಡುತ್ತಿರುವ ಅಧಿಕಾರಿಗಳು ಹಾಗೂ ವಿವಿಧ ಸಂಸ್ಥೆಗಳನ್ನು ಇದೇ ವೇಳೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅಭಿನಂದಿಸಿದ್ದಾರೆ.